Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಹಿನ್ನಡೆ; ಸ್ಟಾರ್ ಆಟಗಾರನಿಗೆ ಗಾಯ

ಭಾರತ ತಂಡವು ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಗೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಸೆಪ್ಟೆಂಬರ್ 19 ರಿಂದ ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. ಟೀಮ್ ಇಂಡಿಯಾ 6 ತಿಂಗಳ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳಲಿದೆ.

ಬಹು ನಿರೀಕ್ಷಿತ ಟೆಸ್ಟ್ ಸರಣಿಗೂ ಮುನ್ನ ಭಾರತ ದೊಡ್ಡ ಹಿನ್ನಡೆ ಅನುಭವಿಸಿದೆ. ಟೀಮ್ ಇಂಡಿಯಾ ಟಿ20 ನಾಯಕ ಮತ್ತು ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದಾರೆ.

Suryakumar Yadav injured in Buchi Babu tournament

ಗಾಯಗೊಂಡಿದ್ದೇಗೆ?

ಬುಚ್ಚಿ ಬಾಬು ಟೂರ್ನಿಯಲ್ಲಿ ತಮಿಳುನಾಡು ವಿರುದ್ಧ ಮುಂಬೈನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸೂರ್ಯ ಗಾಯಗೊಂಡಿದ್ದಾರೆ. ಭಾರತ ಪರ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಮಿಂಚುವ ನಿರೀಕ್ಷೆಯಲ್ಲಿದ್ದರು. ಇಂತಹ ಪರಿಸ್ಥಿತಿಯಲ್ಲಿ ಅವರು ಗಾಯಗೊಂಡಿರುವ ಭಾರತಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಸೆಪ್ಟೆಂಬರ್ 5 ರಿಂದ ಪ್ರಾರಂಭವಾಗಲಿರುವ ದುಲೀಪ್ ಟ್ರೋಫಿಗೂ ಅವರ ಹೆಸರನ್ನು ಸೇರಿಸಲಾಗಿದೆ.

ಟೆಸ್ಟ್ ಆಡುವುದು ಡೌಟ್?

ಇತ್ತೀಚೆಗೆ ಭಾರತ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಬಯಕೆಯನ್ನು ಸೂರ್ಯ ವ್ಯಕ್ತಪಡಿಸಿದ್ದರು. 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನಾಡಿದ್ದಾರೆ.

ಈಗ ಗಾಯಗೊಂಡಿರುವ ಸೂರ್ಯ ದುಲೀಪ್ ಟ್ರೋಫಿಯಲ್ಲಿ ಆಡುವುದು ಇನ್ನೂ ಸ್ಪಷ್ಟವಾಗಿಲ್ಲ. ಇದಲ್ಲದೆ,
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಾರೋ? ಅಥವಾ ಇಲ್ಲವೋ? ಇಲ್ಲವೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Story first published: Sunday, September 1, 2024, 8:12 [IST]
Other articles published on Sep 1, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+