Google Search: ವಿರಾಟ್‌ಗೆ ಈ ವರ್ಷ ಅತಿ ಹೆಚ್ಚು ಹುಡುಕಿದ ಕ್ರಿಕೆಟ್ ಆಟಗಾರ ಎಂಬ ಹೆಗ್ಗಳಿಕೆ
ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಸದ್ಯ ಭಾರೀ ಚರ್ಚೆಯಲ್ಲಿದ್ದಾರೆ. ಇವರು ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರ ಕಣಕ್ಕೆ ಇಳಿಯುತ್ತಿದ್ದು, ಬ್ಯಾಟಿಂಗ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ತಮ್ಮ ಭರ್ಜರಿ ಬ್ಯಾಟಿಂಗ್‌ನಿಂದ ತಂಡಕ್ಕೆ ನೆರವಾಗುತ್ತಿರುವ ವಿರಾಟ್ ಪ್ರಸಕ್ತ ವರ್ಷ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡಕಲ್ಪಟ್ಟ ಕ್ರಿಕೆಟ್ ಆಟಗಾರ ಎಂಭ ಖ್ಯಾತಿಯನ್ನು ಪಡೆದಿದ್ದಾರೆ.
ವಿರಾಟ್ ಕೊಹ್ಲಿ ಅವರನ್ನು ಟಿ20 ವಿಶ್ವಕಪ್‌ನಲ್ಲಿ ಸೇರಿಸಿಕೊಳ್ಳಬೇಕಾ ಬೇಡವಾ ಎಂಬ ಪ್ರಶ್ನೆಗಳು ಉದ್ಭವಿಸಿದ ಬೆನ್ನಲ್ಲೆ ಅವರ ಫಾರ್ಮ್‌ನಿಂದ ಅಬ್ಬರಿಸುತ್ತಿದ್ದಾರೆ. ಅಪ್‌ಡೇಟ್ ವರ್ಷನ್‌ನಲ್ಲಿ ಕಾಣಿಸಿಕೊಂಡಿರುವ ವಿರಾಟ್ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣಬಡಿಸಿದ್ದಾರೆ. ವಿರಾಟ್, ಪಂಜಾಬ್ ವಿರುದ್ಧ ಆಡಿದ ಧಾಟಿಯನ್ನು ಕಂಡು ಅಭಿಮಾನಿಗಳು ಸಹ ಫುಲ್ ಮಾರ್ಕ್ಸ್ ನೀಡಿದ್ದಾರೆ. ಈಗ ಇವರ ಸಾಧನೆಗೆ ಮತ್ತೊಂದು ಗರಿ ಸಂದಿದೆ.

ಕ್ರಿಕೆಟ್ ಅಂಗಳದಲ್ಲಿ ಹಾಗೂ ಹೊರಗೆ ಇವರು ಸಖತ್ ಫೇಮಸ್.. ಇವರ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಅದೆಷ್ಟೋ ಕ್ರಿಕೆಟ್ ಆಟಗಾರರಿಗೆ ವಿರಾಟ್ ರೋಲ್ ಮಾಡಲ್.. ಮೈದಾನದ ಹೊರಗೂ ಸಹ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ಈ ವರ್ಷ ಅತಿ ಹೆಚ್ಚು ಗೂಗಲ್ ಮಾಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಈ ವರ್ಷ ಇದುವರೆಗೆ 64 ಮಿಲಿಯನ್ ಬಳಕೆದಾರರು ಗೂಗಲ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಹುಡುಕಿದ್ದಾರೆ.
ಅಂಕಿಅಂಶಗಳ ಪ್ರಕಾರ ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ ಮತ್ತು ರೋಹಿತ್ ಶರ್ಮಾ ಹೆಸರುಗಳು ಈ ಪಟ್ಟಿಯಲ್ಲಿ ಟಾಪ್-3 ರಲ್ಲಿವೆ. ಆದರೆ ವಿರಾಟ್ ಕೊಹ್ಲಿಗೆ ಹೋಲಿಸಿದರೆ ಮಹೇಂದ್ರ ಸಿಂಗ್ ಧೋನಿ ಮತ್ತು ರೋಹಿತ್ ಶರ್ಮಾ ಅವರನ್ನು ಅರ್ಧದಷ್ಟು ಜನರು ಹುಡುಕಿದ್ದಾರೆ.

ಯಾವ ಸ್ಥಾನದಲ್ಲಿದ್ದಾರೆ ಕೂಲ್ ಕ್ಯಾಪ್ಟನ್
ಸಿಎಸ್‌ಕೆ ತಂಡವನ್ನು ಮುನ್ನಡೆಸುತ್ತಿರುವ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಐಸಿಸಿ ಮೂರೂ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಎಂಎಸ್ ಧೋನಿ ಅವರನ್ನು ಈ ವರ್ಷ ಇಲ್ಲಿಯವರೆಗೆ 29 ಮಿಲಿಯನ್ ಜನರು ಗೂಗಲ್‌ನಲ್ಲಿ ಹುಡುಕಿದ್ದಾರೆ.
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಈ ವರ್ಷ ಇಲ್ಲಿಯವರೆಗೆ 28 ಮಿಲಿಯನ್ ಜನರು ರೋಹಿತ್ ಶರ್ಮಾ ಅವರನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ.
ಭರ್ಜರಿ ಫಾರ್ಮ್
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಮೊದಲ 2 ಪಂದ್ಯಗಳಲ್ಲಿ 49 ರ ಅತ್ಯುತ್ತಮ ಸರಾಸರಿಯಲ್ಲಿ 98 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 21 ರನ್, ಪಂಜಾಬ್ ಕಿಂಗ್ಸ್ ವಿರುದ್ಧ 49 ಎಸೆತಗಳಲ್ಲಿ 77 ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications