For Quick Alerts
ALLOW NOTIFICATIONS  
For Daily Alerts
 

ಚೆನ್ನೈ ತಲುಪಿದ MS Dhoni: ಸಿಎಸ್‌ಕೆ ನ್ಯೂ ಜೆರ್ಸಿ ಬಿಡುಗಡೆ

ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ದಿನ ಕಳೆದಂತೆ ರೋಚಕತೆ ಹೆಚ್ಚಿಸುತ್ತಿದೆ. ಈ ಮೆಗಾ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸಹ ಸ್ಥಿರ ಪ್ರದರ್ಶನ ನೀಡುತ್ತಿದೆ. ಮಾರ್ಚ್‌ 8 ರಂದು ಈ ಟೂರ್ನಿಗೆ ತೆರೆ ಬೀಳಲಿದೆ. ಆ ಬಳಿಕ ಭಾರತದಲ್ಲಿ ಮತ್ತೊಂದು ಕ್ರಿಕೆಟ್‌ ಹಬ್ಬ ನಡೆಯಲಿದೆ. ಈ ಕ್ರಿಕೆಟ್‌ ಹಬ್ಬಕ್ಕೆ ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದೆ. ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್ ಐಪಿಎಲ್‌ಗೆ ಆರಂಭವಾಗಲಿದೆ. ಈ ಲೀಗ್‌ಗಾಗಿ ಈಗಾಗಲೇ ಎಲ್ಲ ತಂಡಗಳು ಭರದ ಸಿದ್ಧತೆಗಳನ್ನು ನಡೆಸಿವೆ.

ಐಪಿಎಲ್‌ನ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಚೆನ್ನೈ ಸೂಪರ್ ಕಿಂಗ್ಸ್‌ ಈ ಬಾರಿ ಪ್ರಶಸ್ತಿಯ ಮೇಲೆ ಕಣ್ಣು ನೆಟ್ಟಿದೆ. ಹೀಗಾಗಿ ತಂಡ ಭರದ ಸಿದ್ಧತೆಯನ್ನು ನಡೆಸಿದೆ. ತಂಡಕ್ಕೆ ಐದು ಬಾರಿ ಚಾಂಪಿಯನ್ ಪಟ್ಟವನ್ನು ತೊಡಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿರಲಿವೆ. ಈ ಲೀಗ್‌ನಲ್ಲಿ ಭಾಗವಹಿಸಲು ಮಹೇಂದ್ರ ಸಿಂಗ್ ಧೋನಿ ಫೆಬ್ರವರಿ 28 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಗುಡ್‌ ಲುಕ್ಕಿಂಗ್ ಸ್ಟೈಲ್‌ನಲ್ಲಿ ಕಾಣಿಸಿಕೊಂಡಿರುವ ಧೋನಿ ಅಭಿಮಾನಿಗಳಲ್ಲಿ ನವ ಉತ್ಸಾಹ ತುಂಬಿದ್ದಾರೆ.

MS Dhoni

ಐಪಿಎಲ್‌ನ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಸಿಎಸ್‌ಕೆ ತಂಡದ ರಾಯಭಾರಿ ಆಗಿರುವ ಧೋನಿ ಅವರನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರರಾಗಿದ್ದಾರೆ. ಇವರ ನಾಯಕತ್ವದಲ್ಲಿ ಚೆನ್ನೈ ದಾಖಲೆಯ ಬಾರಿಗೆ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಈಗ ಆರನೇ ಪ್ರಶಸ್ತಿಯ ಹುಡುಕಾಟದಲ್ಲಿದೆ.

ಚೆನ್ನೈ ಜೆರ್ಸಿ ಬಿಡುಗಡೆ

ಇದೇ ಸಂದರ್ಭದಲ್ಲಿ ಸಿಎಸ್‌ಕೆ ಮತ್ತೊಂದು ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಸಿಎಸ್‌ಕೆ ವಿಭಿನ್ನವಾಗಿ ತನ್ನ ಜೆರ್ಸಿ ಲಾಂಚ್‌ ಕಾರ್ಯಕ್ರಮವನ್ನು ಮಾಡಿದೆ. 2023ರಲ್ಲಿ ಕೊನೆಯ ಬಾರಿಗೆ ಪ್ರಶಸ್ತಿ ಗೆದ್ದಿದ್ದ ಸಿಎಸ್‌ಕೆ ಮತ್ತೊಮ್ಮೆ ಪ್ರಶಸ್ತಿ ಎತ್ತುವ ಕನಸು ಕಾಣುತ್ತಿದೆ. ಇನ್ನು ಈ ಬಾರಿಯೂ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜಸ್ಥಾನ ರಾಯಲ್ಸ್‌ ತಂಡದಿಂದ ಟ್ರೇಡ್ ಮಾಡಿಕೊಂಡಿದ್ದ ಸಂಜು ಸ್ಯಾಮ್ಸನ್‌ ಟಿ20 ವಿಶ್ವಕಪ್‌ನ ಭಾಗವಾಗಿದ್ದಾರೆ. ಹೀಗಾಗಿ ಇವರು ಸದ್ಯ ಅಭ್ಯಾಸದ ಶಿಬಿರದಲ್ಲಿ ಭಾಗವಹಿಸಲು ಆಗುವುದಿಲ್ಲ. ಶಿವಂ ದುಬೆ ಮತ್ತು ಸಂಜು ಸ್ಯಾಮ್ಸನ್ ಪ್ರಸ್ತುತ ರಾಷ್ಟ್ರೀಯ ಕರ್ತವ್ಯದಲ್ಲಿ ನಿರತರಾಗಿದ್ದಾರೆ, ಆದ್ದರಿಂದ ಅವರು ಪಂದ್ಯಾವಳಿಯ ನಂತರ ಶಿಬಿರವನ್ನು ಸೇರುತ್ತಾರೆ. ಈ ಬಗ್ಗೆ ಚೆನ್ನೈ ತಂಡದ ಕಾಸಿ ವಿಶ್ವನಾಥನ್ ಮಾಹಿತಿ ನೀಡಿದ್ದಾರೆ. ಶಿಬಿರದಲ್ಲಿ ಸುಮಾರು 15 ಭಾರತೀಯ ಆಟಗಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಇದರಲ್ಲಿ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಹಲವಾರು ಅನ್‌ಕ್ಯಾಪ್ಡ್ ಮತ್ತು ದೇಶೀಯ ಆಟಗಾರರು ಸೇರಿದ್ದಾರೆ.

ಚೆನ್ನೈ ತಂಡದ ಮುಖ್ಯ ಕೋಚ್‌ ಸ್ಟೀಫನ್ ಫ್ಲೆಮಿಂಗ್ ಹಾಗೂ ವಿದೇಶಿ ಆಟಗಾರರು ಮುಂದಿನ ವಾರದಲ್ಲಿ ತಂಡವನ್ನು ಸೇರಲಿದ್ದಾರೆ ಎಂದು ತಿಳಿದು ಬಂದಿದೆ.

ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಆಗುತ್ತಾ?

44 ವರ್ಷದ ಧೋನಿ, ಈಗಲೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಪರ ಆಡುತ್ತಿದ್ದಾರೆ. ಇವರು ಯುವಕರು ನಾಚುವಂತೆ ವಿಕೆಟ್‌ ಕೀಪಿಂಗ್ ಹಾಗೂ ಬ್ಯಾಟಿಂಗ್ ಮಾಡುತ್ತಿದ್ದಾರೆ. ಧೋನಿ ಅವರ ನಿವೃತ್ತಿಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಹೊರ ಬಂದಿಲ್ಲ. ಇವರನ್ನು ಚೆನ್ನೈ ಅನ್‌ಕ್ಯಾಪ್ಡ್ ನಿಯಮಗಳ ಅಡಿಯಲ್ಲಿ 4 ಕೋಟಿ ರೂ. ನೀಡಿ ಉಳಿಸಿಕೊಂಡಿದೆ. 19ನೇ ಆವೃತ್ತಿಯ ಐಪಿಎಲ್‌ನ ಆರಂಭಿಕ ಪಂದ್ಯಗಳ ಬಳಿಕ ಧೋನಿ ನಿವೃತ್ತಿ ಹೊಂದಬಹುದು ಎಂದು ವರದಿಗಳು ಕೇಳಿ ಬರುತ್ತಿವೆ.

Story first published: Sunday, March 1, 2026, 13:49 [IST]
Other articles published on Mar 1, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+