Suryakumar Yadav: ಇಂಗ್ಲೆಂಡ್ ವಿರುದ್ಧ ಸೂರ್ಯ ವಿಶೇಷ ದಾಖಲೆಯ ಮೇಲೆ ಕಣ್ಣು
ಬುಧಾವಾರ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿ ಆರಂಭವಾಗಲಿದೆ. ಈ ಚುಟುಕು ಸರಣಿಯ ಮೂಲಕ ಟೀಮ್ ಇಂಡಿಯಾ ಪ್ರಸಕ್ತ ವರ್ಷವನ್ನು ಆರಂಭಿಸಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ. ಸೂರ್ಯ ಈಗ ಬರೀ ಪ್ಲೇಯರ್ ಆಗಿ ಮೈದಾನ ಪ್ರವೇಶಿಸುತ್ತಿಲ್ಲ. ಬದಲಿಗೆ ಒಬ್ಬ ನಾಯಕರಾಗಿ ಅಂಗಳ ಪ್ರವೇಶಿಸಲಿದ್ದಾರೆ. ಇವರು ನಾಯಕನಾಗಿ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ.
ಇತ್ತೀಚಿಗೆ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಅಮೋಘ ಜಯ ಸಾಧಿಸಿತ್ತು. ಹರಿಣಗಳ ನಾಡಿನಲ್ಲಿ ಸ್ಥಿರ ಪ್ರದರ್ಶನ ನೀಡಿ ಗೆಲುವು ದಾಖಲಿಸಿದೆ. ಈಗ ಟೀಮ್ ಇಂಡಿಯಾ ಇಂಗ್ಲೆಂಡ್ ಸವಾಲು ಎದುರಿಸಲಿದೆ. ಈ ಸರಣಿಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಸ್ಟಾರ್ ಹಾಗೂ ಅನುಭವಿ ಆಟಗಾರರು ಇದ್ದು, ಗೆಲುವಿನ ಆಸೆಯನ್ನು ಚಿಗುರಿಸಿದ್ದಾರೆ. ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಅಬ್ಬರದ ಪ್ರದರ್ಶನ ನಡೆಸಿದರೆ ದೊಡ್ಡ ದಾಖಲೆಯನ್ನು ಬರೆಯಬಹುದು.

ಯಾವ ದಾಖಲೆ ಬರೆಯಲಿದ್ದಾರೆ ಸೂರ್ಯ?
ಸೂರ್ಯಕುಮಾರ್ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಅಂಕಿ ಅಂಶ ಹೊಂದಿದ್ದಾರೆ. ಇಂಗ್ಲೆಂಡ್ ವಿರುದ್ಧ ಅವರದ್ದೇ ನೆಲದಲ್ಲಿ ಶತಕದ ಸಾಧನೆಯನ್ನು ಮಾಡಿದ್ದಾರೆ. ಅಲ್ಲದೆ ಆಂಗ್ಲರ ಪಡೆಯ ವಿರುದ್ಧ ಶತಕ ಸಾಧನೆ ಮಾಡಿರುವ 8ನೇ ಆಟಗಾರ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಬಾಬರ್ ಅಜಮ್, ಆರನ್ ಫಿಂಚ್, ಕ್ರಿಸ್ ಗೇಲ್, ಗ್ಲೆನ್ ಮ್ಯಾಕ್ಸ್‌ವೆಲ್, ರೋವ್‌ಮನ್ ಪೊವೆಲ್, ಕೆಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಇದ್ದಾರೆ. ಈ ಬ್ಯಾಟರ್‌ಗಳು ಇಂಗ್ಲೆಂಡ್ ವಿರುದ್ಧ ತಲಾ ಒಂದು ಶತಕ ಬಾರಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ ಮತ್ತೊಂದು ಶತಕ ಬಾರಿಸಿದರೆ, ಯಾರು ಮಾಡದ ದಾಖಲೆ ಬರೆಯಲಿದ್ದಾರೆ. ಹೌದು, ಟಿ20 ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಯಾವೊಬ್ಬ ಬ್ಯಾಟರ್ ಎರಡು ಬಾರಿ ಶತಕ ಬಾರಿಸಿಲ್ಲ. ಈ ದಾಖಲೆ ಸೂರ್ಯ ಹೆಸರಾಗಬಹುದು. ಸೂರ್ಯ ಇಂಗ್ಲೆಂಡ್ ವಿರುದ್ಧ ಸ್ಥಿರ ಬ್ಯಾಟಿಂಗ್ ನಡೆಸಿದ್ದಾರೆ. ಇವರು ಆಡಿದ 8 ಪಂದ್ಯಗಳಲ್ಲಿ 321 ರನ್ ಸಿಡಿಸಿದ್ದಾರೆ. ಇದರಲ್ಲಿ 34 ಬೌಂಡರಿ ಮತ್ತು 16 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ 78 ಟಿ20 ಪಂದ್ಯಗಳಲ್ಲಿ 2570 ರನ್ ಸಿಡಿಸಿದ್ದಾರೆ. ಇದರಲ್ಲಿ 4 ಶತಕ ಹಾಗೂ 71 ಅರ್ಧಶತಕಗಳು ಸೇರಿವೆ.

ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್. , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications