For Quick Alerts
ALLOW NOTIFICATIONS  
For Daily Alerts
 

Ashes 2023: 100ನೇ ಪಂದ್ಯವಾಡುತ್ತಿರುವ ಸ್ಟೀವ್ ಸ್ಮಿತ್ ಬಗ್ಗೆ ನಾಯಕ ಕಮ್ಮಿನ್ಸ್ ಮೆಚ್ಚುಗೆಯ ಮಾತು

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಆಶಸ್ ಸರಣಿಯ ಮೂರನೇ ಪಂದ್ಯ ಹೆಡಿಂಗ್ಲೆಯಲ್ಲಿ ಆರಂಭವಾಗಿದೆ. ಈ ಪಂದ್ಯದ ಮೂಲಕ ಆಸ್ಟ್ರೇಲಿಯಾದ ಹಿರಿಯ ಆಟಗಾರ ಸ್ಟೀವ್ ಸ್ಮಿತ್ 100ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಂತಾಗಿದೆ. ಈ ವಿಶೇಷ ಸಾಧನೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಸ್ಟೀವ್ ಸ್ಮಿತ್ ಬಗ್ಗೆ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದು 60ರ ಸರಾಸರಿಯಲ್ಲಿ ರನ್‌ಗಳಿಸುವುದು ಅಮೋಘ ಸಾಧನೆ ಎಂದಿದ್ದಾರೆ.

ಸ್ಟೀವ್ ಸ್ಮಿತ್ ಹೆಡಿಂಗ್ಲೆಯಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಮಾದರಿಯಲ್ಲಿ 100 ಟೆಸ್ಟ್ ಪಂದ್ಯಗಳನ್ನಾಡಿದ ಸಾಧನೆ ಮಾಡಿದ 15ನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಈ ಸಾಧನೆ ಮಾಡಿದ 41ನೇ ಕ್ರಿಕೆಟಿಗ ಸ್ಮಿತ್. ಈ ಪೀಳಿಗೆಯ ಆಟಗಾರರ ಪೈಕಿ ಶ್ರೇಷ್ಠ ಟೆಸ್ಟ್ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ ಸ್ಮಿತ್. ಈ ಹಿಂದಿನ 99 ಪಂದ್ಯಗಳಲ್ಲಿ 59.56ರ ಸರಾಸರಿಯಲ್ಲಿ 9113 ರನ್ ಬಾರಿಸಿದ್ದಾರೆ. ಇದರಲ್ಲಿ 32 ಶತಕ ಹಾಗೂ 37 ಅರ್ಧ ಶತಕ ಸೇರಿದೆ. 50ಕ್ಕೂ ಅಧಿಕ ಅಧಿಕ ಟೆಸ್ಟ್ ಪಂದ್ಯಗಳನ್ನಾಡಿ 50ಕ್ಕೂ ಅಧಿಕ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿರುವ ಕೇವಲ 3ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ ಸ್ಮಿತ್.

Steve Smith 100th Test: Pat Cummins praises star batter said Averaging 60 is incredible

ಇನ್ನು ಹೆಡಿಂಗ್ಲೆ ಟೆಸ್ಟ್ ಪಂದ್ಯದ ಟಾಸ್ ಸಂದರ್ಭದಲ್ಲಿ ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮಾತನಾಡಿದ್ದು ಇದು ಅವರ 100ನೇ ಟೆಸ್ಟ್ ಪಂದ್ಯ. ಆತನ ಸೆಟ್ ಮಾಡಿರುವ ಸ್ಯಾಂಡರ್ಡ್ ಬಹಳ ದೊಡ್ಡದು. 60ರ ಸರಾಸರಿಯಲ್ಲಿ ಅವರು ಬ್ಯಾಟಿಂಗ್ ನಡೆಸಿದ್ದು ಬಹಳ ಅದ್ಭುತ" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.

ಅಂದಹಾಗೆ ಸ್ಟೀವ್ ಸ್ಮಿತ್ ತಮ್ಮ ವೃತ್ತಿ ಜೀವನವನ್ನು ಲೆಗ್ ಸ್ಪಿನ್ನರ್ ಆಗಿ ಆರಂಭಿಸಿದ್ದು 8-9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯುತ್ತಿದ್ದರು. 2013ರವರೆಗೆ 16 ಪಂದ್ಯಗಳಲ್ಲಿ ಅವರು ಗಳಿಸಿದ್ದು 34.64ರ ಸರಾಸರಿಯಲ್ಲಿ 970 ರನ್‌ಗಳನ್ನು ಮಾತ್ರ. ಆದರೆ ಬಳಿಕ ಬ್ಯಾಟಿಂಗ್‌ನಲ್ಲಿ ನಮ್ಮ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡ ಸ್ಮಿತ್ ನಂತರ ಬ್ಯಾಟಿಂಗ್‌ನಲ್ಲಿ ಅದ್ಭುತ ಯಶಸ್ಸು ಸಾಧಿಸಿದರು.2014-2019ರ ವರೆಗೆ 56 ಟೆಸ್ಟ್ ಪಂದ್ಯಗಳಲ್ಲಿ ಸ್ಮಿತ್ 72.02ರ ಸರಾಸರಿಯಲ್ಲಿ 6194 ರನ್‌ಗಳಿಸಿದ್ದು 24 ಶತಕ ಬಾರಿಸಿದ್ದರು. 2020ರ ಬಳಿಕ ಫಾರ್ಮ್ ಕೊರತೆ ಕಂಡು 50ರ ಸರಾಸರಿಯ ಸನಿಹಕ್ಕೆ ಕುಸಿದಿದ್ದರು.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಆಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್
ಬೆಂಚ್: ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (WK), ಪ್ಯಾಟ್ ಕಮಿನ್ಸ್ (c), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್‌ಶಾ, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್

Story first published: Thursday, July 6, 2023, 17:38 [IST]
Other articles published on Jul 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+