ಸೂರ್ಯಕುಮಾರ್ ಯಾದವ್ ವಿಶೇಷ ಕ್ಲಬ್ ಸೇರಲು ಒಂದು ಹೆಜ್ಜೆ ದೂರ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ಈ ವೇಳೆ ಭಾರತ ಸಂಘಟಿತ ಆಟ ಆಡಿದ್ದು, ಫೈನಲ್‌ಗೆ ಅರ್ಹತೆ ಪಡೆದಿದೆ. ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. ಈ ಬಿಗ್ ಫೈಟ್‌ಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ವೇದಿಕೆ ಕಲ್ಪಿಸಲಿದೆ. ಈ ಪಂದ್ಯದ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ವಿಶೇಷ ಸಾಧನೆ ಮಾಡುವ ಕನಸಿನಲ್ಲಿದ್ದಾರೆ. ಈ ದಾಖಲೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.
ಈ ಬಾರಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾ ಆಯೋಜಿಸುತ್ತಿದೆ. ಈ ಟೂರ್ನಿಯನ್ನು ಗೆಲ್ಲುವ ಹಾಟ್ ಫೆವರೀಟ್ ತಂಡಗಳಲ್ಲಿ ಭಾರತ ಸಹ ಒಂದು. ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ಒಂದೇ ಒಂದು ಸೋಲು ಕಾಣದ ಭಾರತ, ಸೂಪರ್ 8 ಹಂತಕ್ಕೆ ಬಂದಾಗ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿತು. ಬಳಿಕ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ಹಂತ ತಲುಪುವ ಬಗ್ಗೆ ಲೆಕ್ಕಾಚಾರ ಆರಂಭವಾದವು.

ಭಾರತ ಸೂಪರ್ 8 ಹಂತದ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಮಣಿಸಿ ಸೆಮಿಫೈನಲ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿತು. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಟೀಮ್ ಇಂಡಿಯಾ ಅಬ್ಬರದ ಪ್ರದರ್ಶನ ನೀಡಿ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿತು. ಈ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸಿತು. ಉಪಾಂತ್ಯ ಪಂದ್ಯದಲ್ಲಿ ಭಾರತ 7 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಅಂಗಳದಲ್ಲಿ ಮಣಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ.
ವಿಶೇಷ ಸಾಧನೆಯ ಹೊಸ್ತಿಲಲ್ಲಿ ಸೂರ್ಯ
ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದಲ್ಲಿ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆ ಭಾರತ ತಂಡದ್ದಾಗಲಿದೆ. ಈ ಮೂಲಕ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಸಹ ದೊಡ್ಡ ಸಾಧನೆ ಮಾಡಲಿದ್ದಾರೆ. ಅಲ್ಲದೆ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಲಿದ್ದಾರೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಟ್ರೋಫಿ ಗೆದ್ದ ನಾಯಕರ ಪಟ್ಟಿಯಲ್ಲಿ ಸೂರ್ಯಕುಮಾರ್ ಸ್ಥಾನ ಪಡೆಯಲು, ಇನ್ನು ಒಂದು ಹೆಜ್ಜೆ ದೂರ ನಿಂತಿದ್ದಾರೆ. ಸೂರ್ಯ ಈ ಸಾಧನೆ ಮಾಡಿದಲ್ಲಿ ವಿಶೇಷ ಕ್ಲಬ್‌ಗೆ ಎಂಟ್ರಿ ಪಡೆಯಲಿದ್ದಾರೆ. ಭಾರತದ ಪರ ಟಿ20 ವಿಶ್ವಕಪ್ ಗೆದ್ದ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ ಅವರ ವಿಶೇಷ ಕ್ಲಬ್‌ಗೆ ಸೂರ್ಯ ಸೇರಿಕೊಳ್ಳಬಹುದು. ಈ ಸಾಧನೆ ಭಾನುವಾರ ಟೀಮ್ ಇಂಡಿಯಾ ನಾಯಕ ಮಾಡುತ್ತಾರಾ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸಲಿ ಎಂಬುದೇ ಕೋಟ್ಯಾಂತರ ಅಭಿಮಾನಿಗಳ ಆಶಯ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications