ಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆ

ಸದ್ಯ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೇಳಿಕೊಳ್ಳುವಂತಹ ಯಶಸ್ಸನ್ನೇನೂ ತಂದುಕೊಟ್ಟಿಲ್ಲ. ಅದರಲ್ಲಿಯೂ ಯುಎಇಯಲ್ಲಿ ಮುಂದುವರಿಯುತ್ತಿರುವ ದ್ವಿತೀಯ ಹಂತದಲ್ಲಂತೂ ಮುಂಬೈ ಇಂಡಿಯನ್ಸ್ ತಂಡ ಯಾರೂ ಊಹಿಸಿರದ ರೀತಿ ಮಂಕಾಗಿಬಿಟ್ಟಿದೆ. ಟೂರ್ನಿಯಲ್ಲಿ ಇದುವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ತಂಡ 5 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 6 ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ.
ಯುಎಇಯಲ್ಲಿ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಪ್ರಾರಂಭವಾದ ಬಳಿಕ ಮುಂಬೈ ಇಂಡಿಯನ್ಸ್ ತಂಡ ಇದುವರೆಗೂ ಒಟ್ಟು 4 ಪಂದ್ಯಗಳನ್ನಾಡಿದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯಗಳಿಸಿದೆ. ಹ್ಯಾಟ್ರಿಕ್ ಸೋಲನ್ನು ಕಂಡು ಮಂಕಾಗಿದ್ದ ಮುಂಬೈ ಇಂಡಿಯನ್ಸ್ ತಂಡ ಇತ್ತೀಚೆಗಷ್ಟೇ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಪ್ಲೇಆಫ್ ಸುತ್ತನ್ನು ಪ್ರವೇಶಿಸುವ ತನ್ನ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ.
ಹೀಗೆ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹಲವಾರು ಪಂದ್ಯಗಳಲ್ಲಿ ಸಾಲುಸಾಲಾಗಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದ್ದ ಹಾರ್ದಿಕ್ ಪಾಂಡ್ಯ ಉತ್ತಮ ಬ್ಯಾಟಿಂಗ್ ನಡೆಸುವುದರ ಮೂಲಕ ಭರವಸೆಯನ್ನು ಹುಟ್ಟು ಹಾಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 30 ಎಸೆತಗಳಲ್ಲಿ 40 ರನ್ ಬಾರಿಸಿದರು. ಆದರೆ ಮುಂಬೈ ಇಂಡಿಯನ್ಸ್ ತಂಡದ ಮತ್ತೊಬ್ಬ ಆಟಗಾರನಾದ ಸೂರ್ಯಕುಮಾರ್ ಯಾದವ್ ಮಾತ್ರ ಕಳೆದ 4 ಪಂದ್ಯಗಳಲ್ಲಿಯೂ ಮಂಕಾಗಿದ್ದು ಸಾಲಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಈ ಕುರಿತಾಗಿ ಇದೀಗ ಮುಂಬೈ ಇಂಡಿಯನ್ಸ್ ತಂಡದ ಹೆಡ್ ಕೋಚ್ ಮಹೇಲಾ ಜಯವರ್ಧನೆ ಮಾತನಾಡಿದ್ದು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಶೀಘ್ರದಲ್ಲಿಯೇ ಸೂರ್ಯಕುಮಾರ್ ಯಾದವ್ ಕಮ್ ಬ್ಯಾಕ್ ಮಾಡಲಿದ್ದಾರೆ
ಸೂರ್ಯಕುಮಾರ್ ಯಾದವ್ ಪ್ರಸಕ್ತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಯುಎಇ ಚರಣದಲ್ಲಿ ಆಡಿರುವ ಎಲ್ಲ 4 ಪಂದ್ಯಗಳಲ್ಲಿಯೂ ಸಾಲುಸಾಲಾಗಿ ಕಳಪೆ ಪ್ರದರ್ಶನ ನೀಡಿರುವುದರ ಕುರಿತಾಗಿ ಮಾತನಾಡಿರುವ ಮುಂಬೈ ಇಂಡಿಯನ್ಸ್ ತಂಡದ ಹೆಡ್ ಕೋಚ್ ಮಹೇಲಾ ಜಯವರ್ಧನೆ 'ಸೂರ್ಯಕುಮಾರ್ ಯಾದವ್ ಅವರ ಕಳಪೆ ಪ್ರದರ್ಶನದ ಕುರಿತಾಗಿ ಹೆಚ್ಚಿನ ಕಾಳಜಿ ತೋರಿಸುವ ಅಗತ್ಯವಿಲ್ಲ, ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸೂರ್ಯಕುಮಾರ್ ಯಾದವ್ ಪಿಚ್‌ನಲ್ಲಿ ಹೆಚ್ಚು ಸಮಯ ಕಾಲ ಕಳೆಯಬೇಕಾದ ಅಗತ್ಯವಿದೆ. ಹೀಗಾದರೆ ಅವರು ಬ್ಯಾಟಿಂಗ್ ಲಯ ಕಂಡುಕೊಳ್ಳಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುಎಇ ಚರಣದಲ್ಲಿ ಸೂರ್ಯಕುಮಾರ್ ಯಾದವ್ ನೀರಸ ಪ್ರದರ್ಶನ
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಯುಎಇ ಚರಣದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆಡಿರುವ ಒಟ್ಟು 4 ಪಂದ್ಯಗಳಲ್ಲಿಯೂ ಕಣಕ್ಕಿಳಿದಿರುವ ಸೂರ್ಯಕುಮಾರ್ ಯಾದವ್ ಆ 4 ಪಂದ್ಯಗಳಲ್ಲಿ ಕ್ರಮವಾಗಿ 3, 5, 8 ಮತ್ತು 0 ರನ್‌ಗಳನ್ನು ಕಲೆಹಾಕಿ ಸಾಲುಸಾಲಾಗಿ ಕಳಪೆ ಪ್ರದರ್ಶನ ನೀಡಿದ್ದಾರೆ.

ಪ್ಲೇ ಆಫ್ ಪ್ರವೇಶಿಸುತ್ತಾ ಮುಂಬೈ?
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲವಾದರೂ ಪ್ಲೇ ಆಫ್ ಹಂತದ ರೇಸ್‌ನಿಂದ ಹೊರಬಿದ್ದಿಲ್ಲ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 5 ಪಂದ್ಯಗಳಲ್ಲಿ ಜಯಗಳಿಸಿದ್ದು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಟೂರ್ನಿಯಲ್ಲಿ ಇನ್ನೂ 3 ಪಂದ್ಯಗಳನ್ನಾಡಲಿರುವ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸಲೇಬೇಕಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications