ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತಂಡ ಆಯ್ಕೆಯ ಚಿಂತೆ, ಇನ್ನಿತರ ಅಸಂಬದ್ಧಗಳ ನಿಲ್ಲಿಸಿ: ಎಬಿ ಡಿ ವಿಲಿಯರ್ಸ್

Stop worrying about team selection and other nonsense, says AB de Villiers

ಲಂಡನ್‌: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ 157 ರನ್ ಜಯ ಗಳಿಸಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಸೋಮವಾರ (ಸೆಪ್ಟೆಂಬರ್‌ 6) ಮುಕ್ತಾಯಗೊಂಡಿರುವ ಪಂದ್ಯದಲ್ಲಿ ಗೆದ್ದಿರುವ ಭಾರತ ಐದು ಪಂದ್ಯಗಳ ಈ ಕುತೂಹಲಕಾರಿ ಟೆಸ್ಟ್‌ ಪಂದ್ಯದಲ್ಲಿ 2-1ರ ಮುನ್ನಡೆಯೂ ಸಾಧಿಸಿದೆ. ಅಭೂತಪೂರ್ವ ಗೆಲುವನ್ನು ಕಂಡಿರುವ ಭಾರತಕ್ಕೆ ಕ್ರಿಕೆಟರ್ಸ್, ಕ್ರಿಕೆಟ್ ಪ್ರೇಮಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಭಾರತ vs ಇಂಗ್ಲೆಂಡ್: ಇಂಗ್ಲೆಂಡ್‌ ನೆಲದಲ್ಲಿ ಬಲು ವಿಶಿಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿಭಾರತ vs ಇಂಗ್ಲೆಂಡ್: ಇಂಗ್ಲೆಂಡ್‌ ನೆಲದಲ್ಲಿ ಬಲು ವಿಶಿಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ದಕ್ಷಿಣ ಆಫ್ರಿಕಾ ತಂಡದ ಮಾಜಿ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್ ಕೂಡ ಟೀಮ್ ಇಂಡಿಯಾಕ್ಕೆ ಶುಭಾಶಯ ಕೋರಿ ಟ್ವೀಟ್‌ ಮಾಡಿದ್ದಾರೆ. ಭಾರತ ಗೆದ್ದ ಬಳಿಕ ಬಂದ ಪ್ರತಿಕ್ರಿಯೆಗಳಲ್ಲಿ ಎಬಿಡಿ ಪ್ರತಿಕ್ರಿಯೆ ಕೊಂಚ ಹೆಚ್ಚೇ ಗಮನ ಸೆಳೆಯುವಂತಿದೆ.

AB De Villiers ಈಗ UAE ತಲುಪಿ , RCB ತಂಡ ಸೇರಿಕೊಂಡರು | Oneindia Kannada

ವೀಕ್ಷಕರಾಗಿ ನಾನ್‌ಸೆನ್ಸ್‌ಗಳನ್ನು ನಿಲ್ಲಿಸಿಬಿಡಿ
'ಟೆಸ್ಟ್‌ ಕ್ರಿಕೆಟ್‌ನ ವೀಕ್ಷಕರಾಗಿ ತಂಡದ ಆಯ್ಕೆ ಸೇರಿದಂತೆ ಇನ್ನಿತರ ಅಸಂಬದ್ದ ಸಂಗತಿಗಳ ಬಗ್ಗೆ ಚಿಂತೆ ಮಾಡುವುದನ್ನು ನಿಲ್ಲಿಸಿ. ನಿಮ್ಮ ಕಣ್ಮುಂದೆ ನಡೆಯುತ್ತಿರುವ ಸ್ಪರ್ಧೆ, ಉತ್ಸಾಹ, ಕೌಶಲ್ಯ ಮತ್ತು ದೇಶಭಕ್ತಿಯನ್ನು ಪ್ರಶಂಸಿಸಲು ಪ್ರಾರಂಭಿಸಿ. ಇಲ್ಲದಿದ್ದರೆ ನೀವೊಂದು ಒಳ್ಳೆಯ ಆಟವನ್ನು ಮಿಸ್ ಮಾಡಿಕೊಳ್ಳುತ್ತೀರಿ' ಎಂದು ಮಾರ್ಮಿಕವಾಗಿ ಆರಂಭದಲ್ಲಿ ಟ್ವೀಟ್ ಮಾಡಿದ್ದ ಎಬಿಡಿ, ಅದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ್ದಾರೆ. 'ಟೀಮ್ ಇಂಡಿಯಾ ಚೆನ್ನಾಗಿ ಆಡಿದೆ. ನಾಯಕನಾಗಿ ವಿರಾಟ್ ಕೊಹ್ಲಿಯೂ ಉತ್ತಮ ನಾಯಕತ್ವ ನೀಡಿದ್ದಾರೆ. ತಂಡದ ಪ್ರತಿಯೊಬ್ಬರೂ ಅದ್ಭುತ ಕೌಶಲ, ದಿಟ್ಟತನ ತೋರಿಸಿದ್ದೀರಿ. ಜೋ ರೂಟ್ ಮತ್ತು ಇಂಗ್ಲೆಂಡ್ ತಂಡ ಕೂಡ ಉತ್ತಮ ಪ್ರದರ್ಶನ ನೀಡಿತು. ಶ್ರೇಷ್ಠವಾದ ನಮ್ಮ ಟೆಸ್ಟ್‌ ಕ್ರಿಕೆಟ್‌ ದಾಖಲೆಗೆ ಮತ್ತೊಂದು ಶ್ರೇಷ್ಠ ಆಟ ಸೇರ್ಪಡೆಯಾಗಿದೆ. ಫೈನಲ್ ಪಂದ್ಯ ನೋಡಲು ಕಾರತನಾಗಿದ್ದೇನೆ' ಎಂದು ಎಬಿಡಿ ಬರೆದುಕೊಂಡಿದ್ದಾರೆ. ಟೆಸ್ಟ್‌ ಸರಣಿಯುದ್ದಕ್ಕೂ ಭಾರತೀಯ ತಂಡ ಆಯ್ಕೆಯ ಬಗ್ಗೆ ಒಬ್ಬೊಬ್ಬ ಕ್ರಿಕೆಟ್ ಪರಿಣಿತ ಮತ್ತು ಅಭಿಮಾನಿ ಕೂಡ ಒಂದೊಂದು ಹೇಳಿಕೆ ನೀಡಿದ್ದರು. ಆ ಆಟಗಾರ ಆಯ್ಕೆ ಮಾಡಬೇಕಿತ್ತು, ಈತನನ್ನು ಆರಿಸಬಾರದಿತ್ತು ಎಂದೆಲ್ಲಾ ಹೇಳಿದ್ದರು. ಇದಕ್ಕೆ ತಿರುಗೇಟೆಂಬಂತೆ ಎಬಿಡಿ ಪ್ರತಿಕ್ರಿಯಿಸಿದ್ದಾರೆ.

