For Quick Alerts
ALLOW NOTIFICATIONS  
For Daily Alerts
 

ICC Ranking: ಸೂರ್ಯಕುಮಾರ್ ಶ್ರೇಯಾಂಕ ಕುಸಿತ: ವರುಣ್‌ ಚಕ್ರವರ್ತಿ 110 ಸ್ಥಾನ ಜಿಗಿತ

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಮಿಸ್ಟರ್‌ 360 ಖ್ಯಾತಿಯ ಸೂರ್ಯಕುಮಾರ್ ಯಾದವ್‌, ಇತ್ತೀಚಿಗೆ ಬಿಡುಗಡೆ ಆದ ಐಸಿಸಿ ಟಿ20 ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಟೀಮ್ ಇಂಡಿಯಾದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ 110 ಸ್ಥಾನಗಳನ್ನು ಜಿಗಿದು ಸಂಚಲನ ಮೂಡಿಸಿದ್ದಾರೆ. ಈ ಶ್ರೇಯಾಮಕದ ಟಾಪ್‌ 20ಯಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾದ ಬ್ಯಾಟರ್‌ಗಳು ತಲಾ ಒಂದು ಸ್ಥಾನ ಕುಸಿತ ಕಂಡಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿರುವ ಟೀಮ್ ಇಂಡಿಯಾ ನಾಯಕ ಸೂರ್ಯ ಶ್ರೇಯಾಂಕದಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಇವರು 803 ಅಂಕಗಳನ್ನು ಕಲೆ ಹಾಕಿದ್ದು, ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಾರಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್‌ ಟ್ರಾವಿಸ್ ಹೆಡ್‌ 881 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ ತಂಡದ ಆಟಗಾರ ಫಿಲ್ ಸಾಲ್ಟ್‌ 841 ಅಂಕಗಳೊಂದಿಗೆ ಎರಡನೇ ಸ್ಥಾನ ಹೊಂದಿದ್ದಾರೆ.

Suryakumar Slips to Third in ICC T20 Rankings Varun Chakraborty Makes Record Jump of 110 Places

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಆಡುವ ಟೀಮ್ ಇಂಡಿಯಾದ ಭಾಗವಾಗಿರುವ ಯಶಸ್ವಿ ಜೈಸ್ವಾಲ್ ಶ್ರೇಯಾಂಕದಲ್ಲೂ ಕುಸಿತ ಕಂಡಿದೆ. ಇವರು ಪ್ರಸಕ್ತ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿಲ್ಲ. ಇವರು ಆರನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಭರವಸೆಯ ಬ್ಯಾಟರ್‌ ರುತುರಾಜ್ ಗಾಯಕ್ವಾಡ್‌ ಸಹ ಒಂದು ಸ್ಥಾನ ಕುಸಿತ ಕಂಡಿದ್ದು 14ನೇ ಸ್ಥಾನದಲ್ಲಿದ್ದಾರೆ.

ವೆಸ್ಟ್ ಇಂಡೀಸ್ ನ ಸ್ಟಾರ್ ಆಟಗಾರ ನಿಕೋಲಸ್ ಪೂರನ್ ಬಹು ದಿನಗಳ ಬಳಿಕ ಟಾಪ್ 10ರೊಳಗೆ ಮರಳಿದ್ದಾರೆ. ಅವರು ಈಗ 645 ರೇಟಿಂಗ್‌ನೊಂದಿಗೆ 10 ನೇ ಸ್ಥಾನವನ್ನು ತಲುಪಿದ್ದಾರೆ. ಈ ಬಾರಿಯ ಶ್ರೇಯಾಂಕದಲ್ಲಿ ಅವರು ಒಂದು ಸ್ಥಾನ ಏರಿಕೆ ಕಂಡಿದ್ದಾರೆ.

ವರುಣ್‌ 110 ಸ್ಥಾನ ಜಿಗಿತ

ಟೀಮ್ ಇಂಡಿಯಾಕ್ಕೆ ಕಂ ಬ್ಯಾಕ್ ಮಾಡಿದ ಬಳಿಕ ವರುಣ್ ಚಕ್ರವರ್ತಿ ಅಮೊಘ ಪ್ರದರ್ಶನ ನೀಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲೂ ವರುಣ ಸ್ಥಿರ ಪ್ರದರ್ಶನ ನೀಡಿ, ಆಡಿದ ಮೊದಲ ಎರಡು ಪಂದ್ಯಗಳಿಂದ 8 ವಿಕೆಟ್‌ ಕಬಳಸಿದ್ದರು. ಇದರ ಫಲವಾಗಿ ಇವರು ಬೌಲಿಂಗ್‌ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. 110 ಸ್ಥಾನ ಜಿಗಿತ ಕಂಡಿರುವ ವರುಣ್‌ ಸದ್ಯ, ಹಾರ್ದಿಕ್ ಪಾಂಡ್ಯ ಅವರೊಂದಿಗೆ 64ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.

Suryakumar Slips to Third in ICC T20 Rankings Varun Chakraborty Makes Record Jump of 110 Places

ಟೀಮ್ ಇಂಡಿಯಾದ ಯುವ ಲೆಗ್ ಸ್ಪಿನ್ ಬೌಲರ್ ರವಿ ಬಿಷ್ಣೋಯಿ ಸಹ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಬಿಷ್ಣೋಯ್ ಈಗ 666 ರೇಟಿಂಗ್ ಪಾಯಿಂಟ್‌ಗಳೊಂದಿಗೆ 7 ನೇ ಸ್ಥಾನದಲ್ಲಿದ್ದಾರೆ. ಪ್ರಸ್ತುತ, ಐಸಿಸಿ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಇಂಗ್ಲೆಂಡ್ ತಂಡದ ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಆಕ್ರಮಿಸಿಕೊಂಡಿದ್ದು, ಎರಡನೇ ಸ್ಥಾನದಲ್ಲಿ ವನಿಂದು ಹಸರಂಗ ಇದ್ದಾರೆ.

ಶಾಹೀನ್ ನಂಬರ್ 1

ಐಸಿಸಿ ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಅಗ್ರಸ್ಥಾನಕ್ಕೇರಿದ್ದಾರೆ. ಇದು ಅವರ ಸಾರ್ವಕಾಲಿಕ ಉನ್ನತ ರೇಟಿಂಗ್ ಕೂಡ ಆಗಿದೆ. ಅವನು ಹಿಂದೆಂದೂ ಇಲ್ಲಿಗೆ ಬಂದಿರಲಿಲ್ಲ. ಅಫ್ಘಾನಿಸ್ತಾನದ ರಶೀದ್ ಖಾನ್ 687 ರೇಟಿಂಗ್‌ನೊಂದಿಗೆ ಎರಡು, ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಮೂರನೇ ಸ್ಥಾನದಲ್ಲಿದ್ದಾರೆ.

Story first published: Wednesday, November 13, 2024, 15:28 [IST]
Other articles published on Nov 13, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+