Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS T20: ವಿರಾಟ್‌ ದಾಖಲೆ ಸರಿಗಟ್ಟಿದ ಅಕ್ಷರ್‌: ಬುಮ್ರಾ ವಿಶೇಷ ಸಾಧನೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಸೂರ್ಯಕುಮಾರ್ ಪಡೆ ಅಮೋಘ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ ಅಕ್ಷರ್‌ ಪಟೇಲ್‌ ಸ್ಥಿರ ಪ್ರದರ್ಶನ ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಅಕ್ಷರ್‌ ಪಟೇಲ್‌ ದಾಖಲೆ ಬರೆದರು. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಅಕ್ಷರ್‌ ಪ್ರಶಸ್ತಿ ಪಡೆದರು.

ಈ ಪಂದ್ಯದಲ್ಲಿ ಪಂದ್ಯ ಅಕ್ಷರ್‌ ಪಟೇಲ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಈ ಮೂಲಕ ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಲ್ ಅವರ ದಾಖಲೆಯನ್ನು ಸರಿಗಟ್ಟಿದರು. ಈ ಮೂಲಕ ಅಕ್ಷರ್‌ ಪಟೇಲ್‌ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಹೆಚ್ಚು ಗೆದ್ದ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದಾರೆ. ವಿರಾಟ್ ಕೊಹ್ಲಿ, ಕ್ರಿಸ್‌ ಗೇಲ್‌ ಅವರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದರು.

Suryakumar-led India beats Australia in 4th T20I Axar Patel Bumrah set new records

ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿರುವ ಅಕ್ಷರ್ ಪಟೇಲ್‌, "7 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದರಿಂದ ವಿಕೆಟ್ ಅನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಅವಕಾಶ ಸಿಕ್ಕಿತು. ಪಿಚ್‌ ಕೊಂಚ ಬೌಲರ್‌ಗಳಿಗೆ ಸಹಾಯ ಮಾಡುತ್ತದೇ ಎಂದು ತಿಳಿದಿತ್ತು. ಅದನ್ನು ಅರಿತು ನಾನು ಬೌಲಿಂಗ್ ಮಾಡಿದ್ದೇನೆ ಎಂದು ಅಕ್ಷರ್‌ ಪಟೇಲ್‌ ತಿಳಿಸಿದ್ದಾರೆ.

ನಾಲ್ಕನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಸಹ ಒಂದು ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ಈ ದಾಖಲೆ ಪಾಕಿಸ್ತಾನದ ಸಾಯೀದ್‌ ಅಜ್ಮಲ್‌ ಅವರ ಹೆಸರಿನಲ್ಲಿತ್ತು. ಅಜ್ಮಲ್‌ ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ 11 ಇನ್ನಿಂಗ್ಸ್‌ಗಳಲ್ಲಿ 19 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳು
ಜಸ್ಪ್ರೀತ್ ಬುಮ್ರಾ, ಭಾರತ- 20 ವಿಕೆಟ್‌ಗಳು (16 ಇನ್ನಿಂಗ್ಸ್)
ಸಯೀದ್ ಅಜ್ಮಲ್, ಪಾಕಿಸ್ತಾನ- 19 ವಿಕೆಟ್‌ಗಳು (11 ಇನ್ನಿಂಗ್ಸ್)
ಮೊಹಮ್ಮದ್ ಅಮೀರ್, ಪಾಕಿಸ್ತಾನ- 17 ವಿಕೆಟ್‌ಗಳು (10 ಇನ್ನಿಂಗ್ಸ್)
ಮಿಚೆಲ್ ಸ್ಯಾಂಟ್ನರ್, ನ್ಯೂಜಿಲೆಂಡ್- 17 ವಿಕೆಟ್‌ಗಳು (12 ಇನ್ನಿಂಗ್ಸ್)

ಪಂದ್ಯದ ಫಲಿತಾಂಶ

ನಾಲ್ಕನೇ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 167 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 18.2 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್‌ ಆಯಿತು. ಬ್ರಿಸ್ಬೇನ್‌ನಲ್ಲಿ ಉಭಯ ದೇಶಗಳ ನಡುವಣ ಐದನೇ ಟಿ20 ಪಂದ್ಯ ಶನಿವಾರ ನಡೆಯಲಿದ್ದು, ಇದರ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಪ್ಲ್ಯಾನ್ ಮಾಡಿಕೊಂಡಿದೆ.

Story first published: Friday, November 7, 2025, 9:30 [IST]
Other articles published on Nov 7, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+