Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Sunil Gavaskar: ಭಾರತ ತಂಡದ ಪ್ರಮುಖ 3 ಬದಲಾವಣೆಗಳ ವಿರುದ್ಧ ಸುನೀಲ್ ಗವಾಸ್ಕರ್ ಬೇಸರ!

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದ ಭಾರತ ಸೋಲಿನ ಕಹಿ ಅನುಭವಿಸಿತ್ತು. ಸುಮಾರು 36 ವರ್ಷಗಳ ಬಳಿಕ ಭಾರತ ವಿರುದ್ಧ ನ್ಯೂಜಿಲೆಂಡ್ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು.

ಬೆಂಗಳೂರು ಟೆಸ್ಟ್ ಪಂದ್ಯದ ಸೋಲಿಯಿಂದ ಭಾರತ ಕಂಗೆಟ್ಟಿತ್ತು. ನ್ಯೂಜಿಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಟಾಪ್ ಆರ್ಡರ್‌ ಕುಸಿದಿತ್ತು. ಪರಿಣಾಮ ಬೆಂಗಳೂರು ಟೆಸ್ಟ್ ಪಂದ್ಯ ಗೆಲ್ಲುವ ಭಾರತದ ಗೆಲುವಿನ ಆಸೆಗೆ ತಣ್ಣೀರಿಸಿದಂತಾಗಿತ್ತು. ಏಕೆಂದರೆ ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್‌ಗಳಿಗೆ ಸರ್ವಪತನವಾಗಿತ್ತು. ಹೀಗಾಗಿ ಬೆಂಗಳೂರು ಟೆಸ್ಟ್ ಪಂದ್ಯವನ್ನು ಭಾರತ ಕಳೆದುಕೊಳ್ಳಬೇಕಾಯಿತು.

Sunil Gavaskar upset with 3 main changes in team India

ಹೀನಾಯ ಸೋಲಿನಿಂದ ಪುಟಿದೇಳುವ ಸಲುವಾಗಿ, ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ಗೆ ಭಾರತ ಮೂರು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಪುಣೆಯ ಎಂಸಿಎ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಪಂದ್ಯಕ್ಕೆ ಟೀಮ್ ಇಂಡಿಯಾ ಕುಲದೀಪ್ ಯಾದವ್, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟಿದೆ.

ಈ ಮೂವರ ಬದಲಿಗೆ ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್ ಮತ್ತು ಆಕಾಶ್ ದೀಪ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಪ್ರಮುಖ ಬದಲಾವಣೆಗಳಿಗೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಟೀಮ್ ಇಂಡಿಯಾದ ಈ ನಿರ್ಧಾರದ ವಿರುದ್ಧ ಮಾಜಿ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಗವಾಸ್ಕರ್ ಹೇಳಿದ್ದೇನು?

ಪುಣೆ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿನ ಬದಲಾವಣೆಗಳಿಂದ ಸುನೀಲ್ ಗವಾಸ್ಕರ್ ಬೇಸರಗೊಂಡಿದ್ದಾರೆ. ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದು ಸೋಲಿನ ನಂತರ ಭಾರತವು 'ತಮ್ಮ ಬ್ಯಾಟಿಂಗ್' ಬಗ್ಗೆ ಚಿಂತಿಸುತ್ತಿದೆ ಎಂಬುದನ್ನು ತೋರಿಸುತ್ತದೆ. ಗಾಯದ ಸಮಸ್ಯೆಯ ಹೊರತಾಗಿ ಯಾವುದೇ ತಂಡವು ಮೂರು ಬದಲಾವಣೆಗಳನ್ನು ಮಾಡುತ್ತದೆ ಅಂದುಕೊಂಡಿರಲಿಲ್ಲ.

ಭಾರತಕ್ಕೆ ಬೌಲಿಂಗ್‌ಗಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಅಗತ್ಯವಿದೆ. ನ್ಯೂಜಿಲೆಂಡ್‌ನ ಬ್ಯಾಟಿಂಗ್ ಯೂನಿಟ್‌ನಲ್ಲಿ ಎಡಗೈ ಬ್ಯಾಟರ್‌ಗಳ ಬಗ್ಗೆ ಸಾಕಷ್ಟು ಚರ್ಚೆ ಇದೆ. ಆದರೆ ನಾನು ಕುಲದೀಪ್ ಯಾದವ್ ಅವರನ್ನು ಆಯ್ಕೆ ಮಾಡುತ್ತೇನೆ. ಏಕೆಂದರೆ ಅವರು ಎಡಗೈ ಬ್ಯಾಟರ್‌ಗಳ ವಿರುದ್ಧ ಅದ್ಭುತವಾಗಿ ಬೌಲಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

Story first published: Thursday, October 24, 2024, 17:23 [IST]
Other articles published on Oct 24, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+