Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023: ಗೆದ್ದಿದ್ದು ಹಿಂದೂಸ್ಥಾನ, ಸಂಭ್ರಮಿಸಿದ್ದು ಪಾಕಿಸ್ತಾನ; ಉಪಾಂತ್ಯ ಪ್ರವೇಶಿಸುವ ಸಾಧ್ಯತೆ ಹೇಗಿದೆ?

ಗುರುವಾರ, ನವೆಂಬರ್ 2ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್‌ರೌಂಡ್ ಪ್ರದರ್ಶನ ನೀಡಿ ಶ್ರೀಲಂಕಾವನ್ನು 302 ರನ್‌ಗಳ ಬೃಹತ್ ಅಂತರದಿಂದ ಮಣಿಸಿ ಸೆಮಿಫೈನಲ್ ಹಂತಕ್ಕೆ ಪ್ರವೇಶಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್‌ಗಳನ್ನು ಕಲೆಹಾಕಿತು.

Surprisingly Pakistan is celebrating Indias Victory against Sri Lanka in yesterdays Match: Know Why?

ನಂತರ 358 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಐತಿಹಾಸಿಕ ಪತನ ಕಂಡಿತು ಮತ್ತು ಕೇವಲ 19.4 ಓವರ್‌ಗಳಲ್ಲಿ 55 ರನ್‌ಗಳಿಗೆ ಸರ್ವಪತನ ಕಂಡಿತು.

1
1-2023

ಈ ಮೂಲಕ ಪ್ರಸಕ್ತ ವಿಶ್ವಕಪ್‌ ಪಂದ್ಯಾವಳಿಯಲ್ಲಿ 14 ಅಂಕಗಳೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಪಾತ್ರವಾಗಿದೆ. ಆಡಿದ ಏಳು ಪಂದ್ಯಗಳಲ್ಲಿ ಏಳೂ ಗೆಲುವು ಸಾಧಿಸಿ ಅಜೇಯವಾಗಿರುವ ಏಕೈಕ ತಂಡವಾಗಿದೆ.

ಇನ್ನು ದಕ್ಷಿಣ ಆಫ್ರಿಕಾ ತಂಡ ಕೂಡ ಸೆಮಿಫೈನಲ್ ಹಂತವನ್ನು ಪ್ರವೇಶಿಸುವುದು ಬಹುತೇಕ ಖಚಿತವಾಗಿದ್ದು, ಇನ್ನು ಎರಡು ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆದಿದೆ. ಈ ರೇಸ್‌ನಲ್ಲಿ ನೆರೆಯ ಪಾಕಿಸ್ತಾನ ತಂಡ ಸಹ ಇದೆ.

Surprisingly Pakistan is celebrating Indias Victory against Sri Lanka in yesterdays Match: Know Why?

ಎರಡು ಸೆಮಿಫೈನಲ್ ಸ್ಥಾನಗಳಿಗೆ ನಾಲ್ಕು ತಂಡಗಳು ಪೈಪೋಟಿ ನಡೆಸಿವೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ನ್ಯೂಜಿಲೆಂಡ್ ತಂಡಗಳು ಎರಡು ಸ್ಥಾನಗಳ ಮೇಲೆ ಕಣ್ಣಿಟ್ಟಿವೆ.

ನ್ಯೂಜಿಲೆಂಡ್ ತಂಡವನ್ನು ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡವನ್ನು ಭಾರತ ಮಣಿಸಿದ್ದರಿಂದ 1992ರ ಚಾಂಪಿಯನ್ ಪಾಕಿಸ್ತಾನ ತಂಡಕ್ಕೆ ಅನುಕೂಲವಾಗಿದೆ.

ಪಾಕಿಸ್ತಾನ ಸೆಮಿಫೈನಲ್‌ನಲ್ಲಿ ರಾಯಲ್ ಎಂಟ್ರಿ ನೀಡಲು ಪ್ಲ್ಯಾನ್ ಮಾಡಿಕೊಂಡಿದೆ. ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಹೇಗೆ ಉಪಾಂತ್ಯ ಪ್ರವೇಶಿಸುವ ಕನಸು ಕಾಣುತ್ತಿದೆ ಎಂಬ ಲೆಕ್ಕಾಚಾರ ಇಲ್ಲಿದೆ.

ಸದ್ಯ ಪಾಕಿಸ್ತಾನ ಏಳು ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇನ್ನು ಸೆಮಿಫೈನಲ್ ಪ್ರವೇಶಿಸಲು ಪಾಕಿಸ್ತಾನ ಉಳಿದ ಎರಡೂ ಪಂದ್ಯಗಳಲ್ಲಿ ಗೆಲ್ಲುವ ಅವಶ್ಯಕತೆ ಇದೆ.

ಒಂದು ವೇಳೆ ಪಾಕಿಸ್ತಾನ ಉಳಿದ ಎರಡೂ ಪಂದ್ಯಗಳನ್ನೂ ಗೆದ್ದಿದ್ದೇ ಆದಲ್ಲಿ 9 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿ 10 ಅಂಕಗಳೊಂದಿಗೆ ಸೆಮಿಫೈನಲ್ ಪ್ರವೇಶಿಸುವ ಆಸೆ ಜೀವಂತವಾಗಿರಿಸಿಕೊಳ್ಳಬಹುದು.

ಪಾಕಿಸ್ತಾನ ತಂಡ ಶನಿವಾರ ನ್ಯೂಜಿಲೆಂಡ್ ವಿರುದ್ಧ ಹಾಗೂ ನವೆಂಬರ್‌ 11ರಂದು ಇಂಗ್ಲೆಂಡ್ ವಿರುದ್ಧ ಆಡಬೇಕಿದೆ. ಶನಿವಾರ ನಡೆಯುವ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸಬೇಕಿದೆ. ಒಂದು ವೇಳೆ ಕಿವೀಸ್ ಪಡೆ ಗೆಲುವು ಸಾಧಿಸಿದರೆ, ಪಾಕ್‌ ಲೀಗ್‌ ಹಂತದಲ್ಲೇ ವಿಶ್ವಕಪ್ ಪಂದ್ಯಾವಳಿಗೆ ಗುಡ್‌ ಬೈ ಹೇಳಲಿದೆ.

ಇಷ್ಟೇ ಅಲ್ಲದೆ ಆಸ್ಟ್ರೇಲಿಯಾ ತಂಡವು ಅಫ್ಘಾನಿಸ್ತಾನ ತಂಡವನ್ನು ಮಣಿಸಬೇಕಿದೆ. ಅಲ್ಲದೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಬೇಕಿದೆ. ಅಂದಾಗ ಮಾತ್ರ ಪಾಕಿಸ್ತಾನ ತಂಡ ಸೆಮಿಫೈನಲ್ ಪ್ರವೇಶ ಪಡೆಯಬಹುದು.

Story first published: Friday, November 3, 2023, 11:44 [IST]
Other articles published on Nov 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+