For Quick Alerts
ALLOW NOTIFICATIONS  
For Daily Alerts
 

Cricket Australia: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಗಾಯಗೊಂಡ ಆಸೀಸ್ ಬ್ಯಾಟರ್

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಗಾಯಗೊಂಡಿದ್ದಾರೆ. ಈ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಮಾಹಿತಿ ನೀಡಿದೆ. ಕಾಂಗರೂ ಪಡೆಯ ಸ್ಟಾರ್ ಬ್ಯಾಟರ್ ಗಾಯಕ್ಕೆ ಬಲಿಯಾಗಿದ್ದಾರೆ ಎಂದು ಸಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರ ನಡೆದ ಬಿಗ್ ಬ್ಯಾಷ್ ಲೀಗ್‌ ಟೂರ್ನಿಯಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಫೀಲ್ಡಿಂಗ್ ಮಾಡುವಾಗ ಸ್ಟೀವ್ ಸ್ಮಿತ್ ಬಲ ಮೊಣಕೈಗೆ ಗಾಯ ಮಾಡಿಕೊಂಡಿದ್ದರು.

ಭಾನುವಾರ ಸ್ಟೀವ್ ಸ್ಮಿತ್ ತನ್ನ ಬಲಗೈಯ ಮೊಣಕೈಯಲ್ಲಿ ಬ್ರೇಸ್ ಅನ್ನು ಧರಿಸಿದ್ದರು. ಅವರಿಗೆ 2019 ರಲ್ಲಿ ಅದೇ ಮೊಣಕೈಗೆ ಶಸ್ತ್ರಚಿಕಿತ್ಸೆ ಆಗಿತ್ತು. ಇದೀಗ ಸ್ಟೀವ್ ಸ್ಮಿತ್ ಗಾಯದ ಬಗ್ಗೆ ವೈದ್ಯರು ನಿಗಾ ವಹಿಸಿದ್ದು ಹೆಚ್ಚಿನ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಾಗುವುದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.

Steve Smith is injured ahead of ICC Champions Trophy 2025

ಚಾಂಪಿಯನ್ಸ್ ಟ್ರೋಫಿಯೂ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ವಿಭಾಗದ ಆಧಾರಸ್ತಂಭವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಸ್ಟೀವ್ ಸ್ಮಿತ್ ಗಾಯಗೊಂಡಿರುವುದು ಆಸ್ಟ್ರೇಲಿಯಾಕ್ಕೆ ದೊಡ್ಡ ಹೊಡೆತ ಕೊಟ್ಟಿದೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ನಾಯಕನ್ನಾಗಿ ಮುನ್ನಡೆಸುತ್ತಿದ್ದಾರೆ. ಇದೀಗ ಗಾಯದ ನಂತರ ದುಬೈನಲ್ಲಿ ಪೂರ್ವ ಸಿದ್ಧತಾ ಶಿಬಿರಕ್ಕಾಗಿ ಸ್ಮಿತ್ ತಂಡದೊಂದಿಗೆ ಪ್ರಯಾಣಿಸುವುದಿಲ್ಲ ಎಂದು ವರದಿಯಾಗಿದೆ. ಇದರ ಮಧ್ಯೆ ಮುಂದಿನ ತಿಂಗಳ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಆಡುವ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಆದರೆ, ಅವರು ಪೂರ್ವಸಿದ್ಧತಾ ಶಿಬಿರಕ್ಕೆ ಮರಳಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮಾಹಿತಿ ನೀಡಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಆಸ್ಟ್ರೇಲಿಯಾ ತನ್ನ ಲೀಗ್ ಹಂತದ ಪಂದ್ಯಗಳನ್ನು ಪಾಕಿಸ್ತಾನದ ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಆಡಲಿದೆ. ಫೆಬ್ರವರಿ 22 ರಂದು ಲಾಹೋರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆರಂಭಿಕ ಪಂದ್ಯವನ್ನಾಡಲಿದೆ.

ಇನ್ನಿಂಗ್ಸ್ ತೆರೆಯುವವರು?

ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಬ್ಯಾಟರ್‌ಗಳಾಗಿದ್ದಾರೆ. ಇದಲ್ಲದೇ ತಂಡದಲ್ಲಿ ಯುವ ಹಾಗೂ ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದೆ. ತಂಡದಲ್ಲಿರುವ ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಿಚೆಲ್ ಮಾರ್ಷ್ ಅವರಂತಹ ಆಲ್‌ರೌಂಡರ್‌ಗಳು ಬೌಲಿಂಗ್ ಹಾಗು ಬ್ಯಾಟಿಂಗ್‌ನೊಂದಿಗೆ ಪಂದ್ಯಗಳನ್ನು ಬದಲಾಯಿಸಬಲ್ಲ ಆಟಗಾರರಾಗಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್‌ರಂತಹ ಅಪಾಯಕಾರಿ ಬೌಲರ್‌ಗಳು ಇದ್ದಾರೆ. ಆಡಮ್ ಝಂಪಾ ಸ್ಪಿನ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆಡಮ್ ಝಾಂಪೈಸ್.

Story first published: Monday, January 20, 2025, 21:00 [IST]
Other articles published on Jan 20, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+