SRH vs PBKS IPL 2025: ಗೆಲುವಿನ ಟ್ರ್ಯಾಕ್‌ಗೆ ಮರಳುವ ವಿಶ್ವಾಸದಲ್ಲಿ ಸನ್‌ರೈಸರ್ಸ್
ಹೈದರಾಬಾದ್; ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಶನಿವಾರ ನಡೆಲಿರುವ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸವಾಲು ಎದುರಿಸಲಿದೆ. ಪಂಜಾಬ್ ಕಿಂಗ್ಸ್ ತಂಡ ಉತ್ತಮ ಫಾರ್ಮ್‌ನಲ್ಲಿದ್ದು, ಈ ತಂಡವನ್ನು ಕಟ್ಟಿ ಹಾಕುವುದೇ ಹೈದರಾಬಾದ್ ತಂಡಕ್ಕೆ ದೊಡ್ಡ ಚಿಂತೆಯಾಗಿದೆ. ಸನ್ ತಂಡ ಆಡಿದ 5 ಪಂದ್ಯಗಳಲ್ಲಿ 4 ಸೋಲು ಕಂಡು, ಗೆಲುವಿನ ಹಪಾಹಪಿ ನಡೆಸುತ್ತಿದೆ.
ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು ಭರವಸೆ ಮೂಡಿಸಿದ್ದಾರೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಎರಡೂ ತಂಡಗಳು ಭರ್ಜರಿಯಾಗಿವೆ. ಈಗಾಗಲೇ ಎರಡೂ ತಂಡಗಳು 23 ಬಾರಿ ಐಪಿಎಲ್‌ನಲ್ಲಿ ಮುಖಾಮುಖಿಆಗಿದ್ದು, ಎಸ್‌ಆರ್‌ಎಚ್ 16 ಪಂದ್ಯಗಳನ್ನು ಗೆದ್ದಿದ್ದು, ಪಂಜಾಬ್ ತಂಡ 7 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಹೇಗಿದೆ ಪಿಚ್?
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬ್ಯಾಟರ್‌ಗಳು ರನ್ ಗಳಿಸಲು ಪರದಾಟ ನಡೆಸಿದ್ದಾರೆ. ಆದರೆ ಈ ಹಿಂದಿನ ಐಪಿಎಲ್ ಪಂದ್ಯಗಳಲ್ಲಿ ಈ ಪಿಚ್ ಬ್ಯಾಟರ್‌ಗಳಿಗೆ ಸಹಾಯ ಮಾಡಿತ್ತು. ಈ ಮೈದಾನದಲ್ಲಿ ಆಡಿದ 80 ಐಪಿಎಲ್ ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 35 ಬಾರಿ, ಎರಡನೇ ಬಾರಿ ಬ್ಯಾಟ್ ಮಾಡಿದ ತಂಡ 45 ಬಾರಿ ಗೆದ್ದಿದೆ.
ಸ್ಟಾರ್‌ಗಳ ವೈಫಲ್ಯ
ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಸ್ಟಾರ್‌ಗಳ ವೈಫಲ್ಯ ನುಂಗಲಾರದ ತುತ್ತಾಗಿದೆ. ಈ ಸ್ಟಾರ್‌ಗಳು ಹೊಡೆದು ಆಡುವುದನ್ನು ಬಿಟ್ಟು ತಡೆದು ಆಡಲು ಆದ್ಯತೆ ನೀಡಬೇಕಿದೆ. ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಬಿಗ್ ಇನಿಂಗ್ಸ್ ಕಟ್ಟುವ ಅನಿವಾರ್ಯತೆ ಇದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್, ಹ್ಯಾನ್ರಿಕ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ ತಮ್ಮ ಘನತೆಗೆ ತಕ್ಕ ಆಟವನ್ನು ಆಡಬೇಕಿದೆ.

ಈ ತಂಡದಲ್ಲಿ ಸ್ಟಾರ್ ಬೌಲರ್‌ಗಳ ದಂಡೇ ಇದೆ. ಪ್ಯಾಟ್ ಕಮಿನ್ಸ್, ಮೊಹಮ್ಮದ್ ಶಮಿ ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಇನ್ನು ಸ್ಪಿನ್ ಬೌಲರ್‌ಗಳು ತಮ್ಮ ಪಿರ್ಕಿಯ ಮೂಲಕ ಎದುರಾಳಿಗಳನ್ನು ಕಾಡಬೇಕಿದೆ.
ಟಾಪ್ ಆರ್ಡರ್ ಬಲ
ಪಂಜಾಬ್ ತಂಡದ ಟಾಪ್ ಆರ್ಡರ್ ಬ್ಯಾಟರ್ಸ್ ಉತ್ತಮ ಫಾರ್ಮ್‌ನಲ್ಲಿದ್ದು, ಗೆಲುವಿನ ವಿಶ್ವಾಸ ಮೂಡಿಸಿದ್ದಾರೆ. ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಬೇಕಿದೆ. ಮಧ್ಯಮ ಕ್ರಮಾಂಕಕ್ಕೆ ನಾಯಕ ಶ್ರೇಯಸ್ ಅಯ್ಯರ್ ಆಧರ. ಇವರು ಕಳೆದ ಕೆಲವು ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲವಾಗಿದ್ದು, ಲಯಕ್ಕೆ ಮರಳಬೇಕಿದೆ. ಉಳಿದಂತೆ ಭರವಸೆಯ ಬ್ಯಾಟರ್ಸ್ ಮಿಂಚಬೇಕಿದೆ. ಇನ್ನು ಬೌಲರ್‌ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು, ಈ ಪ್ರದರ್ಶನವನ್ನೇ ಮುಂದುವರೆಸಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications