IND vs SA: ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆಯಲು ಸೂರ್ಯಕುಮಾರ್ ಯಾದವ್‌ಗೆ ಬೇಕು 6 ಸಿಕ್ಸರ್
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯು ನವೆಂಬರ್ 8 ರಿಂದ ಪ್ರಾರಂಭವಾಗಲಿದ್ದು, ರೋಚಕ ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ 4 ಪಂದ್ಯಗಳ ಈ ಸರಣಿಗಾಗಿ ದಕ್ಷಿಣ ಆಫ್ರಿಕಾ ತಲುಪಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ತಮ್ಮ ಹೆಸರಿನಲ್ಲಿ ಬೃಹತ್ ದಾಖಲೆ ಮಾಡುವ ಅವಕಾಶವನ್ನು ಹೊಂದಿದ್ದಾರೆ. ಟಿ20 ಕ್ರಿಕೆಟ್‌ನ ಇಬ್ಬರು ಸ್ಟಾರ್ ಬ್ಯಾಟರ್‌ಗಳ ಕ್ಲಬ್‌ಗೆ ಸೇರಲು ಅವರು ಒಂದು ಅದ್ಭುತ ಇನ್ನಿಂಗ್ಸ್ ಆಡಬೇಕಾಗಿದೆ.

ಏನಿದು ಹೊಸ ದಾಖಲೆ?
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20ಯಲ್ಲಿ ಸೂರ್ಯಕುಮಾರ್ ಯಾದವ್ 6 ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾದರೆ, ಅವರು ಟೀಮ್ ಇಂಡಿಯಾದ ರೋಹಿತ್ ಶರ್ಮಾ ಮತ್ತು ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಕ್ಲಬ್‌ಗೆ ಸೇರಲಿದ್ದಾರೆ. ಸೂರ್ಯಕುಮಾರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳನ್ನು ಪೂರ್ಣಗೊಳಿಸಲು ಕಾಯುತ್ತಿದ್ದಾರೆ.
ಒಂದು ವೇಳೆ 6 ಸಿಕ್ಸರ್ ಸಿಡಿಸಿದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳ ಗಡಿ ಮುಟ್ಟಿದ ಮೂರನೇ ಆಟಗಾರರ ಏನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ರೋಹಿತ್ ಶರ್ಮಾ ಮತ್ತು ಮಾರ್ಟಿನ್ ಗಪ್ಟಿಲ್ ಮಾತ್ರ ಈ ದಾಖಲೆಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಸೂರ್ಯಕುಮಾರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 144 ಸಿಕ್ಸರ್‌ಗಳನ್ನು ಹೊಂದಿದ್ದಾರೆ.
ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಬ್ಯಾಟರ್ ಸೂರ್ಯಕುಮಾರ್ ಯಾದವ್. 144 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ರೋಹಿತ್ ಶರ್ಮಾ ಮತ್ತು ಮಾರ್ಟಿನ್ ಗಪ್ಟಿಲ್ ನಂತರದ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 205 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಮಾರ್ಟಿನ್ ಗಪ್ಟಿಲ್ 173 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್ (144) ಮತ್ತು ಇಂಗ್ಲೆಂಡ್‌ನ ಜೋಸ್ ಬಟ್ಲರ್ (137) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಚಿತ್ತ ಗೆದ್ದಿದ್ದಾರೆ. ಮೊದಲ ಎಸೆತದಲ್ಲೇ ಬೌಂಡರಿ ಹಾಗೂ ಸಿಕ್ಸರ್ ಬಾರಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ. ಈ ಕಾರಣದಿಂದಾಗಿ ಅವರನ್ನು ಮಿಸ್ಟರ್ 360 ಎಂದೂ ಕರೆಯುತ್ತಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಸೂರ್ಯಕುಮಾರ್ ಅವರ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಸೂರ್ಯ ಇದುವರೆಗೆ ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 74 ಪಂದ್ಯಗಳಲ್ಲಿ 170ರ ಸ್ಟ್ರೈಕ್ ರೇಟ್‌ನಲ್ಲಿ 2544 ರನ್ ಗಳಿಸಿದ್ದಾರೆ. ಅವರ ಹೆಸರಿನಲ್ಲಿ 4 ಶತಕಗಳಿವೆ. ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications