ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸೋಲು ಕಂಡಿರುವ ಟೀಮ್ ಇಂಡಿಯಾ, ಒತ್ತಡದಲ್ಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಟೀಮ್ ಇಂಡಿಯಾ, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆಲ್ಲುವ ಅನಿವಾರ್ಯತೆ ಇದೆ. ಇನ್ನು ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಪಡೆ ಆಸೀಸ್ ಪ್ರವಾಸ ಕೈಗೊಳ್ಳಲಿದೆ. ಇತ್ತ ಯಂಗ್ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಬೆಳಿಸಿದೆ.
ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 4 ಪಂದ್ಯಗಳ ಸರಣಿಯನ್ನು ಆಡಲು ಆಫ್ರಿಕಾ ಪ್ರವಾಸ ಬೆಳೆಸಿದೆ. ಈ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಯುವ ಆಟಗಾರರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಟೀಮ್ ಇಂಡಿಯಾ, ಚುಟುಕು ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಗೆಲುವು ದಾಖಲಿಸಿದೆ.

ಒಂದು ಕಡೆಯಲ್ಲಿ ಹಿರಿಯರ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳಿಸಿದರೆ, ಇತ್ತ ಯುವ ಪಡೆ ಆಫ್ರಿಕಾ ಪ್ರವಾಸವನ್ನು ಬೆಳೆಸಲಿದೆ. ದಕ್ಷಿಣ ಆಫ್ರಿಕಾದಲ್ಲಿ, ಆತಿಥೇಯ ತಂಡವನ್ನು ಮಣಿಸುವುದು ಸುಲಭದ ಮಾತಲ್ಲ. ಈಗ ಎಲ್ಲರ ಕಣ್ಣುಗಳ ಸಹ ಸೂರ್ಯಕುಮಾರ್ ಯಾದವ್ ಅವರ ಮೇಲೆ ನೆಟ್ಟಿರಲಿವೆ. ಸೂರ್ಯ ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ನಿರ್ಮಿಸುವ ಸುವರ್ಣ ಅವಕಾಶವನ್ನು ಹೊಂದಿದ್ದಾರೆ.
ಉಭಯ ತಂಡಗಳ ನಡುವೆ ನಡೆದ ಟಿ20 ಸರಣಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಎಂಬ ಹೆಗ್ಗಳಿಕೆ ರೋಹಿತ್ ಶರ್ಮಾ ಅವರಿಗೆ ಸಲ್ಲುತ್ತದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ 429 ರನ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಇವರು 394 ರನ್ ಸಿಡಿಸಿದ್ದಾರೆ. ಸೂರ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಮೈದಾನದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಸೂರ್ಯ ಬ್ಯಾಟ್‌ನೊಂದಿಗೆ 84 ರನ್ ಸಿಡಿದು ಬಂದರೆ, ಏಕಕಾಲಕ್ಕೆ ವಿರಾಟ್, ರೋಹಿತ್ ಅವರ ದಾಖಲೆಯನ್ನು ಅಳಿಸಿ ಹಾಕಬಲ್ಲರು.

ದಕ್ಷಿಣ ಆಫ್ರಿಕಾ ವಿರುದ್ಧ T20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ 57.66 ರ ಅತ್ಯುತ್ತಮ ಸರಾಸರಿಯೊಂದಿಗೆ 346 ರನ್ ಸಿಡಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧ ಶತಕಗಳು ಮತ್ತು ಒಂದು ಶತಕವೂ ಸೇರಿದೆ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 9 ದ್ವಿಪಕ್ಷೀಯ ಟಿ20 ಸರಣಿಗಳನ್ನು ಆಡಲಾಗಿದ್ದು, ಅದರಲ್ಲಿ ಟೀಮ್ ಇಂಡಿಯಾ 4 ರಲ್ಲಿ ಗೆಲುವು ಸಾಧಿಸಿದೆ. ಆಫ್ರಿಕಾ ತಂಡವು 2 ಸರಣಿಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮೂರು ಸರಣಿಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ದಾಖಲೆಯ ಪುಟಕ್ಕೆ ಎಂಟ್ರಿ ನೀಡಲು ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.