Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Suryakumar Yadav: ಐಪಿಎಲ್‌ನಲ್ಲಿ ಕನ್ನಡಿಗನ 10 ವರ್ಷಗಳ ಹಳೆಯ ದಾಖಲೆ ಮುರಿದ ಸೂರ್ಯ

ಐಪಿಎಲ್ 2025 ರಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ 11ನೇ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಸೂರ್ಯ ಒಂದರ ನಂತರ ಒಂದರಂತೆ ಅದ್ಭುತ ಇನ್ನಿಂಗ್ಸ್ ಆಡುತ್ತಿದ್ದಾರೆ. ಅವರು ಇಲ್ಲಿಯವರೆಗೆ ಐಪಿಎಲ್‌ನಲ್ಲಿ ಯಾವುದೇ ಬ್ಯಾಟರ್ ಮಾಡಲು ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ಈ ಸಾಧನೆಯ ಪಟ್ಟಿಯಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಸೂರ್ಯ ಹಿಂದಿಕ್ಕಿ ಅಗ್ರಸ್ಥಾನವನ್ನು ತಲುಪಿದ್ದಾರೆ.

ಐಪಿಎಲ್‌ನಲ್ಲಿ 10 ವರ್ಷಗಳ ಹಿಂದೆ ರಾಬಿನ್ ಉತ್ತಪ್ಪ ಮಾಡಿದ್ದ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಮುರಿದಿದ್ದಾರೆ. ಈಗ ಸೂರ್ಯ ಸತತ 11 ಪಂದ್ಯಗಳಲ್ಲಿ 25 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Suryakumar Yadav creates record of scoring 25 or more runs in 11 consecutive matches in IPL

ಗುರುವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್‌ ಮಾಡಿತು. ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಮಾಡಿದರು. ರಾಜಸ್ಥಾನ ರಾಯಲ್ಸ್ ಬೌಲರ್ಸ್ ಅನ್ನು ಬೆಂಡೆತ್ತಿದ ಸೂರ್ಯ ಅರ್ಧಶತಕ ವಂಚಿತರಾದರು. ಆದರೂ, ಅವರು ಮುಂಬೈ ತಂಡ ಬಿಗ್ ಸ್ಕೋರ್ ಕಲೆ ಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ ಅಜೇಯ 48 ರನ್ ಗಳಿಸಿದರು.

ಸೂರ್ಯಕುಮಾರ್ ಯಾದವ್ ಇದುವರೆಗೆ 11 ಪಂದ್ಯಗಳನ್ನು ಆಡಿದ್ದಾರೆ. ಪ್ರತಿ ಪಂದ್ಯದಲ್ಲೂ 25 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇದಕ್ಕೂ ಮೊದಲು, ಸತತ 10 ಬಾರಿ 25 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ದಾಖಲೆ ರಾಬಿನ್ ಉತ್ತಪ್ಪ ಹೆಸರಿನಲ್ಲಿತ್ತು. ಅವರು ಐಪಿಎಲ್ 2014 ರಲ್ಲಿ ಈ ಸಾಧನೆಯನ್ನು ಮಾಡಿದ್ದರು. ಸ್ಟೀವ್ ಸ್ಮಿತ್, ಸಾಯಿ ಸುದರ್ಶನ್ ಮತ್ತು ವಿರಾಟ್ ಕೊಹ್ಲಿ ಸತತ 9 ಬಾರಿ ಈ ಸ್ಕೋರ್ ತಲುಪಿದ್ದಾರೆ. ಈ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದಾರೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 16.1 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮುಂಬೈ 100 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಗೆಲುವಿನೊಂದಿಗೆ, ಮುಂಬೈ ತಂಡವು 11 ಪಂದ್ಯಗಳಲ್ಲಿ 7 ರಲ್ಲಿ ಗೆಲುವು ಮತ್ತು 4 ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 14 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೆ ತಲುಪಿದೆ. ಅಲ್ಲದೆ, ಮುಂಬೈ ತಂಡದ ಪ್ಲೇಆಫ್ ಹಾದಿ ಕೂಡ ಸುಲಭವಾಗಿದೆ. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ 11 ಪಂದ್ಯಗಳಲ್ಲಿ 3 ಗೆಲುವು ಮತ್ತು 8 ಸೋಲುಗಳೊಂದಿಗೆ 6 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಈ ಸೋಲಿನೊಂದಿಗೆ ರಾಜಸ್ಥಾನ ರಾಯಲ್ಸ್ ತಂಡ ಪ್ಲೇಆಫ್ ನಿಂದ ಹೊರಬಿದ್ದಿದೆ.

Story first published: Friday, May 2, 2025, 13:23 [IST]
Other articles published on May 2, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+