'ಪೋಸ್ ಕೊಟ್ಟಿದ್ದು ಸಾಕು ಕ್ರಿಕೆಟ್ ಆಡಿ': ಭಾರತೀಯ ಕ್ರಿಕೆಟಿಗರಿಗೆ ಬಿಸಿ ಮುಟ್ಟಿಸಿದ್ಯಾರು?

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಶರಣಾಗಿದೆ. ಈ ಸೋಲಿಗೆ ಈಗ ಸಾಕಷ್ಟು ವಿಮರ್ಷೆಗಳು ನಡೆಯುತ್ತಿದೆ. ಆದರೆ ಈ ಮಧ್ಯೆ ಟೀಮ್ ಇಂಡಿಯಾ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಬಿಜಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರರು ಫೋಟೋವನ್ನು ಅಪ್‌ಡೇಟ್ ಮಾಡಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆದರೆ ಈ ಫೋಟೋಗಳನ್ನು ನೊಡಿದ ಅಭಿಮಾನಿಗಳು ಮೆಚ್ಚಿಕೊಳ್ಳುವಕ್ಕಿಂತ ಹೆಚ್ಚಾಗಿ ಗರಂ ಆಗಿದ್ದಾರೆ. ಟೀಮ್ ಇಂಡಿಯಾ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ತಮ್ಮ ಟ್ವಿಟ್ಟರ್‌ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಜೊತೆಗೆ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಕೂಡ ಇದ್ದಾರೆ.
ಈ ಫೋಟೋಗೆ ಅಭಿಮಾನಿಗಳು ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ಬಾರದ ಕಾರಣ ತಮ್ಮ ಆಕ್ರೋಶಗಳನ್ನು ಟ್ವೀಟ್ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. 'ಮೊದಲು ಕ್ರಿಕೆಟ್ ಆಡಿ, ಆಮೇಲೆ ಫೋಸ್ ಕೊಡಿ' ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನೊಬ್ರು ಅಭಿಮಾನಿ '90ರ ದಶಕದ ಆಟಗಾರರು ಪಿಚ್‌ನಲ್ಲಿ ಪೋಸ್ ಕೊಡುತ್ತಿದ್ದರು, ಆದರೆ ಈ ಆಟಗಾರರು ಇಂಟರ್‌ನೆಟ್‌ನಲ್ಲಿ ಪೋಸ್ ಕೊಡುತ್ತಿದ್ದಾರೆ' ಎಂದು ಕಿಚಾಯಿಸಿದ್ದಾರೆ. ಹೀಗೆ ಮೊದಲ ಪಂದ್ಯವನ್ನು ಸೋತ ಟೀಮ್ ಇಂಡಿಯಾ ಆಟಗಾರರಿಗೆ ಟ್ವಿಟ್ಟರ್‌ನಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು ಬಿಸಿಮುಟ್ಟಿಸುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications