ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪ್ರದರ್ಶನವನ್ನು ನೀಡಿ ಗೆಲುವು ದಾಖಲಿಸಿದೆ. ಭಾನುವಾರ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್ ಹಾಗೂ ಆರ್‌ಆರ್ ತಂಡಗಳು ಕಾದಾಟ ನಡೆಸಿದ್ರೆ, ಎರಡನೆ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಇವರು ಐಪಿಎಲ್‌ನಲ್ಲಿ ಮತ್ತೊಂದು ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಈ ವೇಳೆ ಚೆನ್ನೈನ ಚಿಪಾಕಾ ಅಂಗಳದಲ್ಲಿ ನಡೆಯುವ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸುವ ಯೋಜನೆ ಹಾಕಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಸೂರ್ಯ 14 ರನ್ ಬಾರಿಸುತ್ತಾ ಇದ್ದಂತೆ ವಿಶೇಷ ದಾಖಲೆಯನ್ನು ಬರೆಯಲಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೂರ್ಯ 14 ರನ್ ಸಿಡಿಸ್ತಾ ಇದ್ದಂತೆ ವಿಶೇಷ ಕ್ಲಬ್ ಸೇರಲಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ನಲ್ಲಿ 3000 ರನ್ ಬಾರಿಸಿದ ಆಟಗಾರರ ಕ್ಲಬ್ ಸೇರಲಿದ್ದಾರೆ. ಈ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ 3000 ರನ್ ಗಳಿಸಿದ ಮುಂಬೈನ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ವರೆಗೆ ಈ ಸಾಧನೆಯನ್ನು ಮುಂಬೈ ಪರ ಇಬ್ಬರು ಆಟಗಾರರು ಮಾತ್ರ ಮಾಡಿದ್ದಾರೆ. ಈಗ ಈ ಲೀಸ್ಟ್‌ಗೆ ಸೇರಲು ಸೂರ್ಯಕುಮಾರ್ ಸಹ ಸಿದ್ಧರಾಗಿದ್ದಾರೆ.
ಮುಂಬೈ ತಂಡಕ್ಕೆ ಐದು ಬಾರಿ ಐಪಿಎಲ್ ತೊಡಿಸಿದ ನಾಯಕ ರೋಹಿತ್ ಶರ್ಮಾ, ಮುಂಬೈ ಪರ 208 ಇನಿಂಗ್ಸ್‌ಗಳನ್ನು ಆಡಿದ್ದು 5458 ರನ್ ಗಳಿಸಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಟಗಾರ ಕೀರನ್ ಪೊಲಾರ್ಡ್ ಸಹ ಇದೇ ಫ್ರಾಂಚೈಸಿ ಪರ 3412 ರನ್ ಗಳಿಸಿದ್ದಾರೆ. ಮುಂಬೈ ಪರ ಸೂರ್ಯ 94 ಇನಿಂಗ್ಸ್‌ಗಳಲ್ಲಿ 2986 ರನ್ ಚಚ್ಚಿದ್ದಾರೆ.
ಸೂರ್ಯಕುಮಾರ್ ಯಾದವ್ ಇದೇ ಎರಡನೇ ಬಾರಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಇದಕ್ಕೂ ಮೊದಲು 2023ರಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದರು. ಆ ಪಂದ್ಯದಲ್ಲಿ ಮುಂಬೈ ಜಯ ಸಾಧಿಸಿತ್ತು. ಈಗ ಮತ್ತೊಮ್ಮೆ ಎಂಐ ತಂಡದ ಪರ ಕಣಕ್ಕೆ ಇಳಿಯಲು ಸಜ್ಜರಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈಗಾಗಲೇ ತಲಾ ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಲಕರಿಸಿವೆ. ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ 37 ಬಾರಿ ಮುಖಾಮುಖಿ ಆಗಿದ್ದು, ಈ ವೇಳೆ ಚೆನ್ನೈ 17 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಮುಂಬೈ ಇಂಡಿಯನ್ಸ್ 20 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಉಭಯ ತಂಡಗಳ ಪರ 219 ಗರಿಷ್ಠ ಸ್ಕೋರ್.