ಭಾರತ vs ಇಂಗ್ಲೆಂಡ್: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸೂರ್ಯಕುಮಾರ್ ಸಜ್ಜು

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ಕಾದಾಟಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದ ಬಗ್ಗೆ ಸಾಕಷ್ಟು ಕುತೂಹಲಗಳು ಅಭಿಮಾನಿಗಳ ವಲಯದಲ್ಲಿದೆ. ಅದರಲ್ಲಿ ಪ್ರಮುಖವಾಗಿ ಆರಂಭಿಕ ಆಟಗಾರರ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟನೆಯನ್ನು ನೀಡಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದಾಗಿ ವಿರಾಟ್ ಕೊಹ್ಲಿ ಮಾಹಿತಿಯನ್ನು ನೀಡಿದರು.
ಇನ್ನು ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಬಗ್ಗೆಯೂ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳಲ್ಲಿದೆ. ಇದಕ್ಕೆ ಟೀಮ್ ಇಂಡಿಯಾ ನಾಯಕ ಅಥವಾ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್ ನಡೆಸಲಿದ್ದು ನಾಯಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಇಳಿಯಲಿದ್ದಾರೆ. ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಶ್ರೆಯಸ್ ಐಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್ ಇಬ್ಬರೂ ಆಯ್ಕೆಯಾಗಲಿದ್ದು ಶ್ರೇಯಸ್ ಐಯ್ಯರ್ ನಾಲ್ಕನೇ ಕ್ರಮಾಂಕ ಹಾಗೂ ಸೂರ್ಯಕುಮಾರ್ ಯಾದವ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ.
ದೇಶೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಕಳೆದ ಒಂದು ದಶಕದಿಂದ ಸಾಕಷ್ಟು ಸದ್ದು ಮಾಡುತ್ತಿರುವ ಆಟಗಾರ. ಐಪಿಎಲ್‌ನಲ್ಲಿಯೂ ಸೂರ್ಯಕುಮಾರ್ ಯಾದವ್ ನಿರಂತರವಾಗಿ ಸ್ಥಿರಪ್ರದರ್ಶನವನ್ನು ನೀಡಿಕೊಂಡು ಬಂದಿದ್ದಾರೆ. ಹೀಗಾಗಿ ಮಧ್ಯಮಕ್ರಮಾಂಕದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳಲಿದ್ದಾರೆ. ಅದರಲ್ಲೂ ನಾಲ್ಕನೇ ಕ್ರಮಾಂಕಕ್ಕೆ ಶ್ರೇಯಸ್ ಐಯ್ಯರ್‌ಗೆ ಬ್ಯಾಕ್‌ಅಪ್ ಆಗಿ ಪರಿಗಣಿಸುವ ಸಾಧ್ಯತೆಯಿದೆ.
ಕಳೆದ ಬಾರಿಯ ಐಪಿಎಲ್‌ನಲ್ಲಿ 7ನೇ ಗರಿಷ್ಠ ಆಟಗಾರನಾಗಿದ್ದರು ಸೂರ್ಯಕುಮಾರ್ ಯಾದವ್. ಮುಂಬೈ ತಂಡದ ಪರವಾಘಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದರು. ಕಳೆದ ಆವೃತ್ತಿಯಲ್ಲಿ ಆಡಿದ 16 ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 480 ರನ್‌ಗಳಿಸಿದ್ದಾರೆ. 145.01ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಸೂರ್ಯ 4 ಅರ್ಧ ಶತಕವನ್ನು ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications