ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC T20 Ranking: ಅಗ್ರಸ್ಥಾನದಲ್ಲಿ ಉಳಿದ ಸೂರ್ಯ, ಭಾರಿ ಜಿಗಿತ ಕಂಡ ಅಲೆಕ್ಸ್ ಹೇಲ್ಸ್

 Suryakumar Yadav Remains In Top 1, Know About The Latest ICC T20 Ranking List

ಭಾರತದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ನಂಬರ್ 1 ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಐಸಿಸಿ ಪುರುಷರ ಟಿ20 ನೂತನ ರ್‍ಯಾಂಕಿಂಗ್ ಪಟ್ಟಿ ಬುಧವಾರ ಬಿಡುಗಡೆಯಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ ಬಳಿಕ ಸೂರ್ಯಕುಮಾರ್ ತಮ್ಮ ಅಗ್ರಸ್ಥಾನವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸೂಪರ್ 12 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಮೂರು ಅರ್ಧಶತಕಗಳನ್ನು ಸಿಡಿಸುವ ಮೂಲಕ ಸೂರ್ಯ ಅಗ್ರಸ್ಥಾನಕ್ಕೇರಿದ್ದರು.

ಸೂಪರ್ 12 ಪಂದ್ಯಗಳ ವೇಳೆ ಮೂರು ಅರ್ಧಶತಕ ಸಿಡಿಸಿದ್ದ ಸೂರ್ಯಕುಮಾರ್ 869 ಅಂಕಗಳನ್ನು ಪಡೆಯುವ ಮೂಲಕ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದರು. ಸೆಮಿಫೈನಲ್‌ನಲ್ಲಿ 14 ರನ್‌ ಗಳಿಸಿ ಔಟಾದ ನಂತರ ಅವರು 10 ಅಂಕಗಳನ್ನು ಕಳೆದುಕೊಂಡು 859ಕ್ಕೆ ಬಂದರು ಕೂಡ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ 6 ಪಂದ್ಯಗಳಿಂದ 59.75 ಸರಾಸರಿ ಮತ್ತು 189.68 ಸ್ಟ್ರೈಕ್‌ರೇಟ್‌ನಲ್ಲಿ 239 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದರು. ಮಾತ್ರವಲ್ಲದೆ 2022 ಕ್ಯಾಲೆಂಡರ್ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಲೆಕ್ಸ್ ರ್‍ಯಾಂಕಿಂಗ್‌ನಲ್ಲಿ ಭರ್ಜರಿ ಏರಿಕೆ

ಅಲೆಕ್ಸ್ ರ್‍ಯಾಂಕಿಂಗ್‌ನಲ್ಲಿ ಭರ್ಜರಿ ಏರಿಕೆ

ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ 47 ಎಸೆತಗಳಲ್ಲಿ ಅಜೇಯ 86 ರನ್ ಗಳಿಸಿದ್ದ ಇಂಗ್ಲೆಂಡ್ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ 22 ಸ್ಥಾನಗಳ ಜಿಗಿತ ಕಂಡು 12ನೇ ರ್‍ಯಾಂಕಿಂಗ್‌ನಲ್ಲಿದ್ದಾರೆ. ಹೇಲ್ಸ್ ಇಂಗ್ಲೆಂಡ್ ಪರವಾಗಿ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. 42.40 ಸರಾಸರಿಯಲ್ಲಿ 212 ರನ್ ಗಳಿಸಿದ್ದಾರೆ.

ಹೇಲ್ಸ್ ಇಂಗ್ಲೆಂಡ್ ಟಿ20 ತಂಡಕ್ಕೆ ವಾಪಾಸ್ ಆದಾಗಿನಿಂದ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 2022ರಲ್ಲಿ ಅವರು, 30.71 ಸರಾಸರಿ ಮತ್ತು 145.27 ಸ್ಟ್ರೈಕ್‌ರೇಟ್‌ನಲ್ಲಿ 430 ರನ್ ಗಳಿಸಿದ್ದಾರೆ.

