Rohit Sharma: ರೋಹಿತ್ ಶರ್ಮಾ ದಾಖಲೆಯನ್ನು ಬ್ರೇಕ್ ಮಾಡುವುದು ಯಾರು?
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಹೊಂದಿದೆ. ಈ ಸರಣಿಯಲ್ಲಿ ಹಲವು ಆಟಗಾರರು ದಾಖಲೆಗಳ ಮೇಲೆ ಕಣ್ಣು ನೆಟ್ಟಿದ್ದಾರೆ. ಇದೇ ವೇಳೆ ಇಂಗ್ಲೆಂಡ್ ನಾಯಕ ಜೋಸ್ಟ್ ಬಟ್ಲರ್, ಟೀಮ್ ಇಂಡಿಯಾದ ಭರವಸೆಯ ಬೌಲರ್ ಅರ್ಷದೀಪ್ ಸಿಂಗ್ ಒಂದೊಂದು ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಇಬ್ಬರು ಭರವಸೆಯ ಆಟಗಾರರು ಸಹ ದೊಡ್ಡ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದಾರೆ.
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಈಗಾಗಲೇ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಇವರು ಮಾಡಿರುವ ಒಂದು ದಾಖಲೆಯ ಮೇಲೆ ಭರವಸೆಯ ಆಟಗಾರರು ಕಣ್ಣು ನೆಟ್ಟಿದೆ. ಕಳೆದ ವರ್ಷ ಈ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದು, ಈ ದಾಖಲೆ ಯಾವಾಗ ಬ್ರೇಕ್ ಆಗುತ್ತದೆ ಎಂಬ ಪ್ರಶ್ನೆ ಉದ್ಭವಿಸಿದೆ. ಹಾಗಿದ್ದರೆ ಆ ದಾಖಲೆ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಯಾವ ದಾಖಲೆಯ ಸನಿಹದಲ್ಲಿ ಸೂರ್ಯ
ಇಂಗ್ಲೆಂಡ್ ವಿರುದ್ಧ ಭಾರತ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ವೇಳೆ ಅಭಿಮಾನಿಗಳ ಕಣ್ಣು ಟೀಮ್ ಇಂಡಿಯಾದ ಭರವಸೆಯ ಆಟಗಾರ ಸಂಜು ಸ್ಯಾಮ್ಸನ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅವರ ಮೇಲೆ ನೆಟ್ಟಿರಲಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಮಾಡಿರುವ ದಾಖಲೆಯನ್ನು ಯಾರು ಮುರಿಯುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ ರೋಹಿತ್ ಶರ್ಮಾ, ಗ್ಲೇನ್ ಮ್ಯಾಕ್ಸ್‌ವೆಲ್ ಹೆಸರಿನಲ್ಲಿದೆ.
ಚುಟುಕು ಫಾರ್ಮೆಟ್‌ನಲ್ಲಿ ರೋಹಿತ್ ಹಾಗೂ ಗ್ಲೇನ್ ಮ್ಯಾಕ್ಸ್‌ವೆಲ್ ತಲಾ ಐದು ಶತಕಗಳನ್ನು ಬಾರಿಸಿದ್ದಾರೆ. ರೋಹಿತ್ ಈಗಾಗಲೇ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿರುವುದರಿಂದ ಇವರ ಶತಕದ ಸಂಖ್ಯೆಯಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಇನ್ನು ಈ ದಾಖಲೆಯ ಸಮಿಪದಲ್ಲಿ ಇರುವು ಆಟಗಾರ ಎಂದರೆ ಸೂರ್ಯಕುಮಾರ್ ಯಾದವ್. ಇವರು ಟಿ20 ಕ್ರಿಕೆಟ್‌ನಲ್ಲಿ ಒಟ್ಟು ನಾಲ್ಕು ಶತಕಗಳನ್ನು ಗಳಿಸುವಲ್ಲಿ ಯಾರು ಯಶಸ್ವಿಯಾಗಿದ್ದಾರೆ.

ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಇನ್ನು ಒಂದು ಶತಕ ಬಾರಿಸುತ್ತಿದ್ದಂತೆ ಟಿ20 ಕ್ರಿಕೆಟ್‌ನಲ್ಲಿ ಐದು ಶತಕ ಬಾರಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ರೋಹಿತ್ ಹಾಗೂ ಗ್ಲೇನ್ ಮ್ಯಾಕ್ಸ್‌ವೆಲ್ ದಾಖಲೆ ಮುರಿಯಲು ಸೂರ್ಯಗೆ ಇನ್ನು ಎರಡು ಶತಕಗಳ ಅವಶ್ಯಕತೆ ಇದೆ.
ಸಂಜೂಗು ಇದೆ ಅವಕಾಶ
ಇನ್ನು ಟಿ20 ಕ್ರಿಕೆಟ್‌ನಲ್ಲಿ ಮೂರು ಶತಕಗಳನ್ನು ಬಾರಿಸಿದ ಬ್ಯಾಟರ್‌ಗಳ ಸಂಖ್ಯೆಗೇನು ಕಮ್ಮಿ ಇಲ್ಲ. ಈ ಸಾಲಿನಲ್ಲಿ ಸಂಜು ಸ್ಯಾಮ್ಸನ್ ಸಹ ಕಾಣಿಸಿಕೊಳ್ಳುತ್ತಾರೆ. ಇವರು ಕಳೆದ ವರ್ಷವೇ ಮೂರು ಶತಕ ಬಾರಿಸಿ ಭರವಸೆ ಮೂಡಿಸಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ಇವರು ಮೂರು ಶತಕ ಬಾರಿಸಿದ್ದೇ ಆದಲ್ಲಿ ರೋಹಿತ್, ಮ್ಯಾಕ್ಸ್‌ವೆಲ್ ದಾಖಲೆಯನ್ನು ಅಳಿಸಿ ಹಾಕಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications