Steve Smith: ಆಸ್ಟ್ರೇಲಿಯಾ ದಿಗ್ಗಜರ ಕ್ಲಬ್ ಸೇರಿದ ಸ್ಟೀವ್ ಸ್ಮಿತ್
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೆಲ್ಬೋರ್ನ್ ಸ್ಡೇಡಿಯಂನಲ್ಲಿ ನಡೆಯುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿವೆ. ಮೆಲ್ಬೋರ್ನ್ ಟೆಸ್ಟ್‌ನ ಮೊದಲ ದಿನದಲ್ಲಿ ಆಸ್ಟ್ರೇಲಿಯಾ ಅದ್ಭುತ ಆರಂಭ ಪಡೆದುಕೊಂಡಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಆಸ್ಟ್ರೇಲಿಯಾ 86 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 311 ರನ್ ಗಳಿಸಿದೆ.
ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ (68 ರನ್) ಮತ್ತು ಪ್ಯಾಟ್ ಕಮಿನ್ಸ್ (8 ರನ್) ಕ್ರೀಸ್‌ನಲ್ಲಿದ್ದಾರೆ. ಭಾರತ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಆಕಾಶದೀಪ್, ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಉರುಳಿಸಿದ್ದಾರೆ. ಈ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಮತ್ತೊಂದು ಸಾಧನೆ ಮಾಡಿದ್ದಾರೆ.

ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ ಅವರು ಟೆಸ್ಟ್ ಪಂದ್ಯಗಳಲ್ಲಿ 50 ಕ್ಕಿಂತ ಹೆಚ್ಚು ರನ್‌ಗಳನ್ನು 10 ಅಥವಾ ಅದಕ್ಕಿಂತ ಹೆಚ್ಚು ಬಾರಿ ಗಳಿಸಿದ ದಾಖಲೆಯನ್ನು ಮಾಡಿದ್ದಾರೆ. ಈ ದಾಖಲೆಯೊಂದಿಗೆ ಆಸ್ಟ್ರೇಲಿಯಾ ದಿಗ್ಗಜ ಬ್ಯಾಟರ್‌ಗಳ ಕ್ಲಬ್ ಸೇರಿದ್ದಾರೆ.
ಮೆಲ್ಬೋರ್ನ್ ಅಂಗಳದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ 50 ಕ್ಕಿಂತ ಹೆಚ್ಚು ರನ್‌ಗಳನ್ನು 10 ಅಥವಾ ಅದಕ್ಕಿಂತ ಹೆಚ್ಚು ಬಾರಿ ಗಳಿಸಿದ ಆಸ್ಟ್ರೇಲಿಯಾ ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ ಹೊರತಾಗಿ, ಸರ್ ಡಾನ್ ಬ್ರಾಡ್‌ಮನ್, ಗ್ರೆಗ್ ಚಾಪೆಲ್ ಮತ್ತು ರಿಕಿ ಪಾಂಟಿಂಗ್ ಅವರಂತಹ ದಿಗ್ಗಜ ಬ್ಯಾಟರ್‌ಗಳಿದ್ದಾರೆ.
ಗ್ರೆಗ್ ಚಾಪೆಲ್ ಮೆಲ್ಬೋರ್ನ್ ಮೈದಾನದಲ್ಲಿ 17 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಗರಿಷ್ಠ 13 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರೊಂದಿಗೆ ಗ್ರೆಗ್ ಚಾಪೆಲ್ ಅಗ್ರಸ್ಥಾನದಲ್ಲಿದ್ದಾರೆ. ಸರ್ ಡಾನ್ ಬ್ರಾಡ್ಮನ್ ಮತ್ತು ರಿಕಿ ಪಾಂಟಿಂಗ್ ಅವರು ಕ್ರಮವಾಗಿ 12 ಮತ್ತು 11 ಬಾರಿ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಸರ್ ಡಾನ್ ಬ್ರಾಡ್ಮನ್ ಎರಡನೇ ಸ್ಥಾನದಲ್ಲಿದ್ದರೆ, ರಿಕಿ ಪಾಂಟಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಸ್ಟೀವ್ ಸ್ಮಿತ್ ಮೆಲ್ಬೋರ್ನ್ ಟೆಸ್ಟ್‌ನ ಮೊದಲ ದಿನದಲ್ಲಿ 71 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದರು. ಸ್ಟೀವ್ ಸ್ಮಿತ್ 68 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಸ್ಮಿತ್
ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟೀವ್ ಸ್ಮಿತ್ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ. ಅವರು 10000 ರನ್ ಗಳಿಸಿದ ಆಸ್ಟ್ರೇಲಿಯಾದ ನಾಲ್ಕನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಸ್ಟೀವ್ ಸ್ಮಿತ್ ಅವರಿಗೂ ಮೊದಲು ರಿಕಿ ಪಾಂಟಿಂಗ್, ಅಲನ್ ಬಾರ್ಡರ್ ಮತ್ತು ಸ್ಟೀವ್ ವಾ ಟೆಸ್ಟ್ ಕ್ರಿಕೆಟ್‌ನಲ್ಲಿ 10000 ರನ್ ಕಲೆ ಹಾಕಿದ್ದಾರೆ.
ಪರ್ತ್ ಮತ್ತು ಅಡಿಲೇಡ್‌ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ಅವರ ಪ್ರದರ್ಶನ ಉತ್ತಮವಾಗಿರಲಿಲ್ಲ. ಬ್ರಿಸ್ಬೇನ್‌ನ ಗಬ್ಬಾ ಪಿಚ್‌ನಲ್ಲಿ ಭಾರತದ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ, ಸ್ಟೀವ್ ಸ್ಮಿತ್ 190 ಎಸೆತಗಳಲ್ಲಿ 12 ಬೌಂಡರಿಗಳ ಸಹಾಯದಿಂದ 101 ರನ್ ಗಳಿಸಿದ್ದರು. ನಂತರ ಜಸ್ಪ್ರೀತ್ ಬುಮ್ರಾ ಅವರ ವಿಕೆಟ್ ಪಡೆದರು. ಬ್ರಿಸ್ಬೇನ್‌ನಲ್ಲಿ ಸ್ಟೀವ್ ಸ್ಮಿತ್ ನಾಲ್ಕನೇ ವಿಕೆಟ್‌ಗೆ ಟ್ರಾವಿಸ್ ಹೆಡ್‌ನೊಂದಿಗೆ 241 ರನ್‌ಗಳ ಜೊತೆಯಾಟ ಆಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications