For Quick Alerts
ALLOW NOTIFICATIONS  
For Daily Alerts
 

Suryakumar Yadav: ಕೇವಲ 3 ವರ್ಷಗಳಲ್ಲಿ ಕೊಹ್ಲಿ ವಿಶ್ವದಾಖಲೆಯನ್ನು ಸರಿಗಟ್ಟಿರುವ ಸ್ಕೈ

ಇತ್ತೀಚೆಗೆ ವಿಶ್ವ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಹಲವು ಅದ್ಭುತ ಸಾಧನೆಗಳನ್ನು ಮಾಡಿದೆ. ಜೊತೆಗೆ ಟೀಮ್ ಇಂಡಿಯಾ ಆಟಗಾರರು ಕೂಡ ಮಿಂಚುತ್ತಿದ್ದಾರೆ. ಯಾವುದೇ ದಾಖಲೆ ಪುಸ್ತಕದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೆಸರು ಮಾತ್ರ ಕಾಣಸಿಗುತ್ತದೆ.

ಆದರೆ, ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ವಿರಾಟ್ ಕೊಹ್ಲಿ ಗಿಂತ ನಾಲ್ಕು ಹೆಜ್ಜೆ ಮುಂದಿರುವಂತೆ ಕಾಣುತ್ತಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯು ಅಕ್ಟೋಬರ್ 6 ರಿಂದ ಪ್ರಾರಂಭವಾಗಲಿದ್ದು, ಸೂರ್ಯಕುಮಾರ್ ಅವರು ವಿರಾಟ್ ವಿಶ್ವ ದಾಖಲೆಯನ್ನು ಮುರಿಯುವ ಅಂಚಿನಲ್ಲಿದ್ದಾರೆ. ಈಗಾಗಲೇ ಕಳೆದ 10 ವರ್ಷಗಳಿಂದ ಕೊಹ್ಲಿ ಮಾಡಿರುವ ದಾಖಲೆಯನ್ನು ಸೂರ್ಯಕುಮಾರ್ ಕೇವಲ 3 ವರ್ಷಗಳಲ್ಲಿ ಸರಿಗಟ್ಟಿದ್ದಾರೆ.

Suryakumar Yadav equals Virat Kohli world record in T20 Cricket

ಪ್ರಸ್ತುತ ವಿಶ್ವ ಟಿ20 ಕ್ರಿಕೆಟ್‌ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಅವರು ಆಗ್ರ ಸ್ಥಾನದಲ್ಲಿದ್ದಾರೆ. ಆದರೆ ಬಿಸಿಸಿಐ ಆಯ್ಕೆದಾರರು ಅವರ ಸಾಮರ್ಥ್ಯವನ್ನು ತಡವಾಗಿ ಅರ್ಥಮಾಡಿಕೊಂಡರು. ಹಲವು ಏರಿಳಿತಗಳ ನಂತರ 30 ವಯಸ್ಸಿನಲ್ಲಿ ಸೂರ್ಯ ಅವರು ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಏಕದಿನ ಹಾಗೂ ಟೆಸ್ಟ್‌ನಲ್ಲಿ ಸೂರ್ಯ ಬ್ಯಾಟ್ ಸೈಲೆಂಡ್ ಆಗಿದ್ದರೂ ಟಿ20ಯಲ್ಲಿ ಹಲವು ದಾಖಲೆಗಳು ಸ್ಕೈ ಹೆಸರಿನಲ್ಲಿ ದಾಖಲಾಗಿವೆ.

ಕೇವಲ 3 ವರ್ಷಗಳಲ್ಲಿ ಸೂರ್ಯಕುಮಾರ್ ಅವರು ವಿರಾಟ್ ಕೊಹ್ಲಿ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ. ಇದೀಗ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿಯ ಈ ದಾಖಲೆಯನ್ನು ಸೂರ್ಯ ಮುರಿಯಲು ಸಜ್ಜಾಗಿದ್ದಾರೆ. ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 71 ಪಂದ್ಯಗಳಲ್ಲಿ 16 ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ವಿರಾಟ್ 125 ಪಂದ್ಯಗಳಲ್ಲಿ 16 ಪ್ರಶಸ್ತಿಗಳನ್ನು ಹೊಂದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಟಿ20 ಸರಣಿ ವೇಳೆ ಸೂರ್ಯ ಮತ್ತೊಂದು ಪ್ರಶಸ್ತಿಯನ್ನು ಗೆದ್ದರೆ, ಈ ದಾಖಲೆಯನ್ನು ಬ್ರೇಕ್ ಮಾಡಲಿದ್ದಾರೆ. ಈಗಾಗಲೇ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಸೂರ್ಯಕುಮಾರ್ ಯಾದವ್ 2026ರ ಟಿ20 ವಿಶ್ವಕಪ್ ತಯಾರಿಯಲ್ಲಿ ನಿರತರಾಗಿದ್ದಾರೆ. ಅವರನ್ನು ಭಾರತ ಟಿ20 ತಂಡದ ಖಾಯಂ ನಾಯಕರನ್ನಾಗಿ ಮಾಡಲಾಗಿದೆ. ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸದಲ್ಲಿ ತಮ್ಮ ಚೊಚ್ಚಲ ನಾಯಕತ್ವದಲ್ಲಿ ಭಾರತಕ್ಕೆ ಸರಣಿ ಗೆಲುವು ತಂದು ಕೊಟ್ಟಿದ್ದರು. ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಅವರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದರು. ಈಗ ಬಾಂಗ್ಲಾದೇಶ ವಿರುದ್ಧ ಸ್ಕೈ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Story first published: Friday, October 4, 2024, 7:13 [IST]
Other articles published on Oct 4, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+