ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯ "ಎ" ಗುಂಪಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿ ಪಾಕಿಸ್ತಾನ ತಂಡವನ್ನು ಮಣಿಸಿದೆ. ಸೂರ್ಯ ಪಡೆ 7 ವಿಕೆಟ್ ಜಯ ಸಾಧಿಸುತ್ತಲೇ ಸೂಪರ್ ಫೋರ್ ಹತ್ತಿರ ನಿಂತಿದೆ. ಟೀಮ್ ಇಂಡಿಯಾ ನಾಯಕ ಈ ಗೆಲುವನ್ನು ಭಾರತದ ವೀರ ಅರ್ಪಿಸಿದ್ದಾರೆ.
ಭಾನುವಾರ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಕಲೆ ಹಾಕಿತು. ಈ ವೇಳೆ ಕುಲ್‌ದೀಪ್ ಯಾದವ್ 3 ವಿಕೆಟ್ ಪಡೆದು ಅಬ್ಬರಿಸಿದರು. ಇನ್ನು ಗುರಿಯನ್ನು ಬೆನ್ನಟ್ಟಿದ ಭಾರತ 15.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 131 ರನ್ ಸೇರಿಸಿ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಆಡಿದ ಎರಡೂ ಪಂದ್ಯದಲ್ಲಿ ಜಯ ಸಾಧಿಸಿದ ಭಾರತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯದ ಬಳಿಕ ಮಾತನಾಡಿದ ಸೂರ್ಯ, ನಾವು ಈ ಗೆಲುವನ್ನು ಭಾರತದ ಎಲ್ಲಾ ಸಶಸ್ತ್ರ ಪಡೆಗಳಿಗೆ ಅರ್ಪಿಸುತ್ತೇವೆ ಎಂದು ತಿಳಿಸಿದ್ದಾರೆ. ಅವರು ತಮ್ಮ ಅದಮ್ಯ ಧೈರ್ಯವನ್ನು ಪ್ರದರ್ಶಿಸಿ, ನಾವೆಲ್ಲಾ ಒಗ್ಗಾಟಿಗಿರುವುದನ್ನು ತೋರಿಸಿದ್ದಾರೆ. ಅವರು ನಮಗೆ ಪದೇ ಪದೇ ಸ್ಪೂರ್ತಿ ನೀಡುತ್ತಲೇ ಇರುತ್ತಾರೆ. ನಮಗೆ ಅವಕಾಶ ಸಿಕ್ಕಾಗಲೆಲ್ಲಾ ಅವರ ಮುಖದಲ್ಲಿ ನಗು ತರಿಸುವ ಕೆಲಸವನ್ನು ನಾವು ಮಾಡುತ್ತಲೇ ಇರುತ್ತೇವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ ಎಂದು ತಿಳಿಸಿದರು. ಈ ಹೇಳಿಕೆಯೊಂದಿಗೆ ಸೂರ್ಯಕುಮಾರ್ ಯಾದವ್ ಭಯೋತ್ಪಾದನೆಯ ವಿರುದ್ಧ ಭಾರತದ ಏಕತೆಗೆ ಒಂದು ಉದಾಹರಣೆಯನ್ನು ನೀಡಿದ್ದಾರೆ.
ಪಾಕಿಸ್ತಾನ ವಿರುದ್ಧದ ಗೆಲುವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಅರ್ಪಿಸುವ ಮೂಲಕ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡಿದ್ದಾರೆ. ಸಾಮಾನ್ಯವಾಗಿ ಟಾಸ್ ವೇಳೆ ಉಭಯ ತಂಡದ ನಾಯಕರು ಕೈ ಕುಲುಕುತ್ತಾರೆ. ಆದರೆ ಸೂರ್ಯ ಟಾಸ್ ವೇಳೆಯೂ ಸಲ್ಮಾನ್ ಅಲಿ ಅಘಾ ಅವರೊಂದಿಗೆ ಹಸ್ತಲಾಘವ ಮಾಡಲಿಲ್ಲ. ಪಂದ್ಯದ ಬಳಿಕವೂ ಟೀಮ್ ಇಂಡಿಯಾದ ಆಟಗಾರರು ಪಾಕಿಸ್ತಾನ ಆಟಗಾರರತ್ತ ನೋಡಲೇ ಇಲ್ಲ. ಕೈ ಕುಲಕದೇ ಡ್ರಸ್ಸಿಂಗ್ ರೂಮ್‌ನತ್ತ ಹೆಜ್ಜೆ ಹಾಕಿದರು.
ಪಾಕಿಸ್ತಾನ ತಂಡದ ವಿರುದ್ಧ ಅಮೋಘ ಬೌಲಿಂಗ್ ದಾಳಿಯನ್ನು ನಡೆಸಿದ ಟೀಮ್ ಇಂಡಿಯಾ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ. ಇವರು ನಾಲ್ಕು ಓವರ್ ಬೌಲ್ ಮಾಡಿ ಪಾಕ್ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು. ಇವರು ಹಸನ್ ನವಾಜ್, ಮೊಹಮ್ಮದ್ ನವಾಜ್, ಸಾಹಿಬ್‌ಜಾದಾ ಫರ್ಹಾನ್, ಅವರ ವಿಕೆಟ್ ಪಡೆದು ಅಬ್ಬರಿಸಿದರು. ಪ್ರಸಕ್ತ ಟೂರ್ನಿಯಲ್ಲಿ ಕುಲ್‌ದೀಪ್ ಅಮೋಘ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.