Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕನ್ನಡಿಯಲ್ಲಿ ರೋಹಿತ್ ಶರ್ಮಾ ಮುಖ ನೋಡಿಕೊಳ್ಳಲಿ ಎಂದು ಸ್ಟೀವ್ ವಾ ಹೇಳಿದ್ದೇಕೆ?

ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಮ್ಮ ಫಾರ್ಮ್ ಸರಿಯಾಗಿಲ್ಲ ಎಂದು ಸಿಡ್ನಿ ಟೆಸ್ಟ್‌ನಿಂದ ಹೊರಗುಳಿದಿದ್ದರು. ಆಗಿನಿಂದ ರೋಹಿತ್ ಶರ್ಮಾ ಅವರ ವೃತ್ತಿ ಜೀವನದ ಬಗ್ಗೆ ಸಾಲು ಸಾಲು ಪ್ರಶ್ನೆಗಳು ಏಳುತ್ತಲೇ ಬಂದಿವೆ. ಆದರೆ ಇದಕ್ಕೆಲ್ಲಾ ರೋಹಿತ್ ಶರ್ಮಾ ಫುಲ್ ಸ್ಟಾಪ್ ಹಾಕುತ್ತಲೇ ಬಂದಿದ್ದರು. ಅಲ್ಲದೇ ಈ ಫಾರ್ಮೆಟ್‌ನಲ್ಲಿ ತಾವು ನಿರಂತರವಾಗಿ ಆಡುತ್ತಿರುವುದಾಗಿ ತಿಳಿಸಿದ್ದರು. ಈ ಚರ್ಚೆಗಳ ಮಧ್ಯೆ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ದೊಡ್ಡ ಹೇಳಿಕೆ ನೀಡಿದ್ದಾರೆ.

ರೋಹಿತ್ ಶರ್ಮಾ ಸದ್ಯ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇವರು ತಮ್ಮ ಸೇವೆಯನ್ನು ದೇಶಕ್ಕಾಗಿ ಮುಂದುವರೆಸಲು ಬಯಸಿದ್ದರೆ, ವಿಶ್ರಾಂತಿ ತೆಗೆದುಕೊಳ್ಳಬಾರದು. ನಿವೃತ್ತಿಯ ಬಗ್ಗೆ ನಿರ್ಧಾರವನ್ನು ರೋಹಿತ್ ಶರ್ಮಾ ಅವರು ಮಾತ್ರ ತೆಗೆದುಕೊಳ್ಳಬಹುದು ಎಂದಿದ್ದಾರೆ.

Steve Waugh on Rohit Sharma Only He Can Decide When to Retire Amid Ongoing Criticism

ಟೀಮ್ ಇಂಡಿಯಾದ ಆಟಗಾರರು ಸದ್ಯ ಐಪಿಎಲ್‌ನಲ್ಲಿ ಬ್ಯೂಸಿ ಆಗಿದ್ದಾರೆ. ಈ ಲೀಗ್‌ ಮುಗಿದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ಪ್ರವಾಸದ ವೇಳೆ ಟೀಮ್ ಇಂಡಿಯಾ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾವನ್ನು ಮೈನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಎಲ್ಲ ಆಟಗಾರರು ಫಿಟ್ನೆಸ್ ಕಾಯ್ದುಕೊಳ್ಳುವುದು ಪ್ರಾಮುಖ್ಯತೆ ವಹಿಸಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ನ ಭಾಗವಾಗಿದೆ.

ಸ್ಟೀವ್ ವಾ ಹೇಳಿದ್ದೇನು?

ರೋಹಿತ್ ಶರ್ಮಾ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರ ಸಂಪೂರ್ಣವಾಗಿ ಅವರ ಮೇಲೆ ಅವಲಂಬಿತವಾಗಿದೆ. ರೋಹಿತ್‌ ಈ ನಿರ್ಧಾರ ತೆಗೆದುಕೊಳ್ಳಲು ಸಮರ್ಥರು. ಸ್ವತಃ ರೋಹಿತ್‌ ಕನ್ನಡಯಲ್ಲಿ ತನ್ನನು ತಾನು ನೋಡಿಕೊಂಡು ತಾನು ಇನ್ನು ಟೀಮ್ ಇಂಡಿಯಾ ನಾಯಕನಾಗಿ ಆಡಬೇಕಾ, ಆಟಗಾರನಾಗಿ ಆಡಬೇಕೋ ಎಂಬುದನ್ನು ತಮ್ಮನ್ನು ತಾವು ಕೇಳಿಕೊಳ್ಳಬೇಕು ಎಂದಿದ್ದಾರೆ.

Steve Waugh on Rohit Sharma Only He Can Decide When to Retire Amid Ongoing Criticism

ಕಳಪೆ ಪ್ರದರ್ಶನ

ಏಪ್ರಿಲ್‌ 30 ರಂದು ರೋಹಿತ್ ಶರ್ಮಾ 38ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ವೇಳೆ ಇವರ ಪ್ರದರ್ಶನದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಇವರು ಭಾರತದಲ್ಲಿ ನಡೆದಿದ್ದ ಬಾಂಗ್ಲಾದೇಶ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಅಲ್ಲದೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್‌ ಸರಣಿಯಲ್ಲಿ ಇವರು ಸ್ಥಿರ ಪ್ರದರ್ಶನ ನೀಡದೆ ಟೀಕೆಗೆ ಗುರಿಯಾದರು. ಆದರೆ ಪಾಕ್‌ ಆಯೋಜಿತ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್‌ ಶರ್ಮಾ ತಮ್ಮ ನಾಯಕತ್ವದ ಮೂಲಕ ಎಲ್ಲರ ಗಮನ ಸೆಳೆದರು. ಭಾರತ, ಐಸಿಸಿ ಆಯೋಜಿತ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತನ್ನ ಅಜೇಯ ಓಟವನ್ನು ಮುಂದುವರೆಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲೂ ರೋಹಿತ್ ಶರ್ಮಾ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಆದರೆ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ಎದುರಾಳಿ ತಂಡಗಳಿಗೆ ಎಚ್ಚರಿಕಗೆ ನೀಡಿದ್ದಾರೆ. ಮುಂಬೈ ತನ್ನ ಮುಂದಿನ ಪಂದ್ಯವನ್ನು ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್‌ ವಿರುದ್ಧ ಆಡಲಿದೆ.

Story first published: Tuesday, April 22, 2025, 17:47 [IST]
Other articles published on Apr 22, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+