IPL MVP: ಸಿಎಸ್‌ಕೆ ಎದುರು ಸುನಿಲ್ ನರೈನ್ ಸೂಪರ್ ಶೋ
ಐಪಿಎಲ್ 2025 ರ 25 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 8 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು. ಸುನಿಲ್ ನರೈನ್ ತಮ್ಮ ಆಲ್‌ರೌಂಡರ್ ಪ್ರದರ್ಶನದ ಮೂಲಕ ಸಿಎಸ್‌ಕೆ ತಂಡವನ್ನು ಸೋಲಿನ ಸುಳಿಗೆ ತಳ್ಳಿದರು. ಇದರೊಂದಿಗೆ ಕೆಕೆಆರ್ ತಂಡದ ಮೂರನೇ ಗೆಲುವಿನಲ್ಲಿ ನರೈನ್ ಪ್ರಮುಖ ಪಾತ್ರವಹಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ 9 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಲಷ್ಟೇ ಶಕ್ತವಾಯಿತು. ಕೆಕೆಆರ್ 10.1 ಓವರ್‌ಗಳಲ್ಲಿ 107 ರನ್ ಗಳಿಸುವ ಮೂಲಕ ಈ ಸರಳ ಗುರಿಯನ್ನು ಸಾಧಿಸಿತು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸುನಿಲ್ ನರೈನ್ ತಮ್ಮ ಆಲ್‌ರೌಂಡರ್ ಪ್ರದರ್ಶನವನ್ನು ತೋರಿಸಿದರು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸುನಿಲ್ ನರೈನ್ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡಲ್ಲೂ ಎಲ್ಲರ ಚಿತ್ತ ಕದ್ದರು. ಈ ಅಮೋಘ ಪ್ರದರ್ಶನಕ್ಕಾಗಿ ಅವರಿಗೆ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ನೀಡಲಾಯಿತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸುನಿಲ್ ನರೈನ್ ತಮ್ಮ ಆಲ್‌ರೌಂಡರ್ ಪ್ರದರ್ಶನವನ್ನು ತೋರಿಸಿದರು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸುನಿಲ್ ನರೈನ್ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡಲ್ಲೂ ಎಲ್ಲರ ಚಿತ್ತ ಕದ್ದರು. ಈ ಅಮೋಘ ಪ್ರದರ್ಶನಕ್ಕಾಗಿ ಅವರಿಗೆ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ನೀಡಲಾಯಿತು.
ಸುನಿಲ್ ನರೈನ್ ಅವರ ಅದ್ಭುತ ಬೌಲಿಂಗ್‌ನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಚೆಪಾಕ್ ಸ್ಪಿನ್ ಪಿಚ್‌ನಲ್ಲಿ ಸಿಎಸ್‌ಕೆ ಬ್ಯಾಟರ್ಸ್ ಅನ್ನು ನರೈನ್ ಕಾಡಿದರು. ನರೈನ್ ಸ್ಪಿನ್ ಬೌಲಿಂಗ್‌ಗೆ ಸಿಎಸ್‌ಕೆ ಬ್ಯಾಟರ್ಸ್ ರನ್ ಗಳಿಸಲು ಪರದಾಟ ನಡೆಸಿದರು. ಕೆಕೆಆರ್ ಸುನಿಲ್ ನರೈನ್ 4 ಓವರ್‌ಗಳಲ್ಲಿ 13 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು.
ನರೈನ್ ಅವರು ರಾಹುಲ್ ತ್ರಿಪಾಠಿ (16), ರವೀಂದ್ರ ಜಡೇಜ (0) ಮತ್ತು ಎಂಎಸ್ ಧೋನಿ (1) ಅವರನ್ನು ಔಟ್ ಮಾಡಿದರು. ಇದಾದ ನಂತರ ಬ್ಯಾಟಿಂಗ್‌ನಲ್ಲಿಯೂ ಕೆಕೆಆರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಿಎಸ್‌ಕೆ ಬೌಲರ್ಸ್ ಬೆಂಡೆತ್ತಿದ ನೈರನ್ 18 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ 44 ರನ್‌ಗಳ ಸ್ಪೋಟಕ ಇನ್ನಿಂಗ್ಸ್ ಆಡಿದರು. ಕೆಕೆಆರ್ ಪರ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ 23 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಅಜಿಂಕ್ಯ ರಹಾನೆ 20 ರನ್ ಮತ್ತು ರಿಂಕು ಸಿಂಗ್ 15 ರನ್ ಗಳಿಸಿ ಅಜೇಯರಾಗಿ ಉಳಿದರು.
ಸಿಎಸ್‌ಕೆ ಪರ ಶಿವಂ ದುಬೆ ಅತಿ ಹೆಚ್ಚು ರನ್ ಗಳಿಸಿದರು. ಅವರು 29 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 31 ರನ್ ಗಳಿಸಿ ಅಜೇಯರಾಗುಳಿದರು. ಮತ್ತು ವಿಜಯ್ ಶಂಕರ್ 21 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 29 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿ, ಸಿಎಸ್‌ಕೆ ತಂಡದ ಬೇರೆ ಯಾವುದೇ ಸ್ಟಾರ್ ಬ್ಯಾಟರ್ಸ್ 20 ರನ್‌ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. ಕೆಕೆಆರ್ ಪರ ಸುನಿಲ್ ನರೈನ್ 3 ವಿಕೆಟ್, ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ತಲಾ 2 ವಿಕೆಟ್, ವೈಭವ್ ಅರೋರಾ ಮತ್ತು ಮೊಯಿನ್ ಅಲಿ ತಲಾ ಒಂದೊಂದು 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications