ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ: ಟೀಮ್ ಇಂಡಿಯಾ ಸ್ಕ್ವಾಡ್‌ಗೆ ಸೂರ್ಯಕುಮಾರ್ ಸೇರ್ಪಡೆ: ವರದಿ

Suryakumar Yadav is expected to join Indias Test team against New Zealand: reports

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಅಂತ್ಯವಾಗಿದ್ದು ಈ ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡುವ ಮೂಲಕ ವಶಕ್ಕೆ ಪಡೆದುಕೊಂಡಿದೆ. ಇದೀಗ ಟೆಸ್ಟ್ ಟೆಸ್ಟ್ ಸರಣಿಗೆ ಎರಡು ತಂಡಗಳು ಕೂಡ ಸಜ್ಜಾಗಿದ್ದು ಮುಂದಿನ ಗುರುವಾರದಿಂದ ಈ ಸರಣಿ ಟೆಸ್ಟ್ ಸರಣಿ ಆರಂಭವಾಗಲಿದೆ. ಕಾನ್ಪುರದಲ್ಲಿ ಮೊದಲ ಪಂದ್ಯ ನಡೆಯಲಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಭಾರತದ ಟೆಸ್ಟ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಸೂರ್ಯಕುಮಾರ್ ಯಾದವ್ ಇತ್ತೀಚೆಗೆ ಭಾರತದ ಪರವಾಗಿ ವೈಟ್‌ಬಾಲ್‌ನಲ್ಲಿ ಆಡಿದ್ದು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಇಂಗ್ಲಂಡ್ ವಿರುದ್ಧದ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಈವರೆಗೆ 11 ಅಂತಾರಾಷ್ಟ್ರೀಯ ಟಿ20 ಹಾಗೂ ಮೂರು ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಟೆಸ್ಟ್ ತಂಡದ ಭಾಗವಾಗಿದ್ದರು. ಆದರೆ ಆಡುವ ಅವಕಾಶ ದೊರೆತಿಲ್ಲ. ಇದೀಗ ಕಿವೀಸ್ ತಂಡದ ವಿರುದ್ಧದ ಸರಣಿಗೂ ಸೂರ್ಯಕುಮಾರ್ ಭಾರತ ಟೆಸ್ಟ್ ಸ್ಕ್ವಾಡ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ.

ಭಾರತ vs ನ್ಯೂಜಿಲೆಂಡ್‌: ಟಿ20 ಸರಣಿ ವೈಟ್‌ವಾಷ್ ಮಾಡಿ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾಭಾರತ vs ನ್ಯೂಜಿಲೆಂಡ್‌: ಟಿ20 ಸರಣಿ ವೈಟ್‌ವಾಷ್ ಮಾಡಿ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ

ಟಿ20 ಸರಣಿಯಲ್ಲಿ ಮಿಂಚಿರುವ SKY

ಟಿ20 ಸರಣಿಯಲ್ಲಿ ಮಿಂಚಿರುವ SKY

31 ಹರೆಯದ ಆಟಗಾರ ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ತಂಡ 3-0 ಅಂತರದಿಂದ ಗೆಲುವು ಸಾಧಿಸಿದ ಸಂದರ್ಭದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 40 ಎಸೆತಗಳಲ್ಲಿ 62 ರನ್ ಬಾರಿಸಿ ಮಿಂಚಿದ್ದು ಪಂದ್ಯ ಶ್ರೇಷ್ಠ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈಗ ಅಜಿಂಕ್ಯಾ ರಹಾನೆ ಮುನ್ನಡೆಸುತ್ತಿರುವ ಟೀಮ್ ಇಂಡಿಯಾ ಸ್ಕ್ವಾಡ್‌ಗೆ ಮೊದಲ ಟೆಸ್ಟ್ ಪಂದ್ಯಕ್ಕೆ ಸೇರ್ಪಡೆಯಾಗಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Video: ದೀಪಕ್ ಚಹಾರ್‌ ಸಿಡಿಸಿದ ಸಿಕ್ಸರ್‌ಗೆ, ಸೆಲ್ಯೂಟ್ ಹೊಡೆದ ರೋಹಿತ್ ಶರ್ಮಾ!

ಸೂರ್ಯಕುಮಾರ್ ಸೇರ್ಪಡೆ ಬಗ್ಗೆ ಮಿಡ್-ಡೇ ವರದಿ

ಸೂರ್ಯಕುಮಾರ್ ಸೇರ್ಪಡೆ ಬಗ್ಗೆ ಮಿಡ್-ಡೇ ವರದಿ

ಮಿಡ್‌-ಡೇ ಪತ್ರಿಕೆ ಈ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. "ಸೂರ್ಯಕುಮಾರ್ ಯಾದವ್ ಭಾರತದ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ. ಅವರು ಮುಂದಿನ ಕಾನ್ಪುರದಲ್ಲಿ ನಡೆಯಲಿರುವ ಟೆಸ್ಟ್ ಸ್ಕ್ವಾಡ್‌ಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ" ಎಂದು ವರದಿಯಾಗಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಸಾಧನೆ

ದೇಶೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಸಾಧನೆ

ಸೂರ್ಯಕುಮಾರ್ ಯಾದವ್ ತಮ್ಮ 11 ವರ್ಷಗಳ ಪ್ರಥಮದರ್ಜೆ ಕ್ರಿಕೆಟ್‌ನ ವೃತ್ತಿ ಜೀವನದಲ್ಲಿ 77 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 5356 ರನ್‌ಗಳಿಸಿದ್ದು 44 ರಷ್ಟು ಸರಾಸರಿ ಹೊಂದಿದ್ದಾರೆ. 14 ಶತಕ ಹಾಗೂ 26 ಅರ್ಧ ಶತಕಗಳು ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿ ದಾಖಲಾಗಿದೆ. 2010-11ರ ದೇಶೀಯ ಕ್ರಿಕೆಟ್ ಆವೃತ್ತಿಯಲ್ಲಿ ಮುಂಬೈ ಪರವಾಗಿ ದೆಹಲಿ ವಿರುದ್ಧ ಆಡಿದ್ದರು. ಮೊದಲ ಪಂದ್ಯದಲ್ಲಿಯೇ 73 ರನ್‌ಗಳಿಸಿ ಗಮನಸೆಳೆದಿದ್ದರು. ಕಳೆದ 2020ರ ಫೆಬ್ರವರಿ ತಿಂಗಳಿನಿಂದ ಸೂರ್ಯಕುಮಾರ್ ಯಾದವ್ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಕಣಕ್ಕಿಳಿದಿಲ್ಲ.

ಕಳೆದ ಜೂನ್‌ ತಿಂಗಳಿನಲ್ಲಿ ಇತ್ತಂಡಗಳ ಮುಖಾಮುಖಿ

ಕಳೆದ ಜೂನ್‌ ತಿಂಗಳಿನಲ್ಲಿ ಇತ್ತಂಡಗಳ ಮುಖಾಮುಖಿ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ 2021-23ರ ಆವೃತ್ತಿಯ ಭಾಗವಾಗಿದೆ. ಸದ್ಯ ಈ ಟೂರ್ನಿಯ ಅಂಕಪಟ್ಟಿಯಲ್ಲಿ ಭಾರತ 54.2 ಅಂಕಗಳೊಂದಿಗೆ ಮುನ್ನಡೆಯಲ್ಲಿದೆ. ಕಳೆದ ಜೂನ್‌ ತಿಂಗಳಿನಲ್ಲಿ ಈ ಎರಡು ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಇದರಲ್ಲಿ ನ್ಯೂಜಿಲೆಂಡ್ ತಂಡ ಭಾರತ ತಂಡವನ್ನು ಮಣಿಸಿ ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್‌ನ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಟೆಸ್ಟ್ ಚಾಂಪಿಯನ್ ತಂಡವಾಗಿದೆ.

ಪ್ರಕಟವಾಗಿರುವ ಟೀಮ್ ಇಂಡಿಯಾ ಸ್ಕ್ವಾಡ್: ಅಜಿಂಕ್ಯ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್-ಕೀಪರ್), ಕೆಎಸ್ ಭರತ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಸರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಎಂಡಿ ಸಿರಾಜ್, ಪ್ರಸಿದ್ಧ್ ಕೃಷ್ಣ.

ಆಡಮ್ ಝಂಪಾ ತಮ್ಮ ಹ್ಯಾಟ್ರಿಕ್ ತಪ್ಪಿಸಿದ್ದಕ್ಕೆ ಕಾಲೆಳದದ್ದು ಹೀಗೆ | Oneindia Kannada

Story first published: Monday, November 22, 2021, 20:03 [IST]
Other articles published on Nov 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X