For Quick Alerts
ALLOW NOTIFICATIONS  
For Daily Alerts
 

Virat Kohli for Bharat Ratna: ಕೊಹ್ಲಿಗೆ ಭಾರತ ರತ್ನ ನೀಡಬೇಕು: ಸುರೇಶ್‌ ರೈನಾ

ಭಾರತದ ಸರ್ವೋಚ್ಚ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ಅದೆಷ್ಟೋ ಸಾಧಕರಿಗೆ ನೀಡಿ ಗೌರವಿಸಲಾಗಿದೆ. ಆದರೆ ಕ್ರೀಡಾ ಕ್ಷೇತ್ರದಲ್ಲಿ ಈ ಪ್ರಶಸ್ತಿ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ಮಾತ್ರ ಸಂದಿದೆ. ಸಚಿನ್ ಅವರಿಗೆ ಫೆಬ್ರವರಿ 2014ರಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮತ್ತೊಬ್ಬ ಪ್ಲೇಯರ್‌ಗೆ ಈ ಪ್ರಶಸ್ತಿ ನೀಡುವಂತೆ ಒತ್ತಾಯಗಳು ಕೇಳಿ ಬಂದಿವೆ. ಟೀಮ್ ಇಂಡಿಯಾ ಮಾಜಿ ಆಟಗಾರರೇ ಈ ಬಗ್ಗೆ ಧ್ವನಿ ಎತ್ತಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರು ಕ್ರೀಡಾ ಕ್ಷೇತ್ರದಲ್ಲಿ ನೀಡಿದ ಸಾಧನೆಯನ್ನು ಗುರುತಿಸಿದ್ದ ಕೇಂದ್ರ ಸರ್ಕಾರ ಅವರಿಗೆ ಭಾರತ ರತ್ನವನ್ನು ನೀಡಿ ಗೌರವಿಸಿತ್ತು. ಈ ಪ್ರಶಸ್ತಿಯನ್ನು ಸಚಿನ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪಡೆದರು. ಅದಿಂನಿಂದ ಈ ಪ್ರಶಸ್ತಿಯನ್ನು ಮತ್ತೊಬ್ಬ ಕ್ರೀಡಾ ಪಟುವಿಗೆ ನೀಡಿಲ್ಲ. ಈಗ ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್‌ ರೈನಾ, ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಈ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದಾರೆ.

Suresh Raina Urges Bharat Ratna Honour for Virat Kohli After His Test Retirement

ಐಪಿಎಲ್‌ ಮುಗಿದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಇದಕ್ಕೂ ಮುನ್ನವೇ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ರು. ನವ ಯುಗದ ಗ್ರೇಟ್‌ ಬ್ಯಾಟರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ವಿರಾಟ್‌ ಕೊಹ್ಲಿ ಅವರಿಗೆ ದೇಶದ ಅತ್ಯುನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕು ಎಂದು ರೈನಾ ತಿಳಿಸಿದ್ದಾರೆ. ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತರಕ್ಕೆ ಕೊಂಡೊಯ್ದ ಸಾಧಕರಲ್ಲಿ ವಿರಾಟ್‌ಗೂ ಅಗ್ರ ಸ್ಥಾನ ಎಂದು ರೈನಾ ಅಭಿಪ್ರಾಯ ಪಟ್ಟಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಸುರೇಶ್‌ ರೈನಾ, ಭಾರತೀಯ ಕ್ರಿಕೆಟ್‌ಗಾಗಿ ವಿರಾಟ್‌ ಕೊಹ್ಲಿ ಸಾಧಿಸಿದ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ಹೇಳಿದ್ದಾರೆ. ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಈ ಹೇಳಿಕೆ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ತಮಗೆ ಅನಿಸಿದಹಾಗೆ ಕಮೆಂಟ್‌ ಮಾಡುತ್ತಿದ್ದಾರೆ.

Suresh Raina Urges Bharat Ratna Honour for Virat Kohli After His Test Retirement

ವಿರಾಟ್‌ ಕೊಹ್ಲಿ ಕ್ರಿಕೆಟ್‌ನ ಪ್ರತಿ ಸ್ವರೂಪದಲ್ಲೂ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಅಲ್ಲದೆ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದ್ದಾರೆ. ಹಲವು ದೊಡ್ಡ ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿದ್ದಾರೆ. ಇವರು ನಾಯಕರಾಗಿಯೂ ಸೈ ಎನಿಸಿಕೊಂಡಿರುವ ಆಟಗಾರ. ಇವರ ನಾಯಕತ್ವದಲ್ಲಿ ತಂಡ ಹೊಸ ಎತ್ತರವನ್ನು ತಲುಪಿತು.

ಟೆಸ್ಟ್‌ಗೆ ವಿದಾಯ

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತರಿಸಿದೆ. ಇನ್ನು ವಿರಾಟ್‌ ಕೊಹ್ಲಿ ಬರೀ ಏಕದಿನ ಕ್ರಿಕೆಟ್‌ ಮಾತ್ರ ಆಡಲಿದ್ದಾರೆ. ಕೊಹ್ಲಿ 123 ಟೆಸ್ಟ್ ಪಂದ್ಯಗಳಲ್ಲಿ 9230 ರನ್ ಗಳಿಸಿದ್ದಾರೆ. ಈ ವೇಳೆ 30 ಶತಕ ಮತ್ತು 31 ಅರ್ಧಶತಕ ಸೇರಿವೆ.

Story first published: Sunday, May 18, 2025, 12:47 [IST]
Other articles published on May 18, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+