ಸಂಜು ಸ್ಯಾಮ್ಸನ್ ಈ ಕ್ರಮಾಂಕದಲ್ಲಿ ಆಡಿದರೆ ಬೆಸ್ಟ್: ಸುರೇಶ್ ರೈನಾ
ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದ ಸಂಜು ಸ್ಯಾಮ್ಸನ್, ಸದ್ಯ ಎಲ್ಲರ ಚಿತ್ತ ಕದ್ದ ಪ್ಲೇಯರ್. ಇವರು ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಲಿದ್ದಾರೆ. ಈ ವೇಳೆ ಸಂಜು ಸ್ಯಾಮ್ಸನ್ ಯಾವ ಕ್ರಮಾಂಕದಲ್ಲಿ ಆಡಬೇಕು ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ದೊಡ್ಡ ಹೇಳಿಕೆ ನೀಡಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಅಮೋಘ ಪ್ರದರ್ಶನ ನೀಡಿದ್ದಾರೆ. ಈ ವೇಳೆ ಮಹತ್ವದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಮಿಂಚಿದ್ದರು. ಫೈನಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದ್ದರು. ಇನ್ನು ಕೆಲವೇ ದಿನಗಳಲ್ಲಿ ಸಂಜು ಯೆಲ್ಲೋ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸದ್ಯ ಸಂಜು ಸ್ಯಾಮ್ಸನ್ ಅಮೋಘ ಫಾರ್ಮ್‌ನಲ್ಲಿದ್ದಾರೆ. ಚೆನ್ನೈ ತಂಡ ರುತುರಾಜ್ ಗಾಯಕ್ವಾಡ್ ಹಾಗೂ ಆಯುಷ್ ಮಾತ್ರೆ ಅವರೊಂದಿಗೆ ಇನಿಂಗ್ಸ್ ಆರಂಭಿಸಬೇಕು. ಅಲ್ಲದೆ ಸಂಜು ಸ್ಯಾಮ್ಸನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಬೇಕು ಎಂದು ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.
ಭರವಸೆಯ ಆಲ್‌ರೌಂಡರ್ ಶಿವಂ ದುಬೆ ಐದನೇ ಕ್ರಮಾಂಕದಲ್ಲಿ ಹಾಗೂ ಆರನೇ ಕ್ರಮಾಂಕದಲ್ಲಿ ಪ್ರಶಾಂತ್ ವೀರ್ ಬ್ಯಾಟ್ ಮಾಡುಬಹುದು ಎಂದು ರೈನಾ ತಿಳಿಸಿದ್ದಾರೆ.
ಸಂಜು ಬಗ್ಗೆ ರೈನಾ ಹೇಳಿದ್ದೇನು?
ಸಂಜು ಸ್ಯಾಮ್ಸನ್ ಅವರು ತಂಡದ ಪರ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಬೇಕು ಎಂದು ಸುರೇಶ್ ರೈನಾ ತಿಳಿಸಿದ್ದಾರೆ. ಇನ್ನು ಸಂಜು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ, ತಂಡದ ಮಿಡ್ಲ್ ಆರ್ಡರ್‌ಗೂ ಬಲ ಬರಲಿದೆ ಎಂದು ರೈನಾ ನಂಬಿದ್ದಾರೆ. 3ನೇ ಕ್ರಮಾಂಕದಲ್ಲಿ ಸಂಜು ಪಾತ್ರ ಹೆಚ್ಚು ಮುಖ್ಯವಾಗಲಿದೆ ಎಂದು ನಾನು ಭಾವಿಸುತ್ತೇನೆ. ಆಯುಷ್ ಮ್ಹಾತ್ರೆ ಮತ್ತು ಋತುರಾಜ್ ಗಾಯಕ್ವಾಡ್ ಅವರಿಗೆ ಆರಂಭಿಕರಾಗಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಿದರೆ, ಮಧ್ಯಮ ಕ್ರಮಾಂಕವು ಹೆಚ್ಚು ಅನುಭವದೊಂದಿಗೆ ಬಲಿಷ್ಠವಾಗಿ ಕಾಣುತ್ತದೆ ಎಂದು ರೈನಾ ತಿಳಿಸಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಅವರು ಕೊನೆಯ ಎರಡು ಓವರ್ ಇದ್ದಾಗ ಬ್ಯಾಟ್ ಮಾಡಲು ಬರುತ್ತಾರೆ ಎಂದು ಭಾವಿಸಬಹುದು. ಈ ಪರಿಸ್ಥಿತಿಗಳಲ್ಲಿ ಸಂಜು ಸ್ಯಾಮ್ಸನ್ ಹಾಗೂ ಶಿವಂ ದುಬೆ ಅವರ ಪಾತ್ರ ತಂಡದಲ್ಲಿ ದೊಡ್ಡದಾಗುತ್ತದೆ. ಸಂಜು ತಮ್ಮ ಅನುಭವದಿಂದ ತಂಡಕ್ಕೆ ದೊಡ್ಡ ಬಲವನ್ನು ನೀಡಬಲ್ಲರು ಎಂದು ಮಾಜಿ ಆಲ್‌ರೌಂಡರ್ ಸುರೇಶ್ ರೈನಾ ಹೇಳಿದ್ದಾರೆ.
ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ರವೀಂದ್ರ ಜಡೇಜಾ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಟ್ರೇಡ್ ಮಾಡಿತ್ತು. ಆಗ ರಾಜಸ್ಥಾನ ರಾಯಲ್ಸ್ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ತಂಡಕ್ಕೆ ಟ್ರೇಡ್ ಮಾಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications