For Quick Alerts
ALLOW NOTIFICATIONS  
For Daily Alerts
 

ವಿಶೇಷ ಕ್ಲಬ್‌ ಸೇರುವ ಕನಸಿನಲ್ಲಿ ಸೂರ್ಯ

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಟಿ20 ವಿಶ್ವಕಪ್‌ ದೃಷ್ಟಿಯಿಂದ ಈ ಸರಣಿ ಮಹತ್ವ ಪಡೆದುಕೊಂಡಿದೆ. ಭಾರತ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಕಾಣುತ್ತಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ದೊಡ್ಡ ಸಾಧನೆಯನ್ನು ಮಾಡುವ ಕನಸಿನಲ್ಲಿದ್ದಾರೆ.

ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಮೈದಾನದಲ್ಲಿ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದಲೇ ಹೆಸರುವಾಸಿ. ಇವರು ತಮ್ಮ ಪವರ್ ಫುಲ್‌ ಹೊಡೆತಗಳ ಮೂಲಕ ರನ್‌ ವೇಗಕ್ಕೆ ಚುರುಕು ಮುಟ್ಟಿಸಿದ ಆಟಗಾರ. ಇವರು ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಕ್ಷಮತೆಯನ್ನು ಹೊಂದಿದ್ದಾರೆ. ಆದರೆ ಇವರು ಬ್ಯಾಟ್‌ ಕಳೆದ ಕೆಲವು ದಿನಗಳಿಂದ ಮೌನಕ್ಕೆ ಶರಣಾಗಿದೆ. ಟಿ20 ವಿಶ್ವಕಪ್‌ಗೂ ಮುನ್ನ ಸೂರ್ಯ ಲಯಕ್ಕೆ ಮರಳುವುದು ಅನಿವಾರ್ಯವಾಗಿದೆ. ಹೀಗಾಗಿ ಈ ಸರಣಿ ಅವರಿಗೂ ಮಹತ್ವದಾಗಿದೆ. ಅಲ್ಲದೆ ನಾಗ್ಪುರ ಪಂದ್ಯ ಸೂರ್ಯ ಪಾಲಿಗೆ ವಿಶೇಷವಾಗಿದೆ.

Suryakumar Yadav Set for 100th T20I Big Milestones Await Captain in Nagpur Opener vs New Zealand

ಟಿ20 ಕ್ರಿಕೆಟ್‌ನಲ್ಲಿ ಈಗಾಗಲೇ 99 ಪಂದ್ಯಗಳನ್ನು ಆಡಿರುವ ಸೂರ್ಯ, ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಮೈದಾನಕ್ಕೆ ಇಳಿಯುತ್ತಲೇ ದೊಡ್ಡ ದಾಖಲೆ ಬರೆಯಲಿದ್ದಾರೆ. ಇದು ಇವರಿಗೆ ವೃತ್ತಿ ಜೀವನದ 100ನೇ ಟಿ20 ಪಂದ್ಯವಾಗಿದೆ. ಅವರು ಭಾರತಕ್ಕಾಗಿ 100 ಟಿ20 ಪಂದ್ಯಗಳನ್ನು ಆಡಿದ ನಾಲ್ಕನೇ ಆಟಗಾರರಾಗಲಿದ್ದಾರೆ.

ವಿಶೇಷ ಕ್ಲಬ್‌ಗೆ ಸೂರ್ಯ ಎಂಟ್ರಿ

ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ. ಇವರು 159 ಪಂದ್ಯಗಳನ್ನು ಆಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಸೂಪರ್ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಇದ್ದು, ಇವರು 124 ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಇವರಿಬ್ಬರೂ ಈಗಾಗಲೇ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯಗೂ ಸ್ಥಾನ. ಇವರು ಸಹ ಭಾರತದ ಪರ 124 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ವಿಶೇಷ ಕ್ಲಬ್‌ ಸೇರಲು ಸೂರ್ಯ ತಯಾರಾಗಿದ್ದಾರೆ.

Suryakumar Yadav Set for 100th T20I Big Milestones Await Captain in Nagpur Opener vs New Zealand

ನ್ಯೂಜಿಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್‌ 5 ಸಿಕ್ಸರ್ ಬಾರಿಸಿದರೆ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ. ಇವರು ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಸಿಡಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಸೂರ್ಯ 346 ಟಿ20 ಪಂದ್ಯಗಳನ್ನು ಆಡಿದ್ದು 395 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಸರಣಿಯಲ್ಲಿ ಅವರು ದೊಡ್ಡ ಸಾಧನೆ ಮಾಡುವ ಪ್ಲ್ಯಾನ್ ಹೊಂದಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹೆಗ್ಗಳಿಕೆ ರೋಹಿತ್ ಶರ್ಮಾ ಅವರದ್ದಾಗಿದ್ದು, ಇವರು 547 ಸಿಕ್ಸರ್ ಬಾರಿಸಿದ್ದಾರೆ. ವಿರಾಟ್‌ ಕೊಹ್ಲಿ 435 ಸಿಕ್ಸರ್‌ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

Story first published: Wednesday, January 21, 2026, 9:04 [IST]
Other articles published on Jan 21, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+