For Quick Alerts
ALLOW NOTIFICATIONS  
For Daily Alerts
 

ಟಿ20 ಕ್ರಿಕೆಟ್: ವಿರಾಟ್-ಬಾಬರ್ ಕ್ಲಬ್ ಸೇರಿದ ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್ ನಾಯಕರಾದ ನಂತರ ಭಾರತ ಟಿ20 ತಂಡಕ್ಕೆ ಹೊಸ ಆಯಾಮ ಸಿಕ್ಕಿದೆ. ಶ್ರೀಲಂಕಾ ಪ್ರವಾಸದ ನಂತರ ಸತತ ಎರಡನೇ ಬಾರಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20 ಸರಣಿಯನ್ನು ಗೆದ್ದಿದೆ. ಜೊತೆಗೆ ಅವರು ಕೂಡ ಟಿ20 ಕ್ರಿಕೆಟ್‌ನಲ್ಲಿ ಅದ್ಭುತ ದಾಖಲೆಗಳನ್ನು ಮಾಡಿದ್ದಾರೆ.

ಶನಿವಾರದಂದು ನಡೆದ ಬಾಂಗ್ಲಾದೇಶ ವಿರುದ್ಧದ ಮೂರನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಯುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಔಟಾದ ನಂತರ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಸೂರ್ಯ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸಿದರು. ಸಂಜು ಸ್ಯಾಮ್ಸನ್ (111) ಅವರೊಂದಿಗೆ ಎರಡನೇ ವಿಕೆಟ್‌ಗೆ 173 ರನ್‌ಗಳ ಜೊತೆಯಾಟ ಆಡಿದರು. ಈ ಮೂಲಕ ಅವರು, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ಮಾಜಿ ನಾಯಕ ಬಾಬರ್ ಅಜಮ್ ಕ್ಲಬ್ ಸೇರಿದ್ದಾರೆ.

Suryakumar Yadav joined the Virat Kohli-Babar Azam club in T20 cricket

ಬಿರುಸಿನ ಬ್ಯಾಟಿಂಗ್

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್‌ ನೆರವಿನಿಂದ 75 ರನ್ ಬಾರಿಸಿದರು. ಈ ಮೂಲಕ ಸೂರ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 2500 ರನ್‌ಗಳನ್ನು ಪೂರೈಸಿದರು. ಬಾಬರ್ ಅಜಮ್ ಮತ್ತು ವಿರಾಟ್ ಕೊಹ್ಲಿ ನಂತರ ಅತಿ ವೇಗಿ 2500 ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡರು.

ಬಾಬರ್ ತಮ್ಮ 67ನೇ ಪಂದ್ಯದಲ್ಲಿ 2500 ರನ್‌ಗಳ ಗಡಿ ದಾಟಿದರೆ, ಕೊಹ್ಲಿ ಈ ಮೈಲಿಗಲ್ಲನ್ನು ತಲುಪಲು 73 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ. ಸೂರ್ಯ 74 ಪಂದ್ಯಗಳನ್ನು ಆಡುವ ಮೂಲಕ ಈ ಸಾಧನೆ ಮಾಡಿದರು. ಟಿ20ಯಲ್ಲಿ 2500ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಬ್ಯಾಟರ್ ರೋಹಿತ್ ಶರ್ಮಾ. ಟೀಮ್ ಇಂಡಿಯಾ ಪರ 100ನೇ ಪಂದ್ಯದಲ್ಲಿ ಅವರು 2500 ರನ್‌ಗಳ ಗಡಿ ದಾಟಿದರು.

ಪಾಂಡ್ಯ ದಾಖಲೆ ಬ್ರೇಕ್

ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ದಾಖಲೆಯನ್ನು ಮುರಿದ್ದಾರೆ. ಇದರೊಂದಿಗೆ ಭಾರತದ ನಾಲ್ಕನೇ ಅತ್ಯಂತ ಯಶಸ್ವಿ ನಾಯಕನಾಗಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಭಾರತ ಇದುವರೆಗೆ ಆಡಿರುವ 13 ಟಿ20ಗಳಲ್ಲಿ 11ರಲ್ಲಿ ಗೆಲುವು ಸಾಧಿಸಿದೆ. ಸೂರ್ಯ ನಾಯಕತ್ವದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳನ್ನು, ದಕ್ಷಿಣ ಆಫ್ರಿಕಾ ವಿರುದ್ಧ 1 ಪಂದ್ಯ ಮತ್ತು ಶ್ರೀಲಂಕಾ ಮತ್ತು ಬಾಂಗ್ಲಾದೇಶ ವಿರುದ್ಧ 3-3 ಪಂದ್ಯಗಳನ್ನು ಗೆದ್ದಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ 16 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 10 ಗೆಲುವು ಸಾಧಿಸಿದೆ.

Story first published: Sunday, October 13, 2024, 15:25 [IST]
Other articles published on Oct 13, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+