Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Most sixes record: ಜೋಸ್ ಬಟ್ಲರ್ ದಾಖಲೆ ಉಡೀಸ್ ಮಾಡಿದ ಸೂರ್ಯಕುಮಾರ್ ಯಾದವ್

ಬಾಂಗ್ಲಾದೇಶ ವಿರುದ್ಧ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಮೊದಲ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಸೂರ್ಯಕುಮಾರ್ ಯಾದವ್ ಕೂಡ ಬಿರುಸಿನ ಬ್ಯಾಟಿಂಗ್ ಮೂಲಕ ಬಾಂಗ್ಲಾದೇಶ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದು, ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಗ್ವಾಲಿಯರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ 207.14 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 29 ರನ್ ಗಳಿಸಿದ್ದರು. ಈ ಇನ್ನಿಂಗ್ಸ್ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಹೊಸ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ಏಕದಿನ ಮತ್ತು ಟಿ20 ನಾಯಕ ಜೋಸ್ ಬಟ್ಲರ್ ದಾಖಲೆಯನ್ನು ಸೂರ್ಯಕುಮಾರ್ ಮುರಿದ್ದಾರೆ.

Suryakumar Yadav overtakes Jos Buttler record in T20 International cricket

ಬಾಂಗ್ಲಾದೇಶ ವಿರುದ್ಧ 3 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಜೋಸ್ ಬಟ್ಲರ್ ಅವರನ್ನು ಸೂರ್ಯಕುಮಾರ್ ಯಾದವ್ ಹಿಂದಿಕ್ಕಿದ್ದಾರೆ. ಅವರು ಈಗ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟರ್ ಆಗಿದ್ದಾರೆ. ಸ್ಕೈ ಖ್ಯಾತಿಯ ಸೂರ್ಯಕುಮಾರ್ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 139 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಜೋಸ್ ಬಟ್ಲರ್‌ 137 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದಾಖಲೆಯನ್ನು ರೋಹಿತ್ ಶರ್ಮಾ (205) ಹೊಂದಿದ್ದಾರೆ. ಆದರೆ, ಅವರು ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ರೋಹಿತ್ ಶರ್ಮಾ ಹೊರತುಪಡಿಸಿ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದಿರುವ ಬ್ಯಾಟರ್‌ಗಳು ಇಡೀ ಜಗತ್ತಿನಲ್ಲಿ ಇಲ್ಲ. ರೋಹಿತ್ ಶರ್ಮಾ ನಂತರ, ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ 173 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಟಾಪ್-5 ಬ್ಯಾಟರ್‌ಗಳು

  • ರೋಹಿತ್ ಶರ್ಮಾ (ಭಾರತ) - 205 ಸಿಕ್ಸರ್‌ಗಳು
  • ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 173 ಸಿಕ್ಸರ್‌ಗಳು
  • ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್) - 144 ಸಿಕ್ಸರ್‌ಗಳು
  • ಸೂರ್ಯಕುಮಾರ್ ಯಾದವ್ (ಭಾರತ) - 139 ಸಿಕ್ಸರ್‌ಗಳು
  • ಜೋಸ್ ಬಟ್ಲರ್ (ಇಂಗ್ಲೆಂಡ್) - 137 ಸಿಕ್ಸರ್‌ಗಳು

ಭಾರತ ತಂಡದ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬಾಂಗ್ಲಾದೇಶವನ್ನು ಬ್ಯಾಟಿಂಗ್ ಆಹ್ವಾನಿಸಿದರು. ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ 128 ರನ್‌ಗಳ ಟಾರ್ಗೆಟ್‌ ನೀಡಿತ್ತು. ಈ ಗುರಿ ಬೆನ್ನತ್ತಿದ ಭಾರತ, 8.1 ಓವರ್‌ಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು. ಹಾರ್ದಿಕ್ ಪಾಂಡ್ಯ (39) ಮತ್ತು ನಿತೀಶ್ ಕುಮಾರ್ ರೆಡ್ಡಿ (16) ಅಜೇಯರಾಗಿ ಉಳಿದರು. ಈ ಜೋಡಿ ನಾಲ್ಕನೇ ವಿಕೆಟ್‌ಗೆ 24 ಎಸೆತಗಳಲ್ಲಿ 52 ರನ್‌ಗಳ ಅದ್ಭುತ ಜೊತೆಯಾಟ ಆಡಿ ತಂಡದ ಗೆಲುವಿಗೆ ಕಾರಣರಾದರು.

Story first published: Monday, October 7, 2024, 12:46 [IST]
Other articles published on Oct 7, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+