Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ ವಿರುದ್ಧ ಬ್ರಾಡ್ ಬೆಂಕಿ: ವಿಶೇಷ ದಾಖಲೆ ಬರೆದ ಇಂಗ್ಲೆಂಡ್ ವೇಗಿ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಆಸ್ಟ್ರೇಲಿಯಾ ತಂಡದ ವಿರುದ್ಧವೇ ಸ್ಟುವರ್ಟ್ ಬ್ರಾಡ್ 150 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಾಧನೆ ಮಾಡಿದ ಮೊದಲ ಇಂಗ್ಲೆಂಡ್ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್.

ಆಸ್ಟ್ರೇಲಿಯಾ ವಿರುದ್ಧದ ಆಶಸ್ ಸರಣಿಯ ಕೊನೆಯ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟುವರ್ಟ್ ಬ್ರಾಡ್ ಈಗಾಗಲೇ ಎರಡು ವಿಕೆಟ್ ಪಡೆದುಕೊಂಡಿದ್ದು ಈ ಮೂಲಕ ಈ ಮೈಲಿಗಲ್ಲನ್ನು ದಾಟಿದ್ದಾರೆ. ಈ ವಿಶೇಷ ದಾಖಲೆ ಸ್ಟುವರ್ಟ್ ಬ್ರಾಡ್ ಅವರ ವಿಶೇಷ ಸಾಮರ್ಥ್ಯ ಹಾಗೂ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇದೇ ಕಾರಣಕ್ಕೆ ಟೆಸ್ಟ್ ಕ್ರಿಕೆಟ್‌ ಕಂಡ ಸರ್ವಶ್ರೇಷ್ಠ ವೇಗದ ಬೌಲರ್‌ಗಳ ಪಟ್ಟಿಯಲ್ಲಿಯೂ ಸ್ಟುವರ್ಟ್ ಬ್ರಾಡ್ ಸ್ಥಾನ ಪಡೆದಿದ್ದಾರೆ.

Stuart Broad record in Ashes: becomes first England bowler to reach 150 wickets against Australia

ಇನ್ನು ಎರಡನೇ ದಿನದಾಟದಲ್ಲಿ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡಕ್ಕೆ ಭೋಚನ ವಿರಾಮಕ್ಕು ಮುನ್ನ ಎರಡು ಆಘಾತ ನೀಡಿ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. 47 ರನ್‌ಗಳಿಸಿದ್ದ ಉಸ್ಮಾನ್ ಝವಾಜಾ ಅವರನ್ನು ಬೌಲ್ಡ್ ಮಾಡುವ ಮೂಲಕ ಔಟ್ ಮಾಡಿದ ಬ್ರಾಡ್ ಅದಾದ ಬಳಿಕ ಟ್ರವೀಸ್ ಹೆಡ್ ಅವರನ್ನು ಕೂಡ ಔಟ್ ಮಾಡುವಲ್ಲಿ ಯಶಸ್ವಿಯಾದರು. ಹೀಗಾಗಿ ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ದಾಂಡಿಗರ ವಿರುದ್ಧ ಹಿಡಿತ ಸಾಧಿಸಲು ಕಾರಣವಾಗಿದೆ.

ಸ್ಟುವರ್ಟ್ ಬ್ರಾಡ್ ಅವರ ಈ ಸಾಧನೆಯಿಂದಾಗಿ ಅವರನ್ನು ಆಸ್ಟ್ರೇಲಿಯಾದ ದಿಗ್ಗಜ ಬೌಲರ್‌ಗಳಾದ ಶೇನ್ ವಾರ್ನ್ ಹಾಗೂ ಗ್ಲೆನ್ ಮೆಕ್‌ಗ್ರಾಥ್ ಸಾಲಿಗೆ ಸೇರುವಂತೆ ಮಾಡಿದೆ. ಆಶಸ್ ಟೆಸ್ಟ್ ಸರಣಿಯಲ್ಲಿ ಈ ಇಬ್ಬರು ಕೂಡ 150 ವಿಕೆಟ್‌ಗಳ ಸಾಧನೆ ಮಾಡಿದ್ದರು. ಇಂಗ್ಲೆಂಡ್ ಆಟಗಾರರ ಪೈಕಿ ಈ ಸಾಧನೆ ಮಾಡಿದ ಮೊದಲಿಗ ಎನಿಸಿಕೊಂಡಿದ್ದಾರೆ ಬ್ರಾಡ್. ಈ ಮೂಲಕ ಇಂಗ್ಲೀಶ್ ಕ್ರಿಕೆಟ್‌ಗೆ ಬ್ರಾಡ್ ನೀಡಿರುವ ವಿಶೇಷ ಕೊಡುಗೆ ಏನು ಎಂಥಾದ್ದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇನ್ನು ಆಶಸ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಶೇನ್ ವಾರ್ನ್ ಹೊಂದಿದ್ದು 195 ವಿಕೆಟ್‌ಗಳನ್ನು ವಾರ್ನ್ ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ. ಅದಾದ ಬಳಿಕ ಡೆನಿಸ್ ಲಿಲ್ಲಿ ಇದ್ದು 167 ವಿಕೆಟ್ ಪಡೆದುಕೊಂಡಿದ್ದಾರೆ. ಇನ್ನು ಗ್ಲೆನ್ ಮೆಕ್‌ಗ್ರಾಥ್ 157 ವಿಕೆಟ್‌ಗಳನ್ನು ಸಂಪಾದಿಸಿದ್ದಾರೆ.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್ ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಟಾಡ್ ಮರ್ಫಿ

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

Story first published: Friday, July 28, 2023, 20:19 [IST]
Other articles published on Jul 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+