Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Sunil Gavaskar: ಐಪಿಎಲ್ ಪ್ರಶಸ್ತಿ ಎತ್ತಿ ಹಿಡಿಯುವ ತಂಡದ ಭವಿಷ್ಯ ನುಡಿದ ಸುನಿಲ್ ಗವಾಸ್ಕರ್

ಐಪಿಎಲ್ 2025 ರ ಸೀಸನ್ ಭಾರಿ ಕುತೂಹಲ ಮೂಡಿಸಿದೆ. ಪ್ಲೇಆಫ್ ತಲುಪಲು ತಂಡಗಳ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಬಹುತೇಕ ಲೀಗ್‌ನಿಂದ ಹೊರಗುಳಿದಿವೆ. ಇಂತಹ ಸಂದರ್ಭದಲ್ಲಿ ಕಪ್ ಗೆಲ್ಲುವ ತಂಡ ಯಾವುದು ಎಂಬ ಚರ್ಚೆಗಳು ಶುರುವಾಗಿವೆ. ಭಾರತ ತಂಡದ ದಿಗ್ಗಜ ಬ್ಯಾಟರ್ ಸುನಿಲ್ ಗವಾಸ್ಕರ್ ಐಪಿಎಲ್ 2025 ರ ಚಾಂಪಿಯನ್ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಐಪಿಎಲ್ 2025 ರ ಟ್ರೋಫಿಯನ್ನು ಯಾವ ತಂಡ ಎತ್ತಿ ಹಿಡಿಯುತ್ತದೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಐಪಿಎಲ್ 2025 ರ ಚಾಂಪಿಯನ್ ರೇಸ್‌ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಂಚೂಣಿಯಲ್ಲಿವೆ.

Sunil Gavaskar predicts IPL 2025 champion team

ಸಂದರ್ಶನವೊಂದರಲ್ಲಿ ಮಾತನಾಡಿರುವ ಸಂವಾದದಲ್ಲಿ ಸುನಿಲ್ ಗವಾಸ್ಕರ್, ಮುಂಬೈ ಇಂಡಿಯನ್ಸ್ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಸರಿ ಸಮವಾಗಿದೆ. ಆದಾಗ್ಯೂ ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ರೇಸ್‌ನಲ್ಲಿ ಸ್ವಲ್ಪ ಮುಂದಿದೆ. ಬೆಂಗಳೂರು ತಂಡ ಐಪಿಎಲ್ 2025 ಪ್ರಶಸ್ತಿಯನ್ನು ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ಸ್ ಚೆನ್ನಾಗಿ ಬ್ಯಾಟಿಂಗ್ ಮಾಡಿದರು ಮತ್ತು ಅದ್ಭುತವಾಗಿ ಕ್ಷೇತ್ರರಕ್ಷಣೆ ಮಾಡಿದರು. ಮುಂಬೈ ಇಂಡಿಯನ್ಸ್ ತಂಡವು ಬಲಿಷ್ಠವಾಗಿದ್ದು, ಮುನ್ನಡೆ ಸಾಧಿಸಿದೆ. ಮುಂಬೈ ಅಗ್ರ ತಂಡಗಳ ವಿರುದ್ಧ ಮೂರು ಕಠಿಣ ಪಂದ್ಯಗಳನ್ನು ಎದುರಿಸಬೇಕಾಗಿರುವುದರಿಂದ ಫೈನಲ್ ತಲುಪುವುದೇ
ಎಂಬುದು ಪ್ರಶ್ನೆ ಎದುರಾಗಿದೆ. ಮುಂಬೈ ಈ ಲಯವನ್ನು ಹೇಗೆ ಕಾಯ್ದುಕೊಳ್ಳುತ್ತಾರೆ ಎಂಬುದು ಮುಖ್ಯವಾಗುತ್ತದೆ. ಆದರೆ ಹೌದು, ಆರ್‌ಸಿಬಿ ಖಂಡಿತವಾಗಿಯೂ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಯಾಗಿದೆ ಎಂದು ಗವಾಸ್ಕರ್ ಭವಿಷ್ಯ ನುಡಿದ್ದಾರೆ.

ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ರ 10 ಪಂದ್ಯಗಳಲ್ಲಿ ಇದುವರೆಗೆ 7 ರಲ್ಲಿ ಗೆಲುವು ಸಾಧಿಸಿದ್ದು, 14 ಅಂಕಗಳನ್ನು ಗಳಿಸಿದೆ. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಆರ್‌ಸಿಬಿ ತಂಡ ಮೂರನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಯಶಸ್ಸಿನಲ್ಲಿ ವಿರಾಟ್ ಕೊಹ್ಲಿ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ದೇವದತ್ ಪಡಿಕ್ಕಲ್ ಮತ್ತು ಜೋಶ್ ಹೇಜಲ್‌ವುಡ್‌ರಂತಹ ಸ್ಟಾರ್ ಆಟಗಾರರು ದೊಡ್ಡ ಪಾತ್ರ ವಹಿಸಿದ್ದಾರೆ.

Story first published: Saturday, May 3, 2025, 11:54 [IST]
Other articles published on May 3, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+