Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಿದ ಸಂಜು ಸ್ಯಾಮ್ಸನ್‌

19ನೇ ಆವೃತ್ತಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಬ್ಯಾಟ್ ಮಾಡುತ್ತಿರುವ ಸಂಜು ಸ್ಯಾಮ್ಸನ್‌ ಕಳೆದ ಕೆಲವು ಪಂದ್ಯಗಳಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್‌ ಅಬ್ಬರಿಸಿದರು. ಅಲ್ಲದೆ ಚೆಪಾಕ್ ಅಂಗಳದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್‌ ಶತಕ ಬಾರಿಸಿದರು. ಈ ಮೂಲಕ ಈ ಆವೃತ್ತಿಯ ಮೊದಲ ಶತಕ ದಾಖಲಾಯಿತು. ಈ ಇನಿಂಗ್ಸ್‌ ಮೂಲಕ ಸಂಜು ಸ್ಯಾಮ್ಸನ್‌ ವಿಶೇಷ ಕ್ಲಬ್‌ಗೆ ಎಂಟ್ರಿ ಪಡೆದರು.

ಟಾಸ್‌ ಸೋತರೂ ಮೊದಲು ಬ್ಯಾಟ್‌ ಮಾಡಿದ ಚೆನ್ನೈ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ ಅಜೇಯ 115 ರನ್ ಗಳಿಸಿದರು. ಇದರೊಂದಿಗೆ, ಸಂಜು ಸ್ಯಾಮ್ಸನ್ ಕೊಹ್ಲಿ ಮತ್ತು ರೋಹಿತ್ ಅವರ ಎಲೈಟ್ ಕ್ಲಬ್‌ಗೆ ಎಂಟ್ರಿ ನೀಡಿದ್ದಾರೆ.

Sanju Samson

ಟಿ20 ಕ್ರಿಕೆಟ್‌ ಸ್ವರೂಪದಲ್ಲಿ ಸಂಜು ಸ್ಯಾಮ್ಸನ್‌ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಟಿ20 ಸ್ವರೂಪದಲ್ಲಿ ಸಂಜು ಸ್ಯಾಮ್ಸನ್‌ 400 ಸಿಕ್ಸರ್‌ಗಳನ್ನು ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.

ರೋಹಿತ್ ಶರ್ಮಾ ಪ್ರಸ್ತುತ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 554 ಸಿಕ್ಸರ್‌ಗಳನ್ನು ಬಾರಿಸಿದ್ದು, ಈ ಪಟ್ಟಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ವಿರಾಟ್‌ 441 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಇವರು 442 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಧೋನಿ ದಾಖಲೆ ಅಳಿಸಿದ ಸಂಜು

ಸಂಜು ಸ್ಯಾಮ್ಸನ್ ಸಿಎಸ್‌ಕೆ ಪರ ವಿಕೆಟ್ ಕೀಪರ್ ಆಗಿ ಶತಕ ಸಿಡಿಸಿದ ಮೊದಲ ವಿಕೆಟ್‌ ಕೀಪರ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಎಂಎಸ್‌ ಧೋನಿ ಆರ್‌ಸಿಬಿ ವಿರುದ್ಧ 2019ರಲ್ಲಿ 84 ರನ್‌ ಬಾರಿಸಿದ್ದರು. ಈ ದಾಖಲೆಯನ್ನು ಸಂಜು ಅಳಿಸಿ ಹಾಕಿದರು.

ಮೂರು ತಂಡದ ಪರ ಶತಕ

ಐಪಿಎಲ್‌ನಲ್ಲಿ ಮೂರು ತಂಡಗಳ ಪರ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಇಂತಹದ್ದೇ ಸಾಧನೆಯನ್ನು ಕರ್ನಾಟಕದ ಕೆಎಲ್ ರಾಹುಲ್ ಮಾಡಿದ್ದರು. ಈಗ ಈ ಸಾಲಿಗೆ ಸಂಜು ಸೇರಿದ್ದಾರೆ.

Story first published: Saturday, April 11, 2026, 23:17 [IST]
Other articles published on Apr 11, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+