ಭಾರತ vs ಇಂಗ್ಲೆಂಡ್: ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಜಸ್‌ಪ್ರೀತ್‌ ಬೂಮ್ರಾಭಾರತ vs ಇಂಗ್ಲೆಂಡ್: ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಜಸ್‌ಪ್ರೀತ್‌ ಬೂಮ್ರಾ

ಎರಡು ಇನ್ನಿಂಗ್ಸ್‌ಗಳಲ್ಲಿ ಭಾರತದ ಸಂಕ್ಷಿಪ್ತ ಸ್ಕೋರ್‌
ಭಾರತ ಮೊದಲ ಇನ್ನಿಂಗ್ಸ್: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ಆರಂಭಿಕ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 11, ಕೆಎಲ್ ರಾಹುಲ್ 17, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.
ಭಾರತದ ದ್ವಿತೀಯ ಇನ್ನಿಂಗ್ಸ್: ಭಾರತ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್‌ ನೀಡಿತು. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 127, ಕೆಎಲ್ ರಾಹುಲ್ 46, ಚೇತೇಶ್ವರ್ ಪೂಜಾರ 61, ವಿರಾಟ್ ಕೊಹ್ಲಿ 44, ರವೀಂದ್ರ ಜಡೇಜಾ 17, ರಿಷಭ್ ಪಂತ್ 50, ಶಾರ್ದೂಲ್ ಠಾಕೂರ್ 60, ಉಮೇಶ್ ಯಾದವ್ 25 ರನ್‌ನೊಂದಿಗೆ 148.2 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 466 ರನ್ ಬಾರಿಸಿ ಇಂಗ್ಲೆಂಡ್ ಗೆಲುವಿಗೆ 368 ರನ್ ಗುರಿ ನೀಡಲಾಗಿತ್ತು.

ಎರಡು ಇನ್ನಿಂಗ್ಸ್‌ಗಳಲ್ಲಿ ಇಂಗ್ಲೆಂಡ್ ಸ್ಕೋರ್
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಜೋ ರೂಟ್ 21, ಆಲಿ ಪೋಪ್ 81, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.
ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್‌: ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್, ರೋರಿ ಬರ್ನ್ಸ್ 50, ಹಸೀಬ್ ಹಮೀದ್ 63, ಡೇವಿಡ್ ಮಲನ್ 5, ಜೋ ರೂಟ್ 36, ಒಲ್ಲಿ ಪೋಪ್ 2, ಜಾನಿ ಬೈರ್‌ಸ್ಟೋ 0, ಕ್ರಿಸ್ ವೋಕ್ಸ್ 18, ಕ್ರೇಗ್ ಓವರ್‌ಟನ್ 10, ಒಲ್ಲಿ ರಾಬಿನ್ಸನ್ 10, ಜೇಮ್ಸ್ ಆ್ಯಂಡರ್ಸನ್ 2 ರನ್‌ನೊಂದಿಗೆ 92.2ನೇ ಓವರ್‌ಗೆ ಎಲ್ಲಾ ವಿಕೆಟ್ ಕಳೆದು 210 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

Story first published: Monday, September 6, 2021, 23:08 [IST]
Other articles published on Sep 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X