ಸೂರ್ಯಕುಮಾರ್ ಬ್ಯಾಟಿಂಗ್ ಉಲ್ಲೇಖಿಸಿ ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ ಸುನಿಲ್ ಗವಾಸ್ಕರ್!

ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ ನೀಡಿರುವ ಪ್ರದರ್ಶನಕ್ಕೆ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಓರ್ವ ಆಟಗಾರನ ಬಗ್ಗೆ ಗವಾಸ್ಕರ್ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸೆಮಿಫೈನಲ್ ಹಂತಕ್ಕೇರಿರುವ ಈ ಸಂದರ್ಭದಲ್ಲಿಯೇ ಟೀಮ್ ಇಂಡಿಯಾ ಬಳಗಕ್ಕೆ ಸುನಿಲ್ ಗವಾಸ್ಕರ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.
ಟೀಮ್ ಇಂಡಿಯಾದ ಆಟಗಾರ ಸೂರ್ಯಕುಮಾರ್ ಯಾದವ್ ಪ್ರದರ್ಶನದ ಬಗ್ಗೆ ಸುನಿಲ್ ಗವಾಸ್ಕರ್ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದು ಆತ ಹೊಸ 360 ಡಿಗ್ರಿ ಆಟಗಾರ ಎಂದು ಕೊಂಡಾಡಿದ್ದಾರೆ. ಆದರೆ ಸೂರ್ಯಕುಮಾರ್ ಯಾದವ್ ಮಿಂಚುವಲ್ಲಿ ವಿಫಲವಾದರೆ ಟೀಮ್ ಇಂಡಿಯಾ 140-150 ರನ್‌ಗಳನ್ನು ಗಳಿಸಲು ಕೂಡ ಹರಸಾಹಸ ಪಡಲಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್. ಅತ್ಯುತ್ತಮ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ ಈ ಬಾರಿಯ ವಿಶ್ವಕಪ್‌ನಲ್ಲಿ ಎರಡನೇ ಅತೀ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ.

ಹೊಸ 360 ಡಿಗ್ರಿ ಪ್ಲೇಯರ್
ಸೂಪರ್ 12 ಹಂತದಲಿ ಸೂರ್ಯಕುಮಾರ್ ಯಾದವ್ ಬಹುತೇಕ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನಿಡಿ ಮಿಂಚಿದ್ದಾರೆ. ಆಡಿರುವ 5 ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 75ರ ಸರಾಸರಿಯಲ್ಲಿ 225 ರನ್‌ಗಳನ್ನು ಗಳಿಸಿದ್ದಾರೆ. ಅವರಿ ಸ್ಟ್ರೈಕ್‌ರೇಟ್ ಬರೊಬ್ಬರಿ 193.96. ಈ ಅಮೋಘ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ಕೊಂಡಾಡಿದ್ದು ಸೂರ್ಯಕುಮಾರ್ ಯಾದವ್ ಹೊಸ 360 ಬ್ಯಾಟರ್ ಎಂದು ಹೊಗಳಿದ್ದಾರೆ.

ಸೂರ್ಯ ವಿಫಲವಾದರೆ ಸಂಕಷ್ಟ
ಆದರೆ ಸೂರ್ಯಕುಮಾರ್ ಯಾದವ್ ಮೈದಾನದಲ್ಲೇನಾದರೂ ವಿಫಲವಾದರೆ ಭಾರತ ತಂಡ ಆ ಪಂದ್ಯದಲ್ಲಿ ಭಾರೀ ಹಿನ್ನಡೆ ಅನುಭವಿಸಲಿದೆ ಎಂದು ಸುನಿಲ್ ಗವಾಸ್ಕರ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಸೂರ್ಯಕುಮಾರ್ ಯಾದವ್ ವಿಫಲವಾದರೆ ಭಾರತ 140-150 ರನ್‌ಗಳನ್ನು ಗಳಿಸಲು ಕೂಡ ಪ್ರಯಾಸ ಪಡೆಲಿದೆ ಎಂದು ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ಸೂರ್ಯ
ಜಿಂಬಾಬ್ವೆ ವಿರುದ್ಧ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 61 ರನ್ ಬಾರಿಸಿ ಅಬ್ಬರಿಸಿದ್ದಾರೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಸೂರ್ಯಕುಮಾರ್ ಯಾದವ್ 4 ಸಿಕ್ಸರ್ ಹಾಗೂ 6 ಬೌಂಡರಿ ಬಾರಿಸಿದ್ದಾರೆ. ಬರೊಬ್ಬರಿ 244 ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಿದ್ದು ಪಂದ್ಯದಲ್ಲಿ ಭಾರತ ಸಂಪೂರ್ಣ ಹಿಡಿತ ಸಾಧಿಸಲು ಕಾರಣವಾಯಿತು. ಇನ್ನು ಈ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ವಿಶೇಷ ಸಾಧನೆ ಮಾಡಿದ್ದಾರೆ.
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯುಜುವೇಂದ್ರ ಚಹಾಲ್, ಹರ್ಷಲ್ ಪಟೇಲ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications