Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಧೋನಿ ನಿವೃತ್ತಿ ಕುರಿತು ಸೂಚನೆ ನೀಡಿದ್ರಾ ಸುರೇಶ್ ರೈನಾ?

Suresh Raina confident of CSK winning their fourth IPL title

ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೊನಾ ವೈರಸ್‌ ಕಾರಣದಿಂದ ಅರ್ಧಕ್ಕೆ ಮೊಟಕುಗೊಂಡಿದ್ದು ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ಯುಎಇಯಲ್ಲಿ ಪುನರಾರಂಭಗೊಳ್ಳಲಿದೆ.

ಯುಎಇಯಲ್ಲಿ ಮುಂದುವರಿಯಲಿರುವ ಪ್ರಸ್ತುತ ವರ್ಷದ ಐಪಿಎಲ್ ಎರಡನೇ ಭಾಗದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದ್ದು ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ ಆಟಗಾರರೂ ಸಹ ಟೂರ್ನಿ ಪುನರಾರಂಭದ ಕುರಿತು ದೊಡ್ಡ ನಿರೀಕ್ಷೆ ಮತ್ತು ಗೆಲ್ಲುವ ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ.

ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಕೂಡ ಮುಂದುವರಿಯಲಿರುವ ಐಪಿಎಲ್ ಟೂರ್ನಿಯ ಕುರಿತು ಮಾತನಾಡಿದ್ದು ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಬಾರಿಗೆ ಐಪಿಎಲ್ ಟೂರ್ನಿಯನ್ನು ಮುಡಿಗೇರಿಸಿಕೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈಗಾಗಲೇ 3 ಐಪಿಎಲ್ ಟ್ರೋಫಿಗಳನ್ನು ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಮ್ಮೆ ಟ್ರೋಫಿ ಗೆಲ್ಲಲಿದೆ ಎಂದು ಸುರೇಶ್ ರೈನಾ ಹೇಳಿಕೊಂಡಿದ್ದಾರೆ.

"ಪ್ರಸ್ತುತ ವರ್ಷದ ಐಪಿಎಲ್ ಟೂರ್ನಿಯಲ್ಲಿ ನಮ್ಮ ತಂಡದ ಆಟಗಾರರು ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದಾರೆ. ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿಯೂ ಅದೇ ರೀತಿಯ ಪ್ರದರ್ಶನವನ್ನು ನೀಡಲಿದ್ದು ಮಹೇಂದ್ರ ಸಿಂಗ್ ಧೋನಿಗೋಸ್ಕರ ಈ ಬಾರಿ ನಮ್ಮ ತಂಡ ಐಪಿಎಲ್ ಟೂರ್ನಿಯನ್ನು ಗೆಲ್ಲಲಿದೆ" ಎಂದು ಸುರೇಶ್ ರೈನಾ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸುರೇಶ್ ರೈನಾ ಧೋನಿ ಕುರಿತು ಈ ರೀತಿಯ ಹೇಳಿಕೆಯನ್ನು ನೀಡಿದ ನಂತರ ಕ್ರೀಡಾಭಿಮಾನಿಗಳಲ್ಲಿ ಮಹೇಂದ್ರ ಸಿಂಗ್ ಧೋನಿ ಆಡಲಿರುವ ಕೊನೆಯ ಐಪಿಎಲ್ ಆವೃತ್ತಿ ಈ ಬಾರಿಯದ್ದಾ ಎಂಬ ಗೊಂದಲ ಮೂಡಿದೆ. ಮಹೇಂದ್ರ ಸಿಂಗ್ ಧೋನಿಗೋಸ್ಕರ ಈ ಬಾರಿ ಚೆನ್ನೈ ತಂಡ ಟ್ರೋಫಿ ಗೆಲ್ಲಲಿದೆ ಎಂಬ ಸುರೇಶ್ ರೈನಾ ಹೇಳಿಕೆ ಧೋನಿ ನಿವೃತ್ತಿಯ ಕುರಿತು ಮತ್ತಷ್ಟು ಚರ್ಚೆ ನಡೆಯಲು ಕಾರಣವಾಗಿದೆ.

Story first published: Friday, July 23, 2021, 11:32 [IST]
Other articles published on Jul 23, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+