Rohit Sharma: ಹಿಟ್‌ಮ್ಯಾನ್ ಮುಡಿಗೆ ಮತ್ತೊಂದು ಗರಿ
ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಸದ್ಯ ಇಂಗ್ಲೆಂಡ್‌ನಲ್ಲಿ ಏಕದಿನ ಸರಣಿಯನ್ನು ಆಡುತ್ತಿದ್ದಾರೆ. ಈ ವೇಳೆ ಇವರು ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಈಗ ರೋಹಿತ್ ತಮ್ಮ ಹೆಸರಿಗೆ ಮತ್ತೊಂದು ದಾಖಲೆಯನ್ನು ನಮೂದಿಸಿಕೊಂಡಿದ್ದಾರೆ. ಭಾರತದ ಪರ ಅತಿ ಹೆಚ್ಚು ವರ್ಷಗಳ ಕಾಲ ಕ್ರಿಕೆಟ್ ಆಡಿದ ಮೂರನೇ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಕನಸು ಕಂಡಿರುವ ರೋಹಿತ್ ಶರ್ಮಾ ಅವರಿಗೆ ಇಂಗ್ಲೆಂಡ್, ವಿರುದ್ಧದ ಸರಣಿ ಮಹತ್ವದಾಗಿದೆ. ಈ ಸರಣಿಯಲ್ಲಿ ಬಿಗ್ ಇನಿಂಗ್ಸ್ ಕಟ್ಟಿ ತಮ್ಮ ಸಾಮರ್ಥ್ಯವನ್ನು ತೋರಿಸಿಕೊಳ್ಳುವ ಅನಿವಾರ್ಯತೆ ರೋಹಿತ್ ಅವರಿಗೆ ಇದೆ. ಇವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದಾರೆ. ಇವರು ಮೊದಲ ಪಂದ್ಯದಲ್ಲಿ 11 ರನ್ ಕಲೆ ಹಾಕಿದ್ದಾರೆ.

ರೋಹಿತ್ ಶರ್ಮಾ ಚಿಕ್ಕ ಇನಿಂಗ್ಸ್ ಕಟ್ಟಿದರೂ ಸಹ ದೊಡ್ಡ ದಾಖಲೆ ಬರೆದಿದ್ದಾರೆ. ಭಾರತದ ಪರ ಅತಿ ಹೆಚ್ಚು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಆಟಗಾರರ ಪಟ್ಟಿಯಲ್ಲಿ ಇವರಿಗೆ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
ರೋಹಿತ್ ಮತ್ತೊಂದು ದಾಖಲೆ
ರೋಹಿತ್ ಶರ್ಮಾ 23 ಜೂನ್ 2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡಿದ್ದರು. ಆ ಬಳಿಕ ಇವರು ಮೂರು ಫಾರ್ಮೆಟ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಸದ್ಯ ಇವರು ಟಿ20 ಕ್ರಿಕೆಟ್ ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸದ್ಯ ಇವರು ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 19 ವರ್ಷ 21 ದಿನಗಳ ಕಳೆದಿವೆ.
ಸಚಿನ್ ತೆಂಡೂಲ್ಕರ್‌ಗೆ ಅಗ್ರಸ್ಥಾನ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಇವರು 24 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಮೋಹಿಂದರ್ ಅಮರ್‌ನಾಥ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 19 ವರ್ಷ 310 ದಿನಗಳ ಕಾಲ ಆಡಿದ ಹೆಗ್ಗಳಿಕೆ ಹೊಂದಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವಲ್ಲಿ ಸಫಲರಾದರೆ, ಎರಡನೇ ಸ್ಥಾನಕ್ಕೆ ಬಡ್ತಿ ಪಡೆಯಬಹುದು.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಆಡಿದ ಆಟಗಾರರು
ಸಚಿನ್ ತೆಂಡೂಲ್ಕರ್, 24 ವರ್ಷ, 1 ದಿನ
ಮೊಹಿಂದರ್ ಅಮರನಾಥ - 19 ವರ್ಷ, 310 ದಿನ
ರೋಹಿತ್ ಶರ್ಮಾ, 19 ವರ್ಷ, 21 ದಿನ
ಲಾಲಾ ಅಮರ್‌ನಾಥ್, 19 ವರ್ಷ
ಆಶೀಷ್ ನೆಹರಾ, 18 ವರ್ಷ, 250 ದಿನ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