ದಿನೇಶ್ ಕಾರ್ತಿಕ್‌ ಅದ್ಭುತ ಆಟಗಾರ, ಅವಕಾಶದ ಬಾಗಿಲು ಮುಚ್ಚಿಲ್ಲ, ತೆರೆದಿದೆ: ಆಯ್ಕೆ ಸಮಿತಿ ಅಧ್ಯಕ್ಷ

ರ್‍ಯಾಂಕಿಂಗ್‌ನಲ್ಲಿ ಬಡ್ತಿ ಪಡೆದವರು

ರ್‍ಯಾಂಕಿಂಗ್‌ನಲ್ಲಿ ಬಡ್ತಿ ಪಡೆದವರು

ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಕೂಡ ರ್‍ಯಾಂಕಿಂಗ್‌ನಲ್ಲಿ ಸುಧಾರಣೆ ಕಂಡಿದ್ದಾರೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅರ್ಧಶತಕ ಗಳಿಸಿದ ನಂತರ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಿಲೀ ರೊಸೊವ್ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಅಮೋಘ ಶತಕ ದಾಖಲಿಸಿದ ನಂತರ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲೆಂಡ್‌ನ ಗ್ಲೆನ್‌ ಫಿಲಿಪ್ಸ್ 8ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಸೂರ್ಯಕುಮಾರ್ ಯಾದವ್, ಬಾಬರ್ ಅಜಮ್ ಹೊರತು ಪಡಿಸಿ ಮೊಹಮ್ಮದ್ ರಿಜ್ವಾನ್, ಡಿವೋನ್ ಕಾನ್ವೆ ಮತ್ತು ಐಡೆನ್ ಮಾರ್ಕ್ರಮ್ ಅಗ್ರ ಐದು ಸ್ಥಾನಗಳಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಅರ್ಧಶತಕ ಗಳಿಸಿದ ರಿಜ್ವಾನ್ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಸ್ಯಾಮ್ ಕರನ್, ರಶೀದ್‌ ರ್‍ಯಾಂಕಿಂಗ್‌ನಲ್ಲಿ ಬಡ್ತಿ

ಸ್ಯಾಮ್ ಕರನ್, ರಶೀದ್‌ ರ್‍ಯಾಂಕಿಂಗ್‌ನಲ್ಲಿ ಬಡ್ತಿ

ಪಾಕಿಸ್ತಾನದ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಎರಡು ಪ್ರಮುಖ ವಿಕೆಟ್ ಪಡೆದು ಪಂದ್ಯದ ಗತಿಯನ್ನು ಬದಲಾಯಿಸಿದ್ದ ಇಂಗ್ಲೆಂಡ್‌ನ ಸ್ಪಿನ್ನರ್ ಆದಿಲ್ ರಶೀದ್ ರ್‍ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ರಶೀದ್ ಭಾರತದ ವಿರುದ್ಧದ ಸೆಮಿಫೈನಲ್‌ನಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದುಕೊಂಡಿದ್ದರು. 5 ಸ್ಥಾನಗಳನ್ನು ಏರಿಕೆ ಕಂಡಿದ್ದು 3ನೇ ಸ್ಥಾನ ಪಡೆದುಕೊಂಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಮ್ಯಾನ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದ ಸ್ಯಾಮ್ ಕರನ್ ಎರಡು ಸ್ಥಾನಗಳ ಏರಿಕೆ ಕಂಡಿದ್ದು ಅಗ್ರ 5ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ 12 ರನ್ ನೀಡಿ 3 ವಿಕೆಟ್ ಪಡೆದುಕೊಂಡಿದ್ದರು. ವನಿಂದು ಹಸರಂಗ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ರಶೀದ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ಶಕೀಬ್ ಅಲ್ ಹಸನ್, ಮೊಹಮ್ಮದ್ ನಬಿ ಮತ್ತು ಹಾರ್ದಿಕ್ ಪಾಂಡ್ಯ ಅಗ್ರ ಮೂರು ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

Story first published: Wednesday, November 16, 2022, 16:24 [IST]
Other articles published on Nov 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X