ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಆಟಗಾರರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಮಾಲೀಕರು ಲೆಕ್ಕಾಚಾರ ಆರಂಭಿಸಿದ್ದಾರೆ. ಈ ಹರಾಜಿಗೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಖುಷಿ ಸುದ್ದಿಯೊಂದು ದಕ್ಷಿಣ ಆಫ್ರಿಕಾದಿಂದ ಬಂದಿದೆ.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ ಅವರಿಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಭರ್ಜರಿ ಪ್ರದರ್ಶನ ನೀಡಿ 5 ವಿಕೆಟ್ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.

ಪ್ರಸಿದ್ಧ್ ಕೃಷ್ಣ ಐಪಿಎಲ್ 2024 ರ ಮೊದಲು ಫಾರ್ಮ್‌ಗೆ ಮರಳಿದ್ದಾರೆ. ಪ್ರಸಿದ್ಧ ಕೃಷ್ಣ ಭಾರತ ಎ ತಂಡದ ಪರ ಅಮೋಘ ಬೌಲಿಂಗ್ ದಾಳಿಯನ್ನು ನಡೆಸಿದರು. ಇವರ ಆಕರ್ಷಕ ಬೌಲಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ಕಂಗಾಲಾಯಿತು. ಇವರ ಏಕಾಂಗಿ ದಾಳಿಯ ನೆರವಿನಿಂದ ಅರ್ಧ ದಕ್ಷಿಣ ಆಫ್ರಿಕಾ ತಂಡ ಪೆವಿಲಿಯನ್ ಸೇರಿಸಿತು.
ದಕ್ಷಿಣ ಆಫ್ರಿಕಾ ಎ ವಿರುದ್ಧ ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ ಪ್ರಸಿದ್ಧ್ ಕೃಷ್ಣ ಇತಿಹಾಸ ನಿರ್ಮಿಸಿದ್ದಾರೆ. ಕೃಷ್ಣ ಅವರು ಭಾರತ-ಎ ಪರ ಆಡಿ ಪ್ರಥಮ ದರ್ಜೆಯ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಪ್ರಸಿದ್ಧ್ ಕೃಷ್ಣ ಐಪಿಎಲ್ 2024 ರ ಮೊದಲು ಫಾರ್ಮ್‌ಗೆ ಮರಳಿದರು. ಪ್ರಸಿದ್ಧ್ ಕೃಷ್ಣ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ರುಬೆನ್ ಹರ್ಮನ್ ಮತ್ತು ಜೀನ್ ಡು ಪ್ಲೆಸಿಸ್ ಅವರ ಬ್ಯಾಟಿಂಗ್ ನೆರವಿನಿಂದ ಆಫ್ರಿಕಾ ಎ ಎರಡನೇ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತ್ತು. ಇದಾದ ಬಳಿಕ ಮೂರನೇ ದಿನದಾಟದ ಆರಂಭದೊಂದಿಗೆ ಪ್ರಸಿದ್ಧ್ ಕೃಷ್ಣ ಅವರು ಆಫ್ರಿಕಾ ಎ ತಂಡದ ಮೊದಲ ಇನಿಂಗ್ಸ್ ನ್ನು 319 ರನ್ ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡ 6 ವಿಕೆಟ್ ಗೆ 377 ರನ್ ಗಳಿಸಿ ಸುಸ್ಥಿತಿಯಲ್ಲಿದೆ. ಟೀಮ್ ಇಂಡಿಯಾದ ಆರಂಭಿಕರಾದ ಸಾಯ್ ಸುದರ್ಶನ್ (14), ದೇವದತ್ ಪಡಿಕ್ಕಲ್ (30) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ನಾಲ್ಕನೇ ವಿಕೆಟ್‌ಗೆ ಪ್ರದೋಶ್ ರಂಜನ್ ಪೌಲ್ ಹಾಗೂ ಸರ್ಫರಾಜ್ ಖಾನ್ ಶತಕದ ಜೊತೆಯಾಟವನ್ನು ನೀಡಿತು. ಈ ಜೋಡಿ 130 ರನ್ ಗಳನ್ನು ಸೇರಿಸಿತು.
ಸರ್ಫರಾಜ್ ಖಾನ್ 85 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ನೆರವಿನಿಂದ 68 ರನ್ ಸಿಡಿಸಿದರು. ಪ್ರದೋಶ್ 23 ಬೌಂಡರಿ, 1 ಸಿಕ್ಸರ್ ಸಹಾಯದಿಂದ 163 ರನ್ ಸಿಡಿಸಿ ತಂಡಕ್ಕೆ ನೆರವಾದರು.