ದ್ವಿತೀಯ ಟೆಸ್ಟ್‌ನಲ್ಲಿ ಒಂದು ಬದಲಾವಣೆಗೆ ಸುನಿಲ್ ಗವಾಸ್ಕರ್ ಸಲಹೆ

ಚೆನ್ನೈ: ಇಂಗ್ಲೆಂಡ್ ವಿರುದ್ಧದ ಆರಂಭಿಕ ಟೆಸ್ಟ್‌ನಲ್ಲಿ ಆತಿಥೇಯ ಭಾರತ 227 ರನ್‌ಗಳ ಸೋಲನುಭವಿಸಿದೆ. ಹೀಗಾಗಿ ಮುಂದಿನ ಟೆಸ್ಟ್‌ನಲ್ಲಿ ಗೆಲುವಿನತ್ತ ಟೀಮ್ ಇಂಡಿಯಾ ಕಣ್ಣಿಟ್ಟಿದೆ. ಮುಂದಿನ ಪಂದ್ಯದಲ್ಲಿ ಗೆಲ್ಲಬೇಕಾದರೆ ಎಚ್ಚರಿಕೆಯ ಆಟದ ಜೊತೆಗೆ ತಂಡದಲ್ಲಿ ಬದಲಾವಣೆಯೂ ಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.
ಭಾರತದ ಮಾಜಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಅವರು ದ್ವಿತೀಯ ಟೆಸ್ಟ್‌ನಲ್ಲಿ ತಂಡದಲ್ಲಿ ಏನು ಬದಲಾವಣೆ ಮಾಡಬಹುದು ಎಂಬುದನ್ನು ಹೇಳಿಕೊಂಡಿದ್ದಾರೆ. ಮುಂದಿನ ಪಂದ್ಯದಲ್ಲಿ ಶಹಬಾಝ್ ನದೀಮ್ ಅಥವಾ ವಾಷಿಂಗ್ಟನ್ ಸುಂದರ್ ಬದಲಿಗೆ ಕುಲದೀಪ್ ಯಾದವ್ ಅವರನ್ನು ಪ್ಲೇಯಿಂಗ್ XIಗೆ ತರಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.
'ಮುಂದಿನ ಪಂದ್ಯದಲ್ಲಿ ಶಹಬಾಝ್ ನದೀಮ್ ಅಥವಾ ವಾಷಿಂಗ್ಟನ್ ಸುಂದರ್ ಜಾಗದಲ್ಲಿ ಕುಲದೀಪ್ ಯಾದವ್ ಅವರನ್ನು ಅವರು ಆಡಿಸಬಹುದು. ಆರಂಭಿಕ ಪಂದ್ಯ ಸೋಲಿನ ಪಶ್ಚಾತಾಪಕ್ಕಾದರೂ ಅವರು ಕುಲದೀಪ್ ಅವರನ್ನು ತಂಡದಲ್ಲಿ ಸೇರಿಸಬಹುದು,' ಎಂದು ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 13ರಿಂದ 17ರ ವರೆಗೆ ನಡೆಯಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಫಲಿತಾಂಶ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸ್ಪರ್ಧಿಯನ್ನು ನಿರ್ಧರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications