ಮುಂದಿನ ಆವೃತ್ತಿಯಲ್ಲಿ ಮತ್ತೊಂದು ಟ್ರೋಫಿ ಗೆಲ್ಲುತ್ತೇವೆ: MI ಆಟಗಾರ ಸೂರ್ಯಕುಮಾರ್ ವಿಶ್ವಾಸ

ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಅನುಭವಿ ಆಟಗಾರ ಸೂರ್ಯಕುಮಾರ್ ಯಾದವ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಮುಂದಿನ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಟ್ರೋಫಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಸೂರ್ಯಕುಮಾರ್ ಯಾದವ್.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಸೂರ್ಯಕುಮಾರ್ ಯಾದವ್ ಐಪಿಎಲ್ 2023ರ ಆವೃತ್ತಿಯಲ್ಲಿ ಮತ್ತೊಂದು ಟ್ರೋಫೀಯನ್ನು ಮುಂಬೈ ಇಂಡಿಯನ್ಸ್ ಖಂಡಿತಾ ಗೆಲ್ಲಬೇಕಿದೆ ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಈ ಮೂಲಕ ಮುಂದಿನ ಆವೃತ್ತಿಗೆ ಬಲಿಷ್ಠವಾಗಿ ಕಮ್‌ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ಹೀನಾಯ ಪ್ರದರ್ಶನ ನೀಡಿದ ಮುಂಬೈ
ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಲೀಗ್ ಹಂತದಲ್ಲಿ ಆಡಿದ ತಂಡಗಳ ಪೈಕಿ ಅತಿ ಹೆಚ್ಚು ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಅಂತಮ ಸ್ಥಾನವನ್ನು ಪಡೆದು ಹೊರಬಿದ್ದಿತ್ತು. ಆಡಿದ ಮೊದಲ 8 ಪಂದ್ಯಗಳಲ್ಲಿ ಸತತವಾಗಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ 9ನೇ ಪಂದ್ಯದಲ್ಲಿ ಮೊದಲ ಗೆಲುವು ಸಾಧಿಸಿತ್ತು. ಒಟ್ಟು 14 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೇವಲ 4 ಪಂದ್ಯಗಳಲ್ಲಿ ಮಾತ್ರವೇ ಗೆದ್ದಿದ್ದು ಉಳಿದ 10 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

ಐದು ಬಾರಿಯ ಚಾಂಪಿಯನ್ ತಂಡ ಎಂಐ
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಈವರೆಗೆ 5 ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದೆ. ಈ ಬಾರಿಯ ಪ್ರದರ್ಶನ ತಂಡದ ಅಭಿಮಾನಿಗಳಿಗೆ ಹಾಗೂ ಸ್ವತಃ ಆಟಗಾರಿಗೆ ಭಾರೀ ನಿರಾಸೆ ಮೂಡಿಸಿದೆ. ಇದು ಸ್ವತಃ ಸೂರ್ಯಕುಮಾರ್ ಆಡಿರುವ ಮಾತುಗಳಲ್ಲಿಯೂ ವ್ಯಕ್ತವಾಗಿದೆ.
ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ "ನಾವು 6ನೇ ಟ್ರೋಫಿಯನ್ನು ಗೆಲ್ಲೇಬೇಕಿದೆ. ಅದು ಈ ಬಾರಿಯ ಆವೃತ್ತಿಯಲ್ಲಿ ಸಾಧ್ಯವಾಗದೇ ಇರುವುದು ದುರದೃಷ್ಟಕರ ಸಂಗತಿ. ಮುಂದಿನ ವರ್ಷ ನಾವು ನಮ್ಮ ಟ್ರೋಫಿಗಳ ಪಟ್ಟಿಗೆ ಮತ್ತೊಂದು ಟ್ರೋಫಿಯನ್ನು ಸೇರ್ಪಡೆಗೊಳಿಸಲೇಬೇಕಿದೆ" ಎಂದಿದ್ದಾರೆ ಸೂರ್ಯಕುಮಾರ್ ಯಾದವ್.

ಉತ್ತಮ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್
ಸೂರ್ಯಕುಮಾರ್ ಯಾದವ್ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚುವಲ್ಲಿ ಯಶಸ್ವಿಯಾಗಿದ್ದಾರೆ. ತಂಡದ ಕೆಲ ಪ್ರಮುಖ ಆಟಗಾರರು ವಿಫಲವಾದರು ಕೂಡ ಸೂರ್ಯಕುಮಾರ್ ಯಾದವ್ ಬ್ಯಾಟ್‌ನಿಂದ ಸರಾಗವಾಗಿ ರನ್ ಹರಿದು ಬಂದಿತ್ತು. ಆರಂಭಿಕ ಹಾಗೂ ಅಂತಿಮ ಕೆಲ ಪಂದ್ಯಗಳಲ್ಲಿ ಸೂರ್ಯಕುಮಾರ್ ಗಾಯದ ಕಾರಣದಿಂದಾಗಿ ಹೊರಗುಳಿದಿದ್ದರು.

ಪ್ರಮುಖ ಆಟಗಾರರ ವೈಫಲ್ಯ
ಇನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಯುವ ಆಟಗಾರ ಇಶಾನ್ ಕಿಶನ್, ಅನುಭವಿ ಆಲ್‌ರೌಂಡರ್ ಕಿರಾನ್ ಪೊಲಾರ್ಡ್ ಈ ಬಾರಿಯ ಆವೃತ್ತಿಯಲ್ಲಿ ಅಭಿಮಾಣಿಗಳ ನಿರೀಕ್ಷೆಗೆ ತಕ್ಕಂತೆ ಪ್ರರ್ಶನ ನೀಡಲು ವಿಫಲವಾದರು. ಜಸ್ಪ್ರೀತ್ ಬೂಮ್ರಾ ಕೂಡ ನಿರ್ಣಾಯಕ ಘಟ್ಟದಲ್ಲಿ ವಿಕೆಟ್ ಪಡೆದು ಎದುರಾಳಿಗಳ ಮೇಲೆ ಒತ್ತಡ ಹೇರಲು ವಿಫಲವಾದರು. ಇದೆಲ್ಲವೂ ಈ ಬಾರಿಯ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹಿನ್ನಡೆಗೆ ಕಾರಣವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications