ಭಾರತ vs ಆಸ್ಟ್ರೇಲಿಯಾ 1st ಟೆಸ್ಟ್: ಭಾರತದ ವಿರುದ್ಧ ಟೆಸ್ಟ್‌ನಲ್ಲಿ ಕನಿಷ್ಠ ಮೊತ್ತ ದಾಖಲಿಸಿದ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ಬ್ಯಾಟಿಂಗ್‌ನಲ್ಲಿ ಸಾಧಾರಣ ಮೊತ್ತವನ್ನು ಪೇರಿಸಿದ ಹೊರತಾಗಿಯೂ ಪಂದ್ಯದ ಮೇಲಿನ ಹಿಡಿತವನ್ನು ಮುಂದುವರಿಸಿದೆ. ಅದ್ಭುತವಾಗಿ ಬೌಲಿಂಗ್ ದಾಳಿಯನ್ನು ಸಂಘಟಿಸಿರುವ ಟೀಮ್ ಇಂಡಿಯಾ ಬೌಲರ್‌ಗಳು ಆಸಿಸ್ ದಾಂಡಿಗರಿಗೆ ಫೆವಿಲಿಯನ್ ದಾರಿ ತೋರಿಸಿದೆ.
ಭಾರತದ ವಿರುದ್ಧ ಯಾವಾಗೂ ಅಬ್ಬರಿಸುವ ಸ್ಟೀವ್ ಸ್ಮಿತ್ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಭಾರತದ ವಿರುದ್ಧ ಟೆಸ್ಟ್‌ನಲ್ಲಿ ಸ್ಟೀವ್ ಸ್ಮಿತ್ ಗಳಿಸಿದ ಅತ್ಯಂತ ಕನಿಷ್ಠ ಮೊತ್ತ ಇದಾಗಿದೆ. ಟೀಮ್ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಸ್ಮಿತ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಸ್ಟ್ರೇಲಿಯಾದ ತಾರಾಬ್ಯಾಟ್ಸ್‌ಮನ್ ಆಗಿರುವ ಸ್ಟೀವ್ ಸ್ಮಿತ್ ಅವರು ಕಳೆದ 50 ಇನ್ನಿಂಗ್ಸ್‌ಗಳಲ್ಲಿ ಬಾರಿಸಿದ ಅತ್ಯಂತ ಕನಿಷ್ಠ ಮೊತ್ತ ಇದಾಗಿದೆ. ಭಾರತದ ವಿರುದ್ಧ ಆಡಿದ 21 ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಮೊದಲ ಬಾರಿಗೆ 5ಕ್ಕೂ ಕಡಿಮೆ ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ 2013ರಲ್ಲಿ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿರುವುದು ಸ್ಮಿತ್ ಅವರ ಕನಿಷ್ಠ ಮೊತ್ತವಾಗಿತ್ತು.
ಸ್ಟೀವ್ ಸ್ಮಿತ್ ಭಾರತದ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ದಾಖಲೆಯನ್ನು ಹೊಂದಿದ್ದಾರೆ. 10 ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ 1429 ರನ್ ದಾಖಲಿಸಿದ್ದು 84.05 ಬ್ಯಾಟಿಂಗ್ ಸರಾಸರಿಯನ್ನು ಹೊಂದಿದ್ದಾರೆ. ಭಾರತದ ವಿರುದ್ಧ 10 ಶತಕವನ್ನು ಬಾರಿಸಿದ್ದಾರೆ ಸ್ಟೀವ್ ಸ್ಮಿತ್.
ಅಡಿಲೇಡ್‌ನಲ್ಲಿ ಭಾರತ ಮೊದಲ ಬಾರಿಗೆ ವಿದೇಶಿ ನೆಲದಲ್ಲಿ ಅಹರ್ನಿಶಿ ಪಂದ್ಯವನ್ನಾಡುತ್ತಿದೆ. ಬ್ಯಾಟಿಂಗ್‌ನಲ್ಲಿ ಸಾಧಾರಣ ಆಟವನ್ನು ಪ್ರದರ್ಶಿಸಿದರೂ ಭಾರತದ ಬೌಲಿಂಗ್ ವಿಭಾಗ ಆಸಿಸ್ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಆದರೆ ಸಾಕಷ್ಟು ಕ್ಯಾಚ್‌ಗಳನ್ನು ಕೈಚೆಲ್ಲಿರುವುದು ತಂಡಕ್ಕೆ ಹಿನ್ನೆಡೆ ಉಂಟುಮಾಡಿರುವುದು ಸುಳ್ಳಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications