ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅಪರೂಪದ ಟಿ20ಐ ದಾಖಲೆ ಬರೆದ ಸೂರ್ಯ ಕುಮಾರ್ ಯಾದವ್

Surya Kumar Yadav registers Fifty on T20I Debut Innings for India

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ ಟ್ವೆಂಟಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ಭರ್ಜರಿ ಅರ್ಧಶತಕ ಸಿಡಿಸಿದ್ದಾರೆ. 31 ಎಸೆತಗಳಲ್ಲಿ 57 ರನ್ ಬಾರಿಸುವುದರ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾರೆ.

ಹೌದು ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ ಮೊದಲ ಇನಿಂಗ್ಸ್ ನಲ್ಲಿಯೇ ಅರ್ಧಶತಕ ಬಾರಿಸಿದ ಐದನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಅವರು ಪಾತ್ರರಾಗಿದ್ದಾರೆ. ಈ ಮೂಲಕ ಈ ಹಿಂದೆ ಅಜಿಂಕ್ಯ ರಹಾನೆ ಮತ್ತು ಇಶಾನ್ ಕಿಶನ್ ಅವರು ಮಾಡಿದ್ದ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಅವರು ಸಹ ಮಾಡಿದ್ದಾರೆ.

ಮೊದಲನೆಯ ಅಂತಾರಾಷ್ಟ್ರೀಯ ಟ್ವೆಂಟಿ ಪಂದ್ಯದಲ್ಲಿ ಮೊದಲು ಅರ್ಧಶತಕ ಸಿಡಿಸಿದ ಭಾರತೀಯ ಆಟಗಾರ ಅಜಿಂಕ್ಯಾ ರಹಾನೆ. 2011 ರಲ್ಲಿ ಇಂಗ್ಲೆಂಡ್ ವಿರುದ್ಧ ಅಜಿಂಕ್ಯ ರಹಾನೆ ತಮ್ಮ ಮೊದಲನೆಯ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ 39 ಎಸೆತಕ್ಕೆ 61 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ 32 ಎಸೆತಗಳಿಗೆ 56 ರನ್ ಬಾರಿಸುವುದರ ಮೂಲಕ ಮೊದಲನೇ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಯಲ್ಲಿ ಅರ್ಧಶತಕ ಬಾರಿಸಿದ ಎರಡನೇ ಭಾರತೀಯ ಎಂಬ ದಾಖಲೆಯನ್ನು ನಿರ್ಮಿಸಿದರು.

ಇವರಿಬ್ಬರಿಗೂ ಮುನ್ನ ರಾಬಿನ್ ಉತ್ತಪ್ಪ ಹಾಗೂ ರೋಹಿತ್ ಶರ್ಮ ಕೂಡಾ ತಮ್ಮ ಮೊದಲ ಟಿ20 ಇನ್ನಿಂಗ್ಸ್ ನಲ್ಲಿ 50 ರನ್ ಗಡಿ ದಾಟಿದ ದಾಖಲೆ ಬರೆದಿದ್ದರು. ಇನ್ನೊಂದು ವಿಶೇಷವೆಂದರೆ ಈ ಐದು ಆಟಗಾರರು ಐಪಿಎಲ್‌ನಲ್ಲಿ ಒಂದು ಬಾರಿ ಮುಂಬೈ ಇಂಡಿಯನ್ಸ್ ಪರ ಬ್ಯಾಟಿಸಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ಅರ್ಧ ಶತಕ ಸಿಡಿಸುವುದರ ಮೂಲಕ ಬ್ಯಾಟಿಂಗ್ ಅವಕಾಶ ಸಿಕ್ಕ ಮೊದಲ ಇನಿಂಗ್ಸ್ ನಲ್ಲಿಯೇ ಅರ್ಧಶತಕ ಸಿಡಿಸಿದ ಭಾರತೀಯ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. 31 ಎಸೆತಗಳಲ್ಲಿ 57 ರನ್ ಗಳಿಸಿ ಅಂಪೈರ್‌ನ ವಿವಾದಾತ್ಮಕ ತೀರ್ಪಿಗೆ ಬಲಿಯಾದ ಸೂರ್ಯಕುಮಾರ್ ಯಾದವ್ 6 ಬೌಂಡರಿ ಮತ್ತು 3 ಸಿಕ್ಸರ್ ಸಿಡಿಸಿ ಟೀಮ್ ಇಂಡಿಯಾ ಬೃಹತ್ ಮೊತ್ತ ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಜಿಂಕ್ಯ ರಹಾನೆ ಮತ್ತು ಇಶಾನ್ ಕಿಶನ್ ಪದಾರ್ಪಣೆ ಮಾಡಿದ ಮೊದಲನೇ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿಯೇ ಅರ್ಧ ಶತಕವನ್ನು ಬಾರಿಸಿದ್ದರು. ಸೂರ್ಯ ಕುಮಾರ್ ಯಾದವ್ ಅವರಿಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಬ್ಯಾಟ್ ಮಾಡುವ ಅವಕಾಶ ಸಿಗಲಿಲ್ಲ. ಆದರೆ ಎರಡನೇ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಸೂರ್ಯಕುಮಾರ್ ಯಾದವ್ ಮೊದಲ ಇನಿಂಗ್ಸ್ ನಲ್ಲಿಯೇ ಅರ್ಧ ಶತಕವನ್ನು ಬಾರಿಸಿ ಅರ್ಧ ಶತಕವನ್ನು ಬಾರಿಸಿದರು.

Story first published: Thursday, March 18, 2021, 22:42 [IST]
Other articles published on Mar 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X