ಟಿ20 ವಿಶ್ವಕಪ್‌ಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡುತ್ತಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯನ್ನು ಈಗಾಗಲೇ ಸೂರ್ಯ ಪಡೆ ಗೆದ್ದು ಬೀಗಿದೆ. ಭಾರತ ಈ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡುವತ್ತ ಚಿತ್ತ ನೆಟ್ಟಿದೆ. ವಿಶಾಖಪಟ್ಟಣಂನಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡುವುದು ಆಸಕ್ತಿದಾಯಕವಾಗಿರುತ್ತದೆ. ಬುಧವಾರ ಸರಣಿಯ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.
ಕಳೆದ ಕೆಲವು ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಸೂರ್ಯಕುಮಾರ್ ಯಾದವ್ ಈಗ ಲಯಕ್ಕೆ ಮರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಸೂರ್ಯ ಸರಣಿಯ ಮೊದಲ ಪಂದ್ಯದಲ್ಲಿ 32 ರನ್ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ ಅಜೇಯ 82, ಮೂರನೇ ಪಂದ್ಯದಲ್ಲಿ ಅಜೇಯ 57 ರನ್ ಸಿಡಿಸಿದರು. ನಾಲ್ಕನೇ ಪಂದ್ಯದಲ್ಲಿ ಸೂರ್ಯ ಸ್ಥಿರ ಪ್ರದರ್ಶನ ನೀಡುವಲ್ಲಿ ಸಫಲರಾದಲ್ಲಿ ದೊಡ್ಡ ಮೈಲಿಗಲ್ಲನ್ನು ಮುಟ್ಟಬಹುದಾಗಿದೆ.

ಸೂರ್ಯಕುಮಾರ್ ಯಾದವ್ ನಾಲ್ಕನೇ ಟಿ20 ಪಂದ್ಯದಲ್ಲಿ 41 ರನ್ ಬಾರಿಸುವಲ್ಲಿ ಸಫಲರಾದರೆ, ಟಿ20 ಕ್ರಿಕೆಟ್‌ನಲ್ಲಿ ಅವರು 3 ಸಾವಿರ ರನ್ ಪೂರ್ಣಗೊಳಿಸುತ್ತಾರೆ. ಸೂರ್ಯ ಆಡಿದ 102 ಟಿ20 ಪಂದ್ಯಗಳ 196 ಇನ್ನಿಂಗ್ಸ್‌ಗಳಲ್ಲಿ 2,959 ರನ್ ಗಳಿಸಿದ್ದಾರೆ, ಇದರಲ್ಲಿ 4 ಶತಕಗಳು ಮತ್ತು 23 ಅರ್ಧಶತಕಗಳು ಸೇರಿವೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ವರೆಗೆ ಕೇವಲ ಇಬ್ಬರು ಭಾರತೀಯ ಆಟಗಾರರು ಮಾತ್ರ ಟಿ20 ಕ್ರಿಕೆಟ್‌ನಲ್ಲಿ 3 ಸಾವಿರ ರನ್ ಪೂರೈಸಿದ್ದಾರೆ.
ಟೀಮ್ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಚುಟುಕು ಫಾರ್ಮೆಟ್‌ನಲ್ಲಿ 4 ಸಾವಿರಕ್ಕೂ ಹೆಚ್ಚು ರನ್ ಬಾರಿಸಿದ ಹಿರಿಮೆ ಹೊಂದಿದ್ದಾರೆ.
ಇಲ್ಲಿಯವರೆಗೆ, ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳು ಮಾತ್ರ ಟಿ20ಐ ಕ್ರಿಕೆಟ್‌ನಲ್ಲಿ 3,000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಇಬ್ಬರು ಆಟಗಾರರು ಬೇರೆ ಯಾರೂ ಅಲ್ಲ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ. ವಿರಾಟ್ ಮತ್ತು ರೋಹಿತ್ ಇಬ್ಬರೂ 20 ಓವರ್‌ಗಳ ಸ್ವರೂಪದಲ್ಲಿ ಭಾರತಕ್ಕಾಗಿ 4,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ರೋಹಿತ್ ಶರ್ಮಾ, 4231
ವಿರಾಟ್ ಕೊಹ್ಲಿ, 4188
ಸೂರ್ಯಕುಮಾರ್ ಯಾದವ್, 2959
ಕೆಎಲ್ ರಾಹುಲ್, 2265
ಹಾರ್ದಿಕ್ ಪಾಂಡ್ಯ, 2027
ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಫೆಬ್ರವರಿ 7 ರಂದು ಟಿ20 ವಿಶ್ವಕಪ್ 2026 ರಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಭಾರತ ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ಸೂರ್ಯ ಅವರ ನಾಯಕತ್ವದಲ್ಲಿ, ಭಾರತ ತಂಡವು ಇಲ್ಲಿಯವರೆಗೆ 41 ಪಂದ್ಯಗಳನ್ನು ಆಡಿದೆ, ಅವುಗಳಲ್ಲಿ 31 ಗೆದ್ದಿದೆ ಮತ್ತು ಆರು ಪಂದ್ಯಗಳನ್ನು ಸೋತಿದೆ.