ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ಪ್ರದರ್ಶನಕ್ಕೆ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ

Sunil Gavaskar expresses his disappointment on team india skipper virat kohli

ಲಂಡನ್, ಆಗಸ್ಟ್ 16: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಎರಡು ತಂಡಗಳು ಸಾಕಷ್ಟು ಏರಿಳಿತಗಳನ್ನು ಕಾಣುತ್ತಿದೆ. ಪಂದ್ಯದ ಫಲಿತಾಂಶ ಸಾಕಷ್ಟು ಕುತೂಹಲ ಮೂಡಿಸಿದೆ. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಇನ್ನಿಂಗ್ಸ್‌ನಲ್ಲಿಯೂ ವಿಫಲವಾಗಿರುವುದು ಮಾಜಿ ಕ್ರಿಕೆಟಿಗ, ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅಸಮಾಧಾನಕ್ಕೆ ಕಾರಣವಾಗಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಾರ್ಮ್‌ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 20 ರನ್‌ಗಳಿಗೆ ವಿಕೆಟ್ ಕಳೆದುಕೊಂಡಿದ್ದಾರೆ. ಅಗಲವಾಗಿ ಬಂದ ಎಸೆತವನ್ನು ಎದುರಿಸಲು ಹೋಗಿ ವಿರಾಟ್ ಕೊಹ್ಲಿ ಎಡ್ಜ್ ಆಡುವ ಮೂಲಕ ವಿಕೆಟ್ ಕಳೆದುಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ನಾಯಕನ ವಿಕೆಟ್‌ಅನ್ನು ಯುವ ಆಟಗಾರ ಸ್ಯಾಮ್ ಕರನ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಇಳಿಯುವ ಸಂದರ್ಭದಲ್ಲಿ ಭಾರತ 27 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಮಡು ಸಂಕಷ್ಟದಲ್ಲಿತ್ತು. ಇಂತಾ ಸಂದರ್ಭದಲ್ಲಿ ನಾಯಕಿಂದ ಭಾರತ ತಮಡ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಿತ್ತು. ಆದರೆ ಅದಕ್ಕೆ ಪೂರಕವಾದ ಪ್ರದರ್ಶನ ನೀಡಲು ಕೊಹ್ಲಿ ವಿಫಲವಾದರು. ಈ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದು ಭಾರತ ತಂಡದ ಈ ಅನುಭವಿ ಆಟಗಾರ ಯಾವ ಕಾರಣಕ್ಕಾಗಿ ಪರದಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಭಾರತ vs ಇಂಗ್ಲೆಂಡ್: ಯಾರು ಏನೇ ಅಂದರೂ ಇಂಗ್ಲೆಂಡ್ ಗೆಲ್ಲಲಿದೆ ಎಂದ ಭಾರತದ ಮಾಜಿ ಕ್ರಿಕೆಟಿಗ!ಭಾರತ vs ಇಂಗ್ಲೆಂಡ್: ಯಾರು ಏನೇ ಅಂದರೂ ಇಂಗ್ಲೆಂಡ್ ಗೆಲ್ಲಲಿದೆ ಎಂದ ಭಾರತದ ಮಾಜಿ ಕ್ರಿಕೆಟಿಗ!

2014ರಿಂದ ಬದಲಾವಣೆ ಮಾಡಿಕೊಂಡಿದ್ದ ಬ್ಯಾಟಿಂಗ್‌ನಲ್ಲಿನ ತಾಂತ್ರಿಕ ಅಂಶಗಳು ವಿರಾಟ್ ಕೊಹ್ಲಿಗೆ ಸಾಕಷ್ಟು ಯಶಸ್ಸನ್ನು ನೀಡಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 8000ಕ್ಕೂ ಅಧಿಕ ರನ್‌ಗಳಿಸಿದ್ದಾರೆ. ಆದರೆ ಈ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಆಫ್ ಸ್ಟಂಪ್‌ಗಿಂತ ಆಚೆ ಹೋಗುತ್ತಿದ್ದ ಎಸೆತಗಳನ್ನು ಮುಂಚೆಯೇ ಆಡುತ್ತಿದ್ದರು" ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

"ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಡಸುತ್ತಿರಬೇಕಾದರೆ ಅವರ ಕಾಲುಗಳು ಎಲ್ಲೋ ಇರುತ್ತಿತ್ತು. ಬ್ಯಾಟ್ ಇನ್ನೆಲ್ಲೋ ಇತ್ತು. ಅದರರ್ಥ ಅವರು ನಿಜವಾಗಿಯೂ ಉತ್ತಮವಾಗಿ ಆಡಿಲ್ಲ ಎಂಬುದಾಗಿದೆ" ಎಂದು ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಪಂದ್ಯದಲ್ಲಿಯೂ ರನ್‌ಗಳಿಸಲು ವಿಫಲವಾಗಿದ್ದ ವಿರಾಟ್: ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಿಕ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಭಾರೀ ಹಿನ್ನೆಡೆಯನ್ನು ಅನುಭವಿಸಿದರು. ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕಾರಣ ಈ ಬಾರಿಯೂ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳು ಇತ್ತು. ಆದರೆ ಮೊದಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲಿಯೇ ವಿರಾಟ್ ಕೊಹ್ಲಿ ಅನುಭವಿ ಜೇಮ್ಸ್ ಆಂಡರ್ಸನ್‌ಗೆ ವಿಕೆಟ್ ಒಪ್ಪಿಸಿ ಕ್ರೀಸ್ ತೊರೆದರು. ಅಂತಿಮ ದಿನ ಮಳೆ ಸುರಿದ ಕಾರಣ ಈ ಪಂದ್ಯ ಡ್ರಾದಲ್ಲಿ ಮುಕ್ತಾಯವಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಡೆಸುವ ಅವಕಾಶ ದೊರೆತಿರಲಿಲ್ಲ.

ಉತ್ತಮ ಪ್ರದರ್ಶನ ನೀಡುವ ಭರವಸೆ ನೀಡಿದ ಕೊಹ್ಲಿ: ಇನ್ನು ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮೂಡಿಸಿದ್ದರು. ಆದರೆ 42 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಉತ್ತಮ ಫಾರ್ಮ್‌ನಲ್ಲಿದ್ದಂತೆ ಕಂಡು ಬಂದರೂ ವಿರಾಟ್ ಕೊಹ್ಲಿ ದೊಡ್ಡ ಮೊತ್ತವನ್ನು ಗಳಿಸುವಲ್ಲಿ ವಿಫಲವಾದರು. ಇನ್ನು ಎರಡನೇ ಇನ್ನಿಂಗ್ಸ್ ಭಾರತದ ಪಾಲಿಗೆ ನಿರ್ಣಾಯಕವಾಗಿದ್ದು ಟೀಮ್ ಇಂಡಿಯಾ ನಾಯಕನಿಂದ ನಿರ್ಣಾಯಕ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 20 ರನ್‌ಗಳಿಗೆ ಔಟ್ ಆಗುವ ಮೂಲಕ ಟೀಮ್ ಇಂಡಿಯಾವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದರು.

WTC ಫೈನಲ್‌ ಪಂದ್ಯದಲ್ಲಿಯೂ ಕೊಹ್ಲಿ ಆಘಾತ: ಇನ್ನು ಇಂಗ್ಲೆಂಡ್ ನೆಲದಲ್ಲಿಯೇ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿಯೂ ನಾಯಕ ಕೊಹ್ಲಿ ಬ್ಯಾಟ್‌ನಿಂದ ನಿರೀಕ್ಷಿತ ಪ್ರಮಾಣದಲ್ಲಿ ರನ್ ಹರಿದು ಬಾರದಿರುವುದು ತಂಡಕ್ಕೆ ದೊಡ್ಡ ಆಘಾತ ನೀಡಿತ್ತು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 44 ರನ್‌ಗಳಿಸಿದ್ದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ 13 ರನ್‌ಗಳಿಗೆ ಆಟ ಮುಗಿಸಿದ್ದರು. ಹೀಗೆ ವಿರಾಟ್ ಕೊಹ್ಲಿ ಸತತವಾಗಿ ವೈಫಲ್ಯವನ್ನು ಅನುಭವಿಸುತ್ತಿದ್ದಾರೆ.

Story first published: Monday, August 16, 2021, 18:24 [IST]
Other articles published on Aug 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X