ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಪಡೆಯನ್ನು ಹಾಡಿಹೊಗಳಿದ ಗವಾಸ್ಕರ್: ಇಲ್ಲಿದೆ ಕಾರಣ
ಭಾರತ ತಂಡ ಪಾಕಿಸ್ತಾನವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈ ಬಾರಿಯ ವಿಶ್ವಕಪ್‌ನ ಬಹುನಿರೀಕ್ಷಿತ ಪಂದ್ಯ ಇದಾಗಿದ್ದು ಎಲ್ಲರ ಚಿತ್ತ ಈ ಪಂದ್ಯದ ಮೇಲೆ ನೆಟ್ಟಿದೆ. ಈ ಪಂದ್ಯದ ಆರಂಭಕ್ಕೂ ಮುನ್ನ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಭಾರತ ತಂಡದ ಬಗ್ಗೆ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಭಾರತ ತಂಡ ಇತ್ತೀಚಿನ ದಿನಗಳಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತವಾಗಿ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ಇದು ಪಾಕಿಸ್ತಾನವನ್ನು ಮಣಿಸಲು ಸಾಕಾಲಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್. "ಭಾರತದ ಆಲ್‌ರೌಂಡರ್ ಪ್ರದರ್ಶನ ಬಹಳ ಬಹಳ ಉತ್ತಮವಾಗಿದೆ. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಇದುವೇ ನಿಮಗೆ ಭರವಸೆ ನೀಡಲಿದೆ" ಎಂದಿದ್ದಾರೆ ಗವಾಸ್ಕರ್.

ಇನ್ನು ಇದೇ ಸಂದರ್ಭದಲ್ಲಿ ಬಾಬರ್ ಅಜಂ ಆಟದ ಬಗ್ಗೆ ಸುನಿಲ್ ಗವಾಸ್ಕರ್ ಕಟು ಮಾತುಗಳನ್ನಾಡಿದ್ದು ಆತನ ಪ್ರದರ್ಶನ ತಂಡದ ಮೇಲೆ ಒತ್ತಡವನ್ನುಂಟು ಮಾಡಲಿದೆ ಎಂದಿದ್ದಾರೆ. "ಪಾಕಿಸ್ತಾನ ಮತ್ತು ಅದರ ನಾಯಕ ಬಾಬರ್ ಅಜಂ ಉತ್ತಮವಾಗಿ ರನ್‌ಗಳಿಸುತ್ತಿಲ್ಲ. ಇದು ಸಹಜವಾಗಿಯೇ ಒತ್ತಡಕ್ಕೆ ಸಿಲುಕಿಸಲಿದೆ. ಮೈದಾನದಲ್ಲಿ ಹೆಚ್ಚು ಕಾಲ ಕಳೆದಿಲ್ಲ ಎನ್ನುವುದು ಆತನಿಗೂ ಕಾಡಲಿದೆ" ಎಂದಿದ್ದಾರೆ ಗವಾಸ್ಕರ್.
ಮುಂದುವರಿದು ಮಾತನಾಡಿದ ಸುನಿಲ್ ಗವಾಸ್ಕರ್ ಈ ಪಂದ್ಯದಲ್ಲಿ ಭಾರತವೇ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಮಡದ ನಾಯಕ ಬಾಬಬ್ ಅಜಂ ಎರಡು ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದಾರೆ. ಮೊದಲಿಗೆ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಬಾಬರ್ ಕೇವಲ 5 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದರೆ ನಂತರ ಶ್ರೀಲಂಕಾ ವಿರುದ್ಧ 10 ರನ್‌ಗಳನ್ನು ಮಾತ್ರವೇ ಗಳಿಸಿದ್ದರು.
2023 ರ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ದಾಖಲೆಯ ಕುರಿತು ಮಾತನಾಡಿದ ಬಾಬರ್ ಅಜಮ್, ದಾಖಲೆಗಳು ಇರುವುದೇ ಮುರಿಯುವದಕ್ಕಾಗಿ ಎಂದು ಹೇಳಿದ್ದಾರೆ. 2021ರ ಟಿ20 ವಿಶ್ವಕಪ್‌ನ ಬಳಿಕ ಬಾಬರ್ ನೇತೃತ್ವದ ಪಾಕಿಸ್ತಾನ ತಂಡದ ವಿರುದ್ಧ ಭಾರತ ವಿರುದ್ಧ 6 ಪಂದ್ಯಗಳನ್ನು ಆಡಿದೆ. ಈ 6 ಪಂದ್ಯಗಳಲ್ಲಿ ಭಾರತ 3 ಪಂದ್ಯಗಳಲ್ಲಿ ಗೆದ್ದುಕೊಂಡಿದ್ದು ಪಾಕಿಸ್ತಾನ 2 ಪಂದಗ್ಯದಲ್ಲಿ ಗೆದ್ದುಕೊಂಡಿದೆ. ಏಷ್ಯಾಕಪ್ ಟೂರ್ನಿಯ ಒಂದು ಪಂದ್ಯ ಮಳೆಗೆ ಆಹುತಿಯಾಗಿತ್ತು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶುಬ್ಮನ್ ಗಿಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್
ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಸೌದ್ ಶಕೀಲ್, ಇಫ್ತಿಕಾರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಘಾ ಸಲ್ಮಾನ್, ಫಖರ್ ಜಮಾನ್, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications