Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Breaking News: ಸ್ಟೀವ್‌ ನಿವೃತ್ತಿ ನಿರ್ಧಾರಕ್ಕೆ ಅಭಿಮಾನಿಗಳು ಮೂಕವಿ"ಸ್ಮಿತ"

ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ನಿಂದ ಹಠಾತ್ತನೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದ ನಂತರ ಸ್ಟೀವ್ ಸ್ಮಿತ್ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡವು ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ತಲುಪಿತು. ಆದರೆ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧ 4 ವಿಕೆಟ್‌ಗಳಿಂದ ಸೋಲನುಭವಿಸಿ ತನ್ನ ಪ್ರಯಾಣವನ್ನು ಕೊನೆಗೊಳಿಸಿತು.

ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಸೋಲಿನ ನಂತರ ಸ್ಮಿತ್ ತಮ್ಮ ತಂಡದ ಸಹ ಆಟಗಾರರಿಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದು, ವೃತ್ತಿಜೀವನದಲ್ಲಿ ಮುಂದುವರಿಯಲು ಇದು ಸರಿಯಾದ ಸಮಯ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

Steve Smith announced retirement from ODI cricket

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಿದರು. ಏಕೆಂದರೆ ಅವರ ನಿಯಮಿತ ನಾಯಕ ಪ್ಯಾಟ್ ಕಮ್ಮಿನ್ಸ್ ಗಾಯದ ಕಾರಣ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಗುಳಿದಿದ್ದರು. ಭಾರತದವಿರುದ್ಧದ ಸೆಮಿಫೈನಲ್ ಸ್ಮಿತ್ ಅವರ ಕೊನೆಯ ಏಕದಿನ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಸ್ಮಿತ್ 96 ಎಸೆತಗಳಲ್ಲಿ 4 ಬೌಂಡರಿಗಳು ಮತ್ತು 1 ಸಿಕ್ಸರ್ ನೆರವಿನಿಂದ 73 ರನ್‌ಗಳನ್ನು ಬಾರಿಸಿದ್ದರು. ಆದರೆ, ಸ್ಮಿತ್ ಅವರ ಈ ಇನ್ನಿಂಗ್ಸ್ ತಂಡದ ಗೆಲುವಿಗೆ ಸಹಾಯ ಮಾಡಲಿಲ್ಲ.

ಸ್ಟೀವ್ ಸ್ಮಿತ್ ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಪರ ಟೆಸ್ಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ 2028 ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಸ್ಮಿತ್ ಭಾಗವಹಿಸಲು ಉತ್ಸುಕರಾಗಿದ್ದಾರೆ. ಲಾಸ್ ಏಂಜಲೀಸ್‌ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಮೊದಲ ಬಾರಿಗೆ 20 ಓವರ್‌ಗಳ ಸ್ವರೂಪದಲ್ಲಿ ಸೇರಿಸಲಾಗುತ್ತಿದೆ.

ಸ್ಮಿತ್ ಹೇಳಿದ್ದೇನು?

ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ನಿರ್ಧಾರದ ಬಗ್ಗೆ ಮಾತನಾಡಿದ ಸ್ಮಿತ್, 'ಇದೊಂದು ಅದ್ಭುತ ಪ್ರಯಾಣವಾಗಿತ್ತು ಮತ್ತು ನಾನು ಅದರ ಪ್ರತಿ ಕ್ಷಣವನ್ನೂ ಆನಂದಿಸಿದ್ದೇನೆ. ಎರಡು ವಿಶ್ವಕಪ್ ಗೆದ್ದಿದ್ದು ಒಂದು ದೊಡ್ಡ ಸಾಧನೆ. ಅಲ್ಲದೆ ಅನೇಕ ಅದ್ಭುತ ಸಹ ಆಟಗಾರರೊಂದಿಗೆ ಈ ಪ್ರಯಾಣವನ್ನು ಹಂಚಿಕೊಂಡಿದ್ದೇನೆ. 2027 ರ ಏಕದಿನ ವಿಶ್ವಕಪ್‌ಗೆ ತಯಾರಿ ಆರಂಭಿಸಲು ಈಗ ಯುವ ಆಟಗಾರರಿಗೆ ಉತ್ತಮ ಅವಕಾಶವಾಗಿದೆ. ಹಾಗಾಗಿ ಇದು ಸರಿಯಾದ ಸಮಯ ಎಂದು ಅನಿಸುತ್ತಿದೆ. ನನಗೆ ಟೆಸ್ಟ್ ಕ್ರಿಕೆಟ್ ಇನ್ನೂ ಆದ್ಯತೆಯಾಗಿದೆ. ನಾನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಲು ನಿಜವಾಗಿಯೂ ಎದುರು ನೋಡುತ್ತಿದ್ದೇನೆ. ಚಳಿಗಾಲದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮತ್ತು ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಲು ಕಾಯುತ್ತಿದ್ದೇನೆ. ಆಸ್ಟ್ರೇಲಿಯಾ ತಂಡಕ್ಕೆ ನಾನು ಇನ್ನೂ ಬಹಳಷ್ಟು ಕೊಡುಗೆ ನೀಡಬೇಕಾಗಿದೆ ಅಂದುಕೊಂಡಿದ್ದೇನೆ ಎಂದು ಸ್ಮಿತ್ ಹೇಳಿದ್ದಾರೆ.

Story first published: Wednesday, March 5, 2025, 12:15 [IST]
Other articles published on Mar 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+