Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Suresh Raina: ವಿರಾಟ್‌ ಕೊಹ್ಲಿಗೆ ಹೊಸ ಬಿರುದು ಕೊಟ್ಟ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ

ಮೇ 20 ಸೋಮವಾರ, ಟೀಮ್‌ ಇಂಡಿಯಾ ಆಟಗಾರ ವಿರಾಟ್‌ ಕೊಹ್ಲಿ, ವಿಶ್ವ ಕಂಡ ಶ್ರೇಷ್ಠ ಆಗ್ರಮಾನ್ಯ ಬ್ಯಾಟರ್‌ಗಳಲ್ಲಿ ಒಬ್ಬರು. ಪ್ರಸ್ತುತ ಅಂತಿಮ ಘಟ್ಟ ತಲುಪಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ವಿರಾಟ್‌ ಕೊಹ್ಲಿ ಆನೇಕ ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ವಿರಾಟ್‌ ಕೊಹ್ಲಿ ಆಟಕ್ಕೆ ಯಾರು ಸಾರಿಸಾಟಿಯೇ ಇಲ್ಲ. ಅಷ್ಟರ ಮಟ್ಟಿಗೆ ಸೊಗಸಾಗಿ ಬ್ಯಾಟಿಂಗ್‌ ಮಾಡುತ್ತಾರೆ. ಐಪಿಎಲ್‌ 2024ರಲ್ಲೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ಆಧಾರ ಸ್ತಂಭವಾಗಿವೆ.

Suresh Raina gave new title to Virat Kohli

ಈ ಆವೃತ್ತಿಯಲ್ಲಿ ವಿರಾಟ್‌ ಅತಿಹೆಚ್ಚು ರನ್‌ ಗಳಿಸಿರುವ ರೇಸ್‌ನಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಆರೆಂಜ್‌ ಕ್ಯಾಪ್‌ ಹೊಂದಿದ್ದಾರೆ. ಜೊತೆಗೆ ಐಪಿಎಲ್‌ ಇತಿಹಾಸದಲ್ಲಿ ಎರಡು ಬಾರಿ (2016 ಮತ್ತು 2024) 700ಕ್ಕೂ ಹೆಚ್ಚು ರನ್‌ ಗಳಿಸಿ ಭಾರತದ ಮೊದಲ ಆಟಗಾರನಾಗಿದ್ದಾರೆ.

ಒಟ್ಟರೆ ಐಪಿಎಲ್‌ನಲ್ಲಿ ಆರ್‌ಸಿಬಿಯ ಮಾಜಿ ಸ್ಪೋಟಕ ಬ್ಯಾಟರ್‌ ಕ್ರಿಸ್‌ ಗೇಲ್‌ ನಂತರ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿರುವ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.

ಐಪಿಎಲ್‌ ಅಷ್ಟೇ ಅಲ್ಲದೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಕೊಹ್ಲಿ ತನ್ನ ಬ್ಯಾಟಿಂಗ್‌ ಮೂಲಕ ಮೂಡಿ ಮಾಡಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕೊಹ್ಲಿ ಅತಿಹೆಚ್ಚು ರನ್‌ ಹೊಡೆದಿದ್ದರು.

ಈ ಸಮಯದಲ್ಲಿ ಕ್ರಿಕೆಟ್‌ ದೇವರು ಖ್ಯಾತಿಯ ಟೀಮ್‌ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಏಕದಿನ ಕ್ರಿಕೆಟ್‌ ದಾಖಲೆಯನ್ನು ಮುರಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ 50 ಶತಕಗಳನ್ನು ಹೊಡೆದ ವಿಶ್ವದ ಮೊದಲ ಆಟಗಾರ ಎಂಬ ಸಾಧನೆ ಮಾಡಿದ್ದರು.

ಇಂತಹ ಅಪರೂಪದ ಆಟಗಾರನನ್ನು ಭಾರತದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ ಭಾನುವಾರ ಶ್ಲಾಘಿಸಿದ್ದಾರೆ. ಛತ್ತೀಸ್‌ಗಢ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯಲಿರುವ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೂಡ ಚೆನ್ನಾಗಿ ಆಡಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರಿಗೆ "ರೈಸಿಂಗ್ ಸ್ಟಾರ್" ಎಂದು ಸುರೇಶ್‌ ರೈನಾ ಬಿರುದು ಕೊಟ್ಟಿದ್ದಾರೆ. ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಕ್ಕೂ ಮುನ್ನ ರೈನಾ ಕೊಟ್ಟಿರುವ ಬಿರುದು ಮಹತ್ವ ಪಡೆದುಕೊಂಡಿದೆ.

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದಲ್ಲಿ ಕೊಹ್ಲಿ ಬ್ಯಾಟಿಂಗ್‌ ವಿಭಾಗದ ಅವಿಭಾಜ್ಯ ಅಂಗವಾಗಿದ್ದಾರೆ. ಐಪಿಎಲ್‌ 2024ರಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಕೊಹ್ಲಿ, ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಇನ್ನಿಂಗ್ಸ್‌ ಶುರು ಮಾಡುವ ನಿರೀಕ್ಷೆಯಿದೆ.

ಪ್ಲೇ ಆಫ್‌ ನಾಲ್ಕರ ಸ್ಥಾನಕ್ಕೆ ನಡೆದ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಮಾಡು ಇಲ್ಲವೇ ಮಡಿ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಕಂ ಕಾಮೆಂಟೇಟರ್ ಸುರೇಶ್ ರೈನಾ ಅವರು ವಿರಾಟ್ ಕೊಹ್ಲಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಆಲ್ ದಿ ಬೆಸ್ಟ್ ಎಂದು ಶುಭಾಶಯ ತಿಳಿಸಿದ್ದರು. ಈ ದೃಶ್ಯ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತು.

ಸಿಸಿಪಿಎಲ್‌

18 ಟೆಸ್ಟ್, 226 ಏಕದಿನ ಮತ್ತು 78 ಟಿ20 ಪಂದ್ಯಗಳನ್ನು ಆಡಿರುವ ರೈನಾ, ಛತ್ತೀಸ್‌ಗಢ ಕ್ರಿಕೆಟ್ ಪ್ರೀಮಿಯರ್ ಲೀಗ್‌ನ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಟೂರ್ನಿಯನ್ನು ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಸ್ಥೆ (ಸಿಎಸ್‌ಸಿಎ) ಆಯೋಜಿಸಿದೆ. ಜೂನ್ 7 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 18 ಪಂದ್ಯಗಳ ನಡೆಯಲಿದ್ದಯ, ಒಟ್ಟು ಆರು ತಂಡಗಳು ಭಾಗವಹಿಸಲಿವೆ.

Story first published: Monday, May 20, 2024, 16:06 [IST]
Other articles published on May 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+