ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್ ತಪ್ಪಾದ ಯುಗದಲ್ಲಿ ಆಡಿದ್ದಾರೆ: ಮನೋಜ್ ತಿವಾರಿ ಟ್ವೀಟ್

ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಸೋಮವಾರ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ್ದು, ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ ರೋಹಿತ್ ಶರ್ಮಾ ತಂಡದಿಂದ ಹೊರಬಿದ್ದಿದ್ದು, ಕನ್ನಡಿಗ ಕೆ.ಎಲ್ ರಾಹುಲ್‌ಗೆ ಉಪನಾಯಕತ್ವ ಸ್ಥಾನ ನೀಡಲಾಗಿದೆ.
ಬಿಸಿಸಿಐ ಹಿರಿಯ ಆಟಗಾರರ ಆಯ್ಕೆ ಸಮಿತಿಯು ಟಿ20, ಏಕದಿನ ಹಾಗೂ ಟೆಸ್ಟ್ ಫಾರ್ಮೆಟ್‌ಗಳಿಗೆ ತಂಡವನ್ನು ಪ್ರಕಟಿಸಿದ್ದು, ಸೂರ್ಯಕುಮಾರ್ ಯಾದವ್ ಹಾಗೂ ಆಲ್‌ರೌಂಡರ್ ಅಕ್ಷರ್ ಪಟೇಲ್‌ರನ್ನ ಕಡೆಗಳಿಸಿದೆ ಎಂದು ಮನೋಜ್ ತಿವಾರಿ ಮತ್ತು ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.
ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವ ಸೂರ್ಯಕುಮಾರ್ ಯಾದವ್ ಅವರು ಪ್ರಥಮ ದರ್ಜೆ ಕ್ರಿಕೆಟ್ ಸೇರಿದಂತೆ ಐಪಿಎಲ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದರು ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡದಿರುವುದಕ್ಕೆ ಮನೋಜ್ ತಿವಾರಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
''ಸೂರ್ಯಕುಮಾರ್ ಯಾದವ್ ಮತ್ತು ಅಕ್ಷರ್ ಪಟೇಲ್ ನೀವು ತಪ್ಪಾದ ಯುಗದಲ್ಲಿ ಆಡಿದ್ದೀರಿ, ನಿಜಕ್ಕೂ ಇದು ದುರಾದೃಷ್ಟ'' ಎಂದು ತಿವಾರಿ ಆಯ್ಕೆ ಸಮಿತಿಯನ್ನು ಟೀಕಿಸಿದ್ದಾರೆ.
ಸೂರ್ಯಕುಮಾರ್ ಯಾದವ್ ಪ್ರಸ್ತುತ ಐಪಿಎಲ್‌ನಲ್ಲಿ 11 ಪಂದ್ಯಗಳಲ್ಲಿ 283 ರನ್ ಗಳಿಸಿದ್ದಾರೆ, ಸರಾಸರಿ 31.44 ರೊಂದಿಗೆ 2 ಅರ್ಧಶತಕಗಳನ್ನು ಗಳಿಸಿದ್ದಾರೆ. ಆಲ್‌ರೌಂಡರ್ ಅಕ್ಷರ್ ಪಟೇಲ್ 10 ಪಂದ್ಯಗಳಲ್ಲಿ 65 ರನ್ ಗಳಿಸಿ 8 ವಿಕೆಟ್ ಪಡೆದಿದ್ದಾರೆ
ಸೂರ್ಯಕುಮಾರ್ ಯಾದವ್ ಇದುವರೆಗೂ 96 ಐಪಿಎಲ್ ಪಂದ್ಯಗಳಲ್ಲಿ 28.6 ಬ್ಯಾಟಿಂಗ್ ಸರಾಸರಿಯಲ್ಲಿ 1831 ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